ದಿಲ್ಲಿ ಸಿಎಂ ಜೊತೆ ಸಂಪುಟ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿರುವ ಆರು ಮಂದಿ ಶಾಸಕರು

Photo | Hindustantimes
ಹೊಸದಿಲ್ಲಿ : ದಿಲ್ಲಿಯ ಮುಖ್ಯಮಂತ್ರಿಯಾಗಿ ರೇಖಾ ಗುಪ್ತಾ ಗುರುವಾರ ಪ್ರಮಾಣವಚನ ಸ್ವೀಕರಿಸಲಿದ್ದು, ಅವರ ಜೊತೆಗೆ ಸಂಪುಟ ಸಚಿವರಾಗಿ 6 ಮಂದಿ ಶಾಸಕರು ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂದು ತಿಳಿದು ಬಂದಿದೆ.
ಬಿಜೆಪಿ ಶಾಸಕರಾದ ಪರ್ವೇಶ್ ವರ್ಮಾ, ಮಂಜಿಂದರ್ ಸಿಂಗ್, ಕಪಿಲ್ ಮಿಶ್ರಾ, ಆಶಿಶ್ ಸೂದ್, ಪಂಕಜ್ ಕುಮಾರ್ ಸಿಂಗ್ ಮತ್ತು ರವೀಂದರ್ ಇಂದ್ರಜ್ ಸಿಂಗ್ ಸಂಪುಟ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
ದಿಲ್ಲಿಯ ರಾಮಲೀಲಾ ಮೈದಾನದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಯಾಗಿ ರೇಖಾ ಗುಪ್ತಾ ಗುರುವಾರ ಪ್ರಮಾಣವಚನ ಸ್ವೀಕರಿಸಲಿದ್ದು, ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಗಣ್ಯರು ಭಾಗವಹಿಸಲಿದ್ದಾರೆ.
Next Story





