ದಿಲ್ಲಿ ಗಲಭೆಗೆ ಸಂಬಂಧಿಸಿದ ಯುಎಪಿಎ ಪ್ರಕರಣ: ಉಮರ್ ಖಾಲಿದ್, ಶಾರ್ಜೀಲ್ ಇಮಾಮ್ ಸಹಿತ 9 ಮಂದಿಯ ಜಾಮೀನು ಅರ್ಜಿ ತಿರಸ್ಕರಿಸಿದ ದಿಲ್ಲಿ ಹೈಕೋರ್ಟ್

ಉಮರ್ ಖಾಲಿದ್, ಶಾರ್ಜೀಲ್ ಇಮಾಮ್ (Photo credit: thenewsminute.com)
ಹೊಸದಿಲ್ಲಿ: 2020ರ ದಿಲ್ಲಿ ಗಲಭೆಗೆ ಸಂಬಂಧಿಸಿದ ಯುಎಪಿಎ ಪ್ರಕರಣದಲ್ಲಿ ಬಂಧಿತ ಉಮರ್ ಖಾಲಿದ್, ಶಾರ್ಜೀಲ್ ಇಮಾಮ್ ಮತ್ತು ಇತರ ಏಳು ಆರೋಪಿಗಳು ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ದಿಲ್ಲಿ ಹೈಕೋರ್ಟ್ ವಜಾಗೊಳಿಸಿದೆ.
ನ್ಯಾಯಮೂರ್ತಿ ನವೀನ್ ಚಾವ್ಲಾ ಮತ್ತು ನ್ಯಾಯಮೂರ್ತಿ ಶಾಲಿಂದರ್ ಕೌರ್ ಅವರ ವಿಭಾಗೀಯ ಪೀಠವು ಯುಎಪಿಎ ಜಾಮೀನು ಅರ್ಜಿಯನ್ನು ವಜಾಗೊಳಿಸಿದೆ.
ಜಾಮೀನು ನಿರಾಕರಿಸಿದ ವಿಚಾರಣಾ ನ್ಯಾಯಾಲಯದ ತೀರ್ಪನ್ನು ಪ್ರಶ್ನಿಸಿ ಉಮರ್ ಖಾಲಿದ್, ಶಾರ್ಜೀಲ್ ಇಮಾಮ್, ಅಥರ್ ಖಾನ್, ಖಾಲಿದ್ ಸೈಫಿ, ಮುಹಮ್ಮದ್ ಸಲೀಂ ಖಾನ್, ಶಿಫಾ ಉರ್ ರೆಹಮಾನ್, ಮೀರನ್ ಹೈದರ್, ಗುಲ್ಫಿಶಾ ಫಾತಿಮಾ ಮತ್ತು ಶಾದಾಬ್ ಅಹ್ಮದ್ ಅವರು ದಿಲ್ಲಿ ಹೈಕೋರ್ಟ್ ಮೊರೆ ಹೋಗಿದ್ದರು.
Next Story





