ಬ್ಯಾಂಕ್ಗಳ ವಿಲೀನದ ಬಗ್ಗೆ ಸರಕಾರದ ಮುಂದೆ ಯಾವುದೇ ಪ್ರಸ್ತಾಪವಿಲ್ಲ: ಲೋಕಸಭೆಗೆ ಮಾಹಿತಿ ನೀಡಿದ ಕೇಂದ್ರ ಸರಕಾರ

ಕೇಂದ್ರ ಹಣಕಾಸು ಖಾತೆ ರಾಜ್ಯ ಸಚಿವ ಪಂಕಜ್ ಚೌಧರಿ | Photo Credit : ANI
ಹೊಸದಿಲ್ಲಿ: ಸರಕಾರಿ ಸ್ವಾಮ್ಯದ ಬ್ಯಾಂಕ್ಗಳ ವಿಲೀನ ಅಥವಾ ಕ್ರೋಢೀಕರಣದ ಬಗ್ಗೆ ಪ್ರಸ್ತುತ ಸರಕಾರದ ಮುಂದೆ ಯಾವುದೇ ಪ್ರಸ್ತಾಪವಿಲ್ಲ ಎಂದು ಕೇಂದ್ರ ಸರಕಾರ ಸೋಮವಾರ ಸಂಸತ್ತಿಗೆ ತಿಳಿಸಿದೆ.
ಈ ಕುರಿತು ಲೋಕಸಭೆಗೆ ಲಿಖಿತ ಉತ್ತರ ನೀಡಿದ ಕೇಂದ್ರ ಹಣಕಾಸು ಖಾತೆ ರಾಜ್ಯ ಸಚಿವ ಪಂಕಜ್ ಚೌಧರಿ, ಪ್ರಸ್ತುತ ಸಾರ್ವಜನಿಕ ವಲಯದ ಬ್ಯಾಂಕ್ಗಳ (ಪಿಎಸ್ಬಿ) ವಿಲೀನ ಅಥವಾ ಕ್ರೋಢೀಕರಣದ ಬಗ್ಗೆ ಯಾವುದೇ ಪ್ರಸ್ತಾಪವು ಸರಕಾರದ ಪರಿಗಣನೆಯಲ್ಲಿಲ್ಲ ಎಂದು ತಿಳಿಸಿದ್ದಾರೆ.
ಮತ್ತೊಂದು ಪ್ರಶ್ನೆಗೆ ಉತ್ತರಿಸಿದ ಅವರು, 2019ರ ವಿದೇಶಿ ವಿನಿಮಯ ನಿರ್ವಹಣೆ ನಿಯಮಗಳ ಪ್ರಕಾರ, ಸಾರ್ವಜನಿಕ ವಲಯದ ಬ್ಯಾಂಕ್ಗಳಲ್ಲಿ ಮತ್ತು ಖಾಸಗಿ ವಲಯದ ಬ್ಯಾಂಕುಗಳಲ್ಲಿ ವಿದೇಶಿ ನೇರ ಹೂಡಿಕೆ (ಎಫ್ಡಿಐ) ಮಿತಿ ಕ್ರಮವಾಗಿ ಶೇ. 20 ಮತ್ತು ಶೇ. 74 ರಷ್ಟಿದೆ ಎಂದು ಹೇಳಿದರು.
Next Story





