ಕಾಶ್ಮೀರದಲ್ಲಿ ಶಾಂತಿ ಸ್ಥಾಪಿಸಿದ ಕೀರ್ತಿ ಮೋದಿಗೆ ಸಲ್ಲಬೇಕು: ಸೇನೆ, ಪ್ರಧಾನಿಗೆ ಧನ್ಯವಾದ ತಿಳಿಸಿದ ಶೆಹ್ಲಾ ರಶೀದ್
ಭಾರತೀಯರಾಗಿ ನಾವು ಎಷ್ಟು ಅದೃಷ್ಟವಂತರು: ಇಸ್ರೇಲ್-ಹಮಾಸ್ ಸಂಘರ್ಷಕ್ಕೆ ಮಾಜಿ ವಿದ್ಯಾರ್ಥಿ ನಾಯಕಿ ಪ್ರತಿಕ್ರಿಯೆ

File Photo/PTI
ಹೊಸದಿಲ್ಲಿ: ಗಾಝಾದಲ್ಲಿ ಇಸ್ರೇಲ್ ಮತ್ತು ಹಮಾಸ್ ನಡುವಿನ ಸಂಘರ್ಷದ ನಡುವೆ, ಜೆಎನ್ಯು ವಿದ್ಯಾರ್ಥಿ ಸಂಘದ ಮಾಜಿ ನಾಯಕಿ, ಸಾಮಾಜಿಕ ಹೋರಾಟಗಾರ್ತಿ ಶೆಹ್ಲಾ ರಶೀದ್ ಅವರು, ಭಾರತೀಯ ಸೇನೆ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಧನ್ಯವಾದಗಳನ್ನು ಸಲ್ಲಿಸಿದ್ದು, ಕಾಶ್ಮೀರದಲ್ಲಿ ಶಾಂತಿ ಸ್ಥಾಪನೆಗಾಗಿ ಭಾರತೀಯ ಸೇನೆ ಅಪಾರ ತ್ಯಾಗ ಮಾಡಿದೆ ಎಂದಿದ್ದಾರೆ.
"ಮಧ್ಯಪ್ರಾಚ್ಯದಲ್ಲಿನ ಘಟನೆಗಳನ್ನು ನೋಡಿದಾಗ, ಭಾರತೀಯರಾಗಿ ನಾವು ಎಷ್ಟು ಅದೃಷ್ಟವಂತರು ಎಂದು ನಾನು ಭಾವಿಸುತ್ತಿದ್ದೇನೆ. ಭಾರತೀಯ ಸೇನೆ ಮತ್ತು ಭದ್ರತಾ ಪಡೆಗಳು ನಮ್ಮ ಸುರಕ್ಷತೆಗಾಗಿ ತಮ್ಮ ಎಲ್ಲವನ್ನೂ ತ್ಯಾಗಮಾಡಿವೆ. ಕಾಶ್ಮೀರದಲ್ಲಿ ಶಾಂತಿ ತಂದ ಕೀರ್ತಿ ಪ್ರಧಾನಿ ನರೇಂದ್ರ ಮೋದಿ, ಅಮಿತ್ ಶಾ, ಜಮ್ಮು& ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಹಾಗೂ ಭಾರತೀಯ ಸೇನೆಗೆ ಸಲ್ಲಬೇಕು " ಎಂದು ಶೆಹ್ಲಾ ರಶೀದ್ ಟ್ವೀಟ್ ಮಾಡಿದ್ದಾರೆ.
“ಮಧ್ಯಪ್ರಾಚ್ಯ ಬಿಕ್ಕಟ್ಟು ತೋರಿಸಿದಂತೆ ಭದ್ರತೆಯಿಲ್ಲದೆ ಶಾಂತಿ ಅಸಾಧ್ಯ. ಭಾರತೀಯ ಸೇನೆ, ಸಿಆರ್ಪಿಎಫ್ ಮತ್ತು ಜಮ್ಮು ಕಾಶ್ಮೀರದ ಪೊಲೀಸ್ ಇಲಾಖೆಯ ಕೆಚ್ಚೆದೆಯ ಸಿಬ್ಬಂದಿ ಕಾಶ್ಮೀರದಲ್ಲಿ ದೀರ್ಘಾವಧಿಯ ಶಾಂತಿ ಮತ್ತು ಭದ್ರತೆಯನ್ನು ಖಚಿತಪಡಿಸಿಕೊಳ್ಳಲು ಅಪಾರ ತ್ಯಾಗವನ್ನು ಮಾಡಿದ್ದಾರೆ”ಎಂದು ಮತ್ತೊಂದು ಟ್ವೀಟ್ನಲ್ಲಿ ಅವರು ತಿಳಿಸಿದ್ದಾರೆ.
ಈ ಹಿಂದೆ ನರೇಂದ್ರ ಮೋದಿ ಸರ್ಕಾರದ ತೀವ್ರ ಟೀಕಾಕಾರರಾಗಿದ್ದ ಶೆಹ್ಲಾ ರಶೀದ್ ಅವರು ಇತ್ತೀಚೆಗೆ ಕಾಶ್ಮೀರ ವಿಚಾರದಲ್ಲಿ ಹಲವಾರು ವಿಷಯಗಳ ಬಗ್ಗೆ ಕೇಂದ್ರವನ್ನು ಬೆಂಬಲಿಸಿದ್ದಾರೆ.
ಇದಕ್ಕೂ ಮುನ್ನ, ಜುಲೈನಲ್ಲಿ, ಜಮ್ಮು ಮತ್ತು ಕಾಶ್ಮೀರದ ವಿಶೇಷ ಸ್ಥಾನಮಾನವನ್ನು ಹಿಂತೆಗೆದುಕೊಳ್ಳುವ ಕೇಂದ್ರದ 2019 ರ ಕ್ರಮವನ್ನು ಪ್ರಶ್ನಿಸಿ ಸಲ್ಲಿಸಿದ್ದ ತನ್ನ ಅರ್ಜಿಯನ್ನು ಅವರು ಹಿಂತೆಗೆದುಕೊಂಡಿದ್ದರು.
ನರೇಂದ್ರ ಮೋದಿ ಸರ್ಕಾರ ಮತ್ತು ಜಮ್ಮು ಮತ್ತು ಕಾಶ್ಮೀರದಲ್ಲಿ ರಾಜ್ಯಪಾಲರ ಆಳ್ವಿಕೆಯಲ್ಲಿ ಕಾಶ್ಮೀರದಲ್ಲಿ ಮಾನವ ಹಕ್ಕುಗಳ ದಾಖಲೆ ಸುಧಾರಿಸಿದೆ ಎಂದು ಶೆಹ್ಲಾ ರಶೀದ್ ಹೇಳಿದ್ದರು.
Peace is impossible without security, as the Middle East crisis has shown. The Indian Army @ChinarcorpsIA along with @crpfindia and brave personnel of Jammu Kashmir Police @JmuKmrPolice have made tremendous sacrifices to ensure long-term peace and security in Kashmir
— Shehla Rashid (@Shehla_Rashid) October 14, 2023
However inconvenient it may be to admit this, the human rights record in Kashmir has improved under the @narendramodi government and @OfficeOfLGJandK administration. By a purely utilitarian calculus, the govt's clear stance has helped save lives overall. That's my angle. https://t.co/O6zpqHBOwT
— Shehla Rashid (@Shehla_Rashid) August 15, 2023







