ಪಾಟ್ನಾ: ಬಂದೂಕು ತೋರಿಸಿ ಮಹಿಳೆಯ ಸಾಮೂಹಿಕ ಅತ್ಯಾಚಾರ

ಸಾಂದರ್ಭಿಕ ಚಿತ್ರ
ಪಾಟ್ನಾ, ಸೆ. 5: ಪಾಟ್ನಾದ ಫತುಹ ಎಂಬಲ್ಲಿರುವ ರೈಲು ನಿಲ್ದಾಣದಿಂದ 22 ವರ್ಷದ ಮಹಿಳೆಯನ್ನು ಇಬ್ಬರು ವ್ಯಕ್ತಿಗಳು ಪಿಸ್ತೂಲ್ ತೋರಿಸಿ ಬೆದರಿಸಿ ಅಪಹರಿಸಿ ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ.
ಇಬ್ಬರೂ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಫತುಹ-1 ಪೊಲೀಸ್ ಠಾಣೆಯ ಅಧಿಕಾರಿಯೊಬ್ಬರು ತಿಳಿಸಿದರು.
‘‘ನಾನು ಮಂಗಳವಾರ ಫತುಹ ರೈಲು ನಿಲ್ದಾಣದಲ್ಲಿ ರೈಲಿಗಾಗಿ ಕಾಯುತ್ತಿದ್ದೆ. ಇಬ್ಬರು ವ್ಯಕ್ತಿಗಳು ಬಂದೂಕು ತೋರಿಸಿ ನನ್ನನ್ನು ಸಮೀಪದ ನಿರ್ಜನ ಸ್ಥಳಕ್ಕೆ ಕರೆದುಕೊಂಡು ಹೋಗಿ ಅತ್ಯಾಚಾರ ಮಾಡಿದರು. ನನಗೆ ಆ ಇಬ್ಬರು ಯಾರೆಂದು ಗೊತ್ತಿಲ್ಲ ಎಂದು ಮಹಿಳೆ ತನ್ನ ದೂರಿನಲ್ಲಿ ಹೇಳಿದ್ದಾರೆ’’ ಎಂದು ಪೊಲೀಸ್ ಅಧಿಕಾರಿ ತಿಳಿಸಿದರು.
ಒಬ್ಬ ಆರೋಪಿಯು ಇತರ 8 ಕ್ರಿಮಿನಲ್ ಪ್ರಕರಣಗಳಲ್ಲಿ ಪೊಲೀಸರಿಗೆ ಬೇಕಾದವನಾಗಿದ್ದಾನೆ.
Next Story





