ಅಯೋಧ್ಯೆಯ ರಾಮಮಂದಿರದಲ್ಲಿ ಪ್ರಧಾನಿ ಮೋದಿಯಿಂದ ಧಾರ್ಮಿಕ ಧ್ವಜಾರೋಹಣ

Photo credit: PTI
ಅಯೋಧ್ಯೆ ರಾಮಮಂದಿರ ಸಂಕೀರ್ಣ ನಿರ್ಮಾಣ ಪೂರ್ಣ
ಅಯೋಧ್ಯೆ: ಅಯೋಧ್ಯೆಯಲ್ಲಿನ ರಾಮಮಂದಿರ ನಿರ್ಮಾಣ ಕಾಮಗಾರಿ ಔಪಚಾರಿಕವಾಗಿ ಪೂರ್ಣಗೊಂಡಿರುವ ಸಂಕೇತವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ರಾಮಮಂದಿರದ ಮೇಲೆ ಕೇಸರಿ ಧ್ವಜವನ್ನು ಹಾರಿಸಿದರು.
ಕಾರ್ಯಕ್ರಮದಲ್ಲಿ ಉತ್ತರ ಪ್ರದೇಶದ ರಾಜ್ಯಪಾಲೆ ಆನಂದಿ ಬೆನ್ ಪಟೇಲ್, ಮುಖ್ಯಮಂತ್ರಿ ಆದಿತ್ಯನಾಥ್, ಆರೆಸ್ಸೆಸ್ ಮುಖ್ಯಸ್ಥ ಮೋಹನ್ ಭಾಗವತ್ ಹಾಜರಿದ್ದರು.
10 ಅಡಿ ಎತ್ತರ ಹಾಗೂ 20 ಅಡಿ ಉದ್ದದ ಈ ತ್ರಿಕೋನ ಧ್ವಜದಲ್ಲಿ ಪ್ರಕಾಶಮಾನ ಸೂರ್ಯನ ಚಿತ್ರ, ಪವಿತ್ರ ಓಂ ಸಂಕೇತ ಹಾಗೂ ಕೋವಿದಾರ ವೃಕ್ಷವನ್ನು ಮುದ್ರಿಸಲಾಗಿದೆ.
ಹಿಂದೂಗಳು ಶುಭವೆಂದು ಪರಿಗಣಿಸುವ ಅಭಿಜಿತ್ ಮುಹೂರ್ತದಲ್ಲಿ ಧ್ವಜಾರೋಹಣ ನೆರವೇರಿಸಲಾಯಿತು ಎಂದು ಮಂದಿರದ ಅಧಿಕಾರಿಗಳು ತಿಳಿಸಿದ್ದಾರೆ.
“ರಾಮಮಂದಿರ ನಿರ್ಮಾಣ ಕಾಮಗಾರಿ ಔಪಚಾರಿಕವಾಗಿ ಪೂರ್ಣಗೊಂಡಿದೆ ಎಂಬುದರ ಸಂಕೇತವಾಗಿ ಈ ಸಮಾರಂಭವನ್ನು ಆಯೋಜಿಸಲಾಗಿದೆ” ಎಂದು ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರದ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ತಿಳಿಸಿದ್ದಾರೆ.
Next Story





