ಪಿಎಂ ಧನ-ಧಾನ್ಯ ಕೃಷಿ ಯೋಜನೆಗೆ ಕೇಂದ್ರ ಸಂಪುಟದ ಅನುಮೋದನೆ

PC : @PIB_India
ಹೊಸದಿಲ್ಲಿ,ಜು.16: ಬುಧವಾರ ನಡೆದ ಕೇಂದ್ರ ಸಂಪುಟದ ಸಭೆಯು ಆರು ವರ್ಷಗಳ ಅವಧಿಗೆ ಪ್ರಧಾನ ಮಂತ್ರಿ ಧನ-ಧಾನ್ಯ ಕೃಷಿ ಯೋಜನೆಗೆ ಅನುಮೋದನೆಯನ್ನು ನೀಡಿದೆ. ಯೋಜನೆಯು ವಾರ್ಷಿಕ 24,000 ಕೋ.ರೂ.ಗಳ ವೆಚ್ಚದೊಂದಿಗೆ 100 ಜಿಲ್ಲೆಗಳನ್ನು ಒಳಗೊಂಡಿದೆ.
ಕೇಂದ್ರ ಬಜೆಟ್ನಲ್ಲಿ ಘೋಷಿಸಲಾಗಿದ್ದ ಈ ಯೋಜನೆಯು ಅಸ್ತಿತ್ವದಲ್ಲಿರುವ 36 ಯೋಜನೆಗಳನ್ನು ವಿಲೀನಗೊಳಿಸಲಿದೆ ಹಾಗೂ ಬೆಳೆ ವೈವಿಧ್ಯೀಕರಣ ಮತ್ತು ಸುಸ್ಥಿರ ಕೃಷಿ ಪದ್ಧತಿಗಳ ಅಳವಡಿಕೆಯನ್ನು ಹೆಚ್ಚಿಸಲಿದೆ.
ಸಂಪುಟ ಸಭೆಯ ಬಳಿಕ ಸುದ್ದಿಗಾರರೊಂದಿಗೆ ವಿವರಗಳನ್ನು ಹಂಚಿಕೊಂಡ ಮಾಹಿತಿ ಮತ್ತು ಪ್ರಸಾರ ಸಚಿವ ಅಶ್ವಿನಿ ವೈಷ್ಣವ ಅವರು, ಪಿಎಂ ಧನ-ಧಾನ್ಯ ಕೃಷಿ ಯೋಜನೆಯು ಸುಗ್ಗಿಯ ನಂತರದ ಸಂಗ್ರಹಣೆಯನ್ನು ಹೆಚ್ಚಿಸುತ್ತದೆ. ನೀರಾವರಿ ಸೌಲಭ್ಯಗಳಲ್ಲಿ ಸುಧಾರಣೆಯನ್ನು ತರುತ್ತದೆ ಮತ್ತು ಕೃಷಿ ಉತ್ಪಾದಕತೆಯನ್ನು ಹೆಚ್ಚಿಸುತ್ತದೆ ಎಂದು ತಿಳಿಸಿದರು.
ಯೋಜನೆಯು 1.7 ಕೋಟಿ ರೈತರಿಗೆ ನೆರವಾಗುವ ನಿರೀಕ್ಷೆಯಿದೆ.
Next Story





