ಪಹಲ್ಗಾಮ್ ಭಯೋತ್ಪಾದಕ ದಾಳಿ ಪ್ರಕರಣ : ಇಂದು ಎನ್ಐಎಯಿಂದ ಆರೋಪಪಟ್ಟಿ ಸಲ್ಲಿಕೆ ಸಾಧ್ಯತೆ

Photo Credit: The Hindu
ಹೊಸದಿಲ್ಲಿ: 26 ಜನರನ್ನು ಹತ್ಯೆ ಮಾಡಿದ ಪಹಲ್ಗಾಮ್ ಭಯೋತ್ಪಾದಕ ದಾಳಿ ಪ್ರಕರಣದಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಸೋಮವಾರ (ಡಿಸೆಂಬರ್ 15) ಆರೋಪಪಟ್ಟಿ ಸಲ್ಲಿಸಲಿದೆ ಎಂದು ಅಧಿಕಾರಿಗಳು ತಿಳಿಸಿರುವ ಬಗ್ಗೆ thehindu ವರದಿ ಮಾಡಿದೆ.
ಏಪ್ರಿಲ್ 22ರ ಪಹಲ್ಗಾಮ್ ಭಯೋತ್ಪಾದಕ ದಾಳಿಯಲ್ಲಿ ಮೂವರು ಭಯೋತ್ಪಾದಕರು ನೇರ ಭಾಗಿಯಾಗಿರುವುದು NIA ತನಿಖೆಯಲ್ಲಿ ಬಹಿರಂಗವಾಗಿದೆ ಎಂದು ವರದಿಯು ಉಲ್ಲೇಖಿಸಿದೆ.
ಎನ್ಐಎ ಅಧಿಕಾರಿಗಳು ಸೋಮವಾರ ಜಮ್ಮುವಿನ NIA ವಿಶೇಷ ನ್ಯಾಯಾಲಯದ ಮುಂದೆ ಆರೋಪಪಟ್ಟಿ ಸಲ್ಲಿಸಲಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಪಹಲ್ಗಾಮ್ ದಾಳಿಗೆ ಪ್ರತಿಯಾಗಿ, ಭಾರತೀಯ ಸಶಸ್ತ್ರ ಪಡೆಗಳು ಮೇ 7ರಂದು 'ಆಪರೇಷನ್ ಸಿಂಧೂರ್' ಕಾರ್ಯಾಚರಣೆ ಮೂಲಕ ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರದಲ್ಲಿರುವ ಭಯೋತ್ಪಾದಕರ ಅಡಗುತಾಣಗಳ ಮೇಲೆ ದಾಳಿ ನಡೆಸಿದ್ದವು.
Next Story





