ಸೋನಮ್ ವಾಂಗ್ಚುಕ್ ಬಂಧನ ಪ್ರಶ್ನಿಸಿ ಅರ್ಜಿ; ವಿಚಾರಣೆ ಜ. 7ಕ್ಕೆ ಮುಂದೂಡಿಕೆ

photo: PTI
ಹೊಸದಿಲ್ಲಿ, ಡಿ. 15: ರಾಷ್ಟ್ರೀಯ ಭದ್ರತಾ ಕಾಯ್ದೆ ಅಡಿಯಲ್ಲಿ ಸೋನಮ್ ವಾಂಗ್ಚುಕ್ ಅವರ ಬಂಧನ ಪ್ರಶ್ನಿಸಿ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸಲ್ಲಿಸಿದ ಅರ್ಜಿಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಸೋಮವಾರ ಜನವರಿ 7ಕ್ಕೆ ಮುಂದೂಡಿದೆ.
ಸೋನಮ್ ವಾಂಗ್ಚುಕ್ ಅವರನ್ನು ರಾಷ್ಟ್ರೀಯ ಭದ್ರತಾ ಕಾಯ್ದೆ ಅಡಿ ಸೆಪ್ಟಂಬರ್ 26ರಂದು ಬಂಧಿಸಲಾಗಿತ್ತು.
ಆಲಿಸಲು ಸಾಕಷ್ಟು ಸಮಯ ಇಲ್ಲದೇ ಇರುವುದರಿಂದ ನ್ಯಾಯಮೂರ್ತಿಗಳಾದ ಅರವಿಂದ್ ಕುಮಾರ್ ಹಾಗೂ ಎನ್.ವಿ. ಅಂಜಾರಿಯಾ ಅವರ ಪೀಠ ವಿಚಾರಣೆಯನ್ನು ಮುಂದೂಡಿತು.
ಸೋನಮ್ ವಾಂಗ್ಚುಕ್ ಅವರ ಬಂಧನ ಕಾನೂನು ಬಾಹಿರ ಹಾಗೂ ಅದು ಅವರ ಮೂಲಭೂತ ಹಕ್ಕುಗಳ ಉಲ್ಲಂಘನೆ ಎಂದು ಅರ್ಜಿಯಲ್ಲಿ ಪ್ರತಿಪಾದಿಸಲಾಗಿದೆ.
Next Story





