ಜಮ್ಮು-ಕಾಶ್ಮೀರದ ಎಲ್ಒಸಿಯಲ್ಲಿ ಪಾಕಿಸ್ತಾನದ ಪಡೆಗಳಿಂದ 10ನೇ ದಿನವೂ ಕದನ ವಿರಾಮ ಉಲ್ಲಂಘನೆ

PC : PTI
ಜಮ್ಮು: ಜಮ್ಮು ಮತ್ತು ಕಾಶ್ಮೀರದ ಗಡಿ ನಿಯಂತ್ರಣ ರೇಖೆಯ (ಎಲ್ಒಸಿ) ವಿವಿಧ ವಲಯಗಳಲ್ಲಿ ಪಾಕಿಸ್ತಾನದ ಪಡೆಗಳು ಕದನ ವಿರಾಮ ಉಲ್ಲಂಘಿಸಿ 10ನೇ ದಿನವೂ ಅಪ್ರಚೋದಿತ ಸಣ್ಣ ಶಸ್ತ್ರಾಸ್ತ್ರಗಳ ಗುಂಡಿನ ದಾಳಿಯನ್ನು ಮುಂದುವರೆಸಿದ್ದು, ಭಾರತೀಯ ಸೇನೆಯಿಂದ ಪರಿಣಾಮಕಾರಿ ಪ್ರತೀಕಾರ ನೀಡಿದೆ ಭಾರತೀಯ ಸೇನಾ ವಕ್ತಾರರು ರವಿವಾರ ತಿಳಿಸಿದ್ದಾರೆ.
ಶನಿವಾರ ಮತ್ತು ರವಿವಾರದ ಮಧ್ಯರಾತ್ರಿಯಲ್ಲಿ ಕೇಂದ್ರಾಡಳಿತ ಪ್ರದೇಶದ ಐದು ಜಿಲ್ಲೆಗಳಲ್ಲಿ ಹರಡಿರುವ ಎಂಟು ಸ್ಥಳಗಳಲ್ಲಿ ಪಾಕಿಸ್ತಾನದ ಕದನ ವಿರಾಮ ಉಲ್ಲಂಘನೆ ವರದಿಯಾಗಿದೆ ಆದರೆ ಯಾವುದೇ ಸಾವುನೋವು ಸಂಭವಿಸಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಏಪ್ರಿಲ್ 22 ರಂದು ಪಹಲ್ಗಾಮ್ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ 26 ಜನರು ಸಾವನ್ನಪ್ಪಿದ ನಂತರ, ಜಮ್ಮು ಮತ್ತು ಕಾಶ್ಮೀರದ ಗಡಿಯುದ್ದಕ್ಕೂ ಸತತ 10 ನೇ ಅಪ್ರಚೋದಿತ ಗುಂಡಿನ ದಾಳಿ ನಡೆದಿದೆ.
Next Story





