Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ‘ಒಂದು ದೇಶ ಒಂದು ಚುನಾವಣೆ’ ಸಂವಿಧಾನ...

‘ಒಂದು ದೇಶ ಒಂದು ಚುನಾವಣೆ’ ಸಂವಿಧಾನ ಬಾಹಿರ: ಜೆಪಿಸಿಗೆ ಕಾನೂನು ಆಯೋಗದ ಮಾಜಿ ಅಧ್ಯಕ್ಷ ಶಾ ಹೇಳಿಕೆ

ವಾರ್ತಾಭಾರತಿವಾರ್ತಾಭಾರತಿ18 March 2025 8:15 PM IST
share
‘ಒಂದು ದೇಶ ಒಂದು ಚುನಾವಣೆ’ ಸಂವಿಧಾನ ಬಾಹಿರ: ಜೆಪಿಸಿಗೆ ಕಾನೂನು ಆಯೋಗದ ಮಾಜಿ ಅಧ್ಯಕ್ಷ ಶಾ ಹೇಳಿಕೆ

ಹೊಸದಿಲ್ಲಿ: ಕಾನೂನು ಆಯೋಗದ ಮಾಜಿ ಅಧ್ಯಕ್ಷ ಹಾಗೂ ದಿಲ್ಲಿ ಉಚ್ಚ ನ್ಯಾಯಾಲಯದ ಮಾಜಿ ಮುಖ್ಯ ನ್ಯಾಯಾಧೀಶ ಎ.ಪಿ. ಶಾ ಅವರು ಸೋಮವಾರ ‘ಒಂದು ದೇಶ ಒಂದು ಚುನಾವಣೆ(ಒಎನ್‌ಒಇ)’ ಮಸೂದೆಯನ್ನು ಪರಿಶೀಲಿಸುತ್ತಿರುವ ಜಂಟಿ ಸಂಸದೀಯ ಸಮಿತಿ(ಜೆಪಿಸಿ)ಯ ಮುಂದೆ ಹಾಜರಾಗಿ ಹೇಳಿಕೆ ನೀಡಿದ್ದಾರೆ. ಬಲ್ಲ ಮೂಲಗಳ ಪ್ರಕಾರ, ಸಮಿತಿಗೆ ಸಲ್ಲಿಸಿರುವ 12 ಪುಟಗಳ ಟಿಪ್ಪಣಿಯಲ್ಲಿ ಶಾ ಅವರು, ಪ್ರಸ್ತಾವಿತ ಶಾಸನವು ಸಂವಿಧಾನ ಬಾಹಿರವಾಗಿದ್ದು,ಪ್ರಜಾಪ್ರಭುತ್ವ ತತ್ವಗಳನ್ನು ಮತ್ತು ಒಕ್ಕೂಟ ರಚನೆಯನ್ನು ಉಲ್ಲಂಘಿಸುತ್ತದೆ ಎಂದು ಪ್ರತಿಪಾದಿಸಿದ್ದಾರೆ.

ಈ ನಡುವೆ ಸಮಿತಿಯ ಮುಂದೆ ಹಾಜರಾಗಿದ್ದ ಹಿರಿಯ ನ್ಯಾಯವಾದಿ ಹರೀಶ ಸಾಳ್ವೆಯವರು,ಪ್ರಸ್ತಾವಿತ ಕಾನೂನು ಸಾಂವಿಧಾನಿಕ ಅಗತ್ಯಗಳನ್ನು ಪೂರೈಸುತ್ತದೆ ಎಂದು ವಾದಿಸಿದರು.

ರಾಜ್ಯ ವಿಧಾನಸಭಾ ಚುನಾವಣೆಗಳನ್ನು ಮುಂದೂಡಲು ಶಿಫಾರಸು ಮಾಡುವ ಅಧಿಕಾರವನ್ನು ಚುನಾವಣಾ ಆಯೋಗಕ್ಕೆ ನೀಡಿರುವುದು ಸೇರಿದಂತೆ ಮಸೂದೆಯಲ್ಲಿನ ಹಲವಾರು ದೋಷಗಳನ್ನು ಶಾ ಎತ್ತಿ ತೋರಿಸಿದರು.

ಆದರೆ ಒಎನ್‌ಒಇ ಮಸೂದೆಗಳು ಸಂವಿಧಾನದ ಮೂಲ ರಚನೆ ಮತ್ತು ಒಕ್ಕೂಟ ತತ್ವಗಳಿಗೆ ವಿರುದ್ಧವಾಗಿವೆ ಎಂಬ ವಾದಗಳನ್ನು ಸಾಳ್ವೆ ತಿರಸ್ಕರಿಸಿದರು. ಮೂಲಗಳ ಪ್ರಕಾರ,ಡಿಎಂಕೆ ಸಂಸದ ಪಿ.ವಿಲ್ಸನ್ ಅವರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಾಳ್ವೆ,ಒಎನ್‌ಒಇ ಷರತ್ತುಬದ್ಧ ಶಾಸನವಾಗಿದೆ ಎನ್ನುವುದನ್ನು ಒಪ್ಪಿಕೊಂಡರು.

ಮಸೂದೆಗಳು ಜನರ ಮತದಾನದ ಹಕ್ಕುಗಳನ್ನು ನಿರ್ಬಂಧಿಸುವುದಿಲ್ಲ ಮತ್ತು ಉದ್ದೇಶಿತ ಕಾನೂನುಗಳ ಪೈಕಿ ಒಂದರಲ್ಲಿ ಪ್ರಸ್ತಾವಿಸಲಾಗಿರುವ ಸಾಂವಿಧಾನಿಕ ತಿದ್ದುಪಡಿಗಳು ಸಂವಿಧಾನದ ಮಿತಿಯೊಳಗೇ ಇವೆ ಎಂದು ಸಾಳ್ವೆ ಹೇಳಿದರು.

ಸುಮಾರು ಐದು ಗಂಟೆಗಳ ಕಾಲ ನಡೆದ ಸಭೆಯಲ್ಲಿ ಸಾಳ್ವೆ ಮತ್ತು ಶಾ ಅವರು ಬಿಜೆಪಿ ಸಂಸದ ಪಿ.ಪಿ.ಚೌಧರಿ ನೇತೃತ್ವದ ಜೆಪಿಸಿಯ ಸದಸ್ಯರಿಂದ ಪ್ರತ್ಯೇಕವಾಗಿ ಪ್ರಶ್ನೆಗಳನ್ನು ಎದುರಿಸಿದರು.

ಸಭೆಯು ಧನಾತ್ಮಕವಾಗಿತ್ತು ಎಂದು ಬಣ್ಣಿಸಿದ ಚೌಧರಿ,ಸಾಳ್ವೆ ಮತ್ತು ಶಾ ಅವರಿಗೆ ಪ್ರಶ್ನೆಗಳನ್ನು ಕೇಳಲು ಮತ್ತು ಅವರಿಂದ ಸ್ಪಷ್ಟೀಕರಣಗಳನ್ನು ಪಡೆದುಕೊಳ್ಳುವ ಅವಕಾಶವನ್ನು ಸದಸ್ಯರು ಹೊಂದಿದ್ದರು ಎಂದರು. ಸಾಳ್ವೆಯವರು ಸುಮಾರು ಮೂರು ಗಂಟೆಗಳನ್ನು ತೆಗೆದುಕೊಂಡರೆ ಶಾ ಅವರ ಬೈಠಕ್ ಎರಡು ಗಂಟೆಗಳ ಕಾಲ ನಡೆದಿತ್ತು ಎಂದು ಅವರು ತಿಳಿಸಿದರು.

ಏಕಕಾಲದಲ್ಲಿ ಲೋಕಸಭಾ ಮತ್ತು ರಾಜ್ಯ ವಿಧಾನಸಭೆಗಳ ಚುನಾವಣೆಗಳನ್ನು ನಡೆಸಲು ಶಿಫಾರಸು ಮಾಡಿರುವ ಮಾಜಿ ರಾಷ್ಟ್ರಪತಿ ರಾಮನಾಥ ಕೋವಿಂದ್ ನೇತೃತ್ವದ ಉನ್ನತ ಮಟ್ಟದ ಸಮಿತಿಯ ಸದಸ್ಯರಲ್ಲಿ ಸಾಳ್ವೆ ಕೂಡ ಒಬ್ಬರಾಗಿದ್ದಾರೆ. ಸಮಿತಿಯು ಅಭಿಪ್ರಾಯಗಳನ್ನು ಕೋರಿದ್ದ ಕಾನೂನು ತಜ್ಞರಲ್ಲಿ ಶಾ ಸೇರಿದ್ದು,ಅವರು ಒಎನ್‌ಒಎ ಪ್ರಸ್ತಾವಕ್ಕೆ ತನ್ನ ಅಸಮ್ಮತಿಯನ್ನು ವ್ಯಕ್ತಪಡಿಸಿದ್ದರು ಎನ್ನಲಾಗಿದೆ.

ಐದು ವರ್ಷಗಳ ಪೂರ್ಣ ಅವಧಿಗೆ ವಿಧಾನಸಭಾ ಚುನಾವಣೆಗಳನ್ನು ನಡೆಸಬೇಕು ಎಂದು ಶಾ ಸಮಿತಿಗೆ ತಿಳಿಸಿದ್ದಾರೆಂದು ಮೂಲಗಳು ಹೇಳಿವೆ. ಏಕಕಾಲಿಕ ಚುನಾವಣೆಗಳನ್ನು ನಡೆಸಲು ಕಾನೂನು ಅಧಿಸೂಚಿಸಲ್ಪಟ್ಟ ಬಳಿಕ ಎಲ್ಲ ರಾಜ್ಯ ವಿಧಾನಸಭೆಗಳ ಚುನಾವಣೆಗಳನ್ನು,ಅವುಗಳ ಉಳಿದಿರುವ ಅಧಿಕಾರಾವಧಿಯನ್ನು ಪರಿಗಣಿಸದೆ ಮುಂದಿನ ಸಂಸದೀಯ ಚುನಾವಣೆಯೊಂದಿಗೆ ನಡೆಸಲಾಗುವುದು ಎಂದು ಮಸೂದೆಯು ಪ್ರಸ್ತಾವಿಸಿದೆ.

ಏಕಕಾಲದಲ್ಲಿ ಚುನಾವಣೆಗಳನ್ನು ನಡೆಸುವುದರಿಂದ ಭಾರೀ ಪ್ರಮಾಣದಲ್ಲಿ ಸಾರ್ವಜನಿಕ ಹಣದ ಉಳಿತಾಯವಾಗುತ್ತದೆ ಎಂಬ ಅಭಿಪ್ರಾಯವನ್ನು ಶಾ ಬೆಂಬಲಿಸಲಿಲ್ಲ. ಮಸೂದೆಯಲ್ಲಿಯ ಪ್ರಸ್ತಾವಗಳಿಗೆ ಪರ್ಯಾಯ ಕುರಿತು ಕೇಳಿದಾಗ,ತಾನು ತನ್ನ ಅಭಿಪ್ರಾಯಗಳನ್ನು ನಂತರ ಸಮಿತಿಯೊಂದಿಗೆ ಹಂಚಿಕೊಳ್ಳುವುದಾಗಿ ತಿಳಿಸಿದರು ಎಂದು ಮೂಲಗಳು ಹೇಳಿವೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X