ಪಾಕಿಸ್ತಾನದ ಸೇನಾ ಮುಖ್ಯಸ್ಥ ಜನರಲ್ ಅಸಿಮ್ ಮುನೀರ್ ಅವರಿಗೆ 'ಫೀಲ್ಡ್ ಮಾರ್ಷಲ್' ಗೌರವ

ಅಸಿಮ್ ಮುನೀರ್ | PC : indiatoday.in
ಇಸ್ಲಾಮಾಬಾದ್: ಸೇನಾ ಮುಖ್ಯಸ್ಥ ಜನರಲ್ ಅಸಿಮ್ ಮುನೀರ್ ಅವರಿಗೆ ಫೀಲ್ಡ್ ಮಾರ್ಷಲ್ ಹುದ್ದೆಗೆ ಬಡ್ತಿ ನೀಡುವ ಪ್ರಸ್ತಾಪವನ್ನು ಪಾಕಿಸ್ತಾನದ ಸಚಿವ ಸಂಪುಟ ಮಂಗಳವಾರ ಅನುಮೋದಿಸಿದೆ ಎಂದು ಪ್ರಧಾನಿ ಕಚೇರಿಯ ಹೇಳಿಕೆಯನ್ನು ಉಲ್ಲೇಖಿಸಿ ರಾಯಿಟರ್ಸ್ ವರದಿ ಮಾಡಿದೆ.
ಭಾರತ ಮತ್ತು ಪಾಕಿಸ್ತಾನ ಎರಡೂ ದೇಶಗಳ ನಡುವೆ ಉದ್ವಿಗ್ನತೆ ಹೆಚ್ಚಾದ ನಂತರ ಗುಂಡಿನ ದಾಳಿ ಮತ್ತು ಮಿಲಿಟರಿ ಕಾರ್ಯಾಚರಣೆಯ ಕೆಲವು ದಿನಗಳ ನಂತರ ಈ ಕ್ರಮ ಕೈಗೊಳ್ಳಲಾಗಿದೆ.
ಪ್ರಧಾನಿ ಶೆಹಬಾಝ್ ಷರೀಫ್ ಅಧ್ಯಕ್ಷತೆಯಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಭಾರತದೊಂದಿಗಿನ ಸಂಘರ್ಷದಲ್ಲಿ ಮುನೀರ್ ಅವರ ಪಾತ್ರಕ್ಕಾಗಿ ಅವರಿಗೆ ಬಡ್ತಿ ನೀಡಲಾಗಿದೆ ಎಂದು ಸರ್ಕಾರಿ ಸ್ವಾಮ್ಯದ ಟಿವಿ ಚಾನೆಲ್ ಪಿಟಿವಿ ವರದಿ ಮಾಡಿದೆ.
ಉಭಯ ದೇಶಗಳ ನಡುವಿನ ಉದ್ವಿಗ್ನತೆ ಹೆಚ್ಚುತ್ತಿದ್ದಂತೆ, ಪಾಕಿಸ್ತಾನ ಶಾಂತಿಯನ್ನು ಬಯಸುತ್ತಿದ್ದರೂ, ತಮ್ಮ ರಾಷ್ಟ್ರೀಯ ಪ್ರತಿಷ್ಠೆಯನ್ನು ರಕ್ಷಿಸಲು ಕ್ರಮ ಕೈಗೊಳ್ಳಲು ಹಿಂಜರಿಯುವುದಿಲ್ಲ ಎಂದು ಅಸಿಮ್ ಮುನೀರ್ ಘೋಷಿಸಿದ್ದರು.





