ಸತತ ಏಳನೇ ದಿನವೂ ಪಾಕಿಸ್ತಾನದಿಂದ ಕದನ ವಿರಾಮ ಉಲ್ಲಂಘನೆ; ಭಾರತೀಯ ಸೇನೆಯಿಂದ ಪ್ರತಿಕ್ರಿಯೆ

PTI File Photo
ಜಮ್ಮು: ಪಾಕಿಸ್ತಾನ ಸೇನೆಯು ಜಮ್ಮು ಮತ್ತು ಕಾಶ್ಮೀರದ ಮೂರು ಗಡಿ ಜಿಲ್ಲೆಗಳಾದ್ಯಂತ ಹಲವಾರು ವಲಯಗಳಲ್ಲಿ ಅಪ್ರಚೋದಿತ ಗುಂಡಿನ ದಾಳಿ ನಡೆಸುವ ಮೂಲಕ ನಿಯಂತ್ರಣ ರೇಖೆಯಲ್ಲಿ ಸತತ ಏಳನೇ ರಾತ್ರಿಯೂ ಕದನ ವಿರಾಮ ಉಲ್ಲಂಘನೆಯನ್ನು ಮುಂದುವರೆದಿದೆ. ಭಾರತೀಯ ಸೇನೆಯು ಅದಕ್ಕೆ ತಕ್ಕುದಾಗಿ ಪ್ರತಿಕ್ರಿಯಿಸಿದೆ ಎಂದು ಅಧಿಕಾರಿಗಳು ಗುರುವಾರ ತಿಳಿಸಿದ್ದಾರೆ.
ಏಪ್ರಿಲ್ 22 ರಂದು ಪಹಲ್ಗಾಮ್ ಭಯೋತ್ಪಾದಕ ದಾಳಿಯ ಕುರಿತು ಉಭಯ ದೇಶಗಳ ನಡುವೆ ಹೆಚ್ಚುತ್ತಿರುವ ಉದ್ವಿಗ್ನತೆಯ ನಡುವೆ ಭಾರತ ಮತ್ತು ಪಾಕಿಸ್ತಾನದ ಮಿಲಿಟರಿ ಕಾರ್ಯಾಚರಣೆಗಳ ಮಹಾನಿರ್ದೇಶಕರು (ಡಿಜಿಎಂಒಗಳು) ಮಂಗಳವಾರ ಹಾಟ್ಲೈನ್ನಲ್ಲಿ ಮಾತನಾಡಿದ್ದರೂ ಗುಂಡಿನ ಚಕಮಕಿ ನಡೆದಿದೆ.
“ಏಪ್ರಿಲ್ 30-ಮೇ 1, 2025 ರ ರಾತ್ರಿ, ಜಮ್ಮು ಮತ್ತು ಕಾಶ್ಮೀರದ ಕೇಂದ್ರಾಡಳಿತ ಪ್ರದೇಶದ ಕುಪ್ವಾರಾ, ಉರಿ ಮತ್ತು ಅಖ್ನೂರ್ ನ ಗಡಿ ನಿಯಂತ್ರಣ ರೇಖೆಯುದ್ದಕ್ಕೂ ಪಾಕಿಸ್ತಾನ ಸೇನಾ ಠಾಣೆಗಳು ಅಪ್ರಚೋದಿತ ಸಣ್ಣ ಶಸ್ತ್ರಾಸ್ತ್ರಗಳ ಗುಂಡಿನ ದಾಳಿಯನ್ನು ಪ್ರಾರಂಭಿಸಿದವು” ಎಂದು ಜಮ್ಮುವಿನ ರಕ್ಷಣಾ ವಕ್ತಾರರು ತಿಳಿಸಿದ್ದಾರೆ. ಭಾರತೀಯ ಸೇನಾ ಪಡೆಗಳು ಅದಕ್ಕೆ ತ್ವರಿತವಾಗಿ ಪ್ರತಿಕ್ರಿಯಿಸಿತು ಎಂದು ಅವರು ಹೇಳಿದರು.





