ಪ್ರಧಾನಿ ಮೋದಿ ಭಾಷಣದ ವೇಳೆ ಸಭಾತ್ಯಾಗ ಮಾಡಿದ ವಿರೋಧ ಪಕ್ಷಗಳು

ಹೊಸದಿಲ್ಲಿ: ಅವಿಶ್ವಾಸ ನಿರ್ಣಯದ ಕುರಿತು ಪ್ರಧಾನಿ ನರೇಂದ್ರ ಮೋದಿ ಉತ್ತರಿಸುವಾಗ ವಿರೋಧ ಪಕ್ಷಗಳು ಲೋಕಸಭೆಯಿಂದ ಸಭಾತ್ಯಾಗ ಮಾಡಿವೆ. ಇದಕ್ಕೆ ಪ್ರತಿಯಾಗಿ, “ಅವರು ನಮ್ಮನ್ನು ತೆಗಳುತ್ತಾರೆ. ಆದರೆ, ಅವರಿಗೆ ನಮ್ಮ ಮಾತನ್ನು ಕೇಳಿಸಿಕೊಳ್ಳುವ ವ್ಯವಧಾನವಿಲ್ಲ” ಎಂದು ಪ್ರಧಾನಿ ನರೇಂದ್ರ ಮೋದಿ ಟೀಕಿಸಿದ್ದಾರೆ.
“ವಿರೋಧ ಪಕ್ಷಗಳು ತಮ್ಮ ಮೈತ್ರಿಕೂಟದ ಹೆಸರನ್ನು INDIA ಎಂದು ಬದಲಾಯಿಸಿಕೊಂಡು, ತಾವೇ ದೇಶದ ಆಡಳಿತವನ್ನು ನಡೆಸುತ್ತಿದ್ದೇವೆ ಎಂದು ಭಾವಿಸಿಕೊಂಡಿವೆ. ಆದರೆ, ಇದು ದುರಹಂಕಾರದ ಪಕ್ಷಗಳ ಭ್ರಮೆಯಲ್ಲದೆ ಮತ್ತೇನಲ್ಲ” ಎಂದೂ ತಮ್ಮ ಭಾಷಣದ ವೇಳೆ ಪ್ರಧಾನಿ ಮೋದಿ ವಾಗ್ದಾಳಿ ನಡೆಸಿದ್ದಾರೆ.
Next Story





