ಬುಡಕಟ್ಟು ಜನರ ವಿರುದ್ಧ ಅವಹೇಳನಕಾರಿ ಹೇಳಿಕೆ ಆರೋಪ | ನಟ ವಿಜಯ್ ದೇವರಕೊಂಡ ವಿರುದ್ಧ ದೂರು ದಾಖಲು

Photo | hindustantimes
ಹೊಸದಿಲ್ಲಿ: ಬುಡಕಟ್ಟು ಜನರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದಲ್ಲಿ ನಟ ವಿಜಯ್ ದೇವರಕೊಂಡ ವಿರುದ್ಧ ಪೊಲೀಸ್ ದೂರು ದಾಖಲಿಸಲಾಗಿದೆ.
ಹೈದರಾಬಾದ್ ಜೆಆರ್ಸಿ ಕನ್ವೆಂಷನ್ ಸೆಂಟರ್ನಲ್ಲಿ ರೆಟ್ರೋ ಚಲನಚಿತ್ರದ ಫ್ರೀ ರಿಲೀಸ್ ಕಾರ್ಯಕ್ರಮ ನಡೆದಿತ್ತು. ಈ ವೇಳೆ ವಿಜಯ್ ದೇವರಕೊಂಡ ಮಾತನಾಡುತ್ತಾ, ಪಹಲ್ಗಾಮ್ ಭಯೋತ್ಪಾದಕ ದಾಳಿ ನೂರಾರು ವರ್ಷಗಳ ಹಿಂದಿನ ಬುಡಕಟ್ಟು ಸಮುದಾಯಗಳ ನಡುವಿನ ಘರ್ಷಣೆಗಳಿಗೆ ಹೋಲುತ್ತವೆ ಎಂದು ಹೇಳಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.
ಹೈದರಾಬಾದ್ ಮೂಲದ ವಕೀಲ ಲಾಲ್ ಚೌಹಾಣ್ ಈ ಕುರಿತು ಎಸ್.ಆರ್. ನಗರ ಪೊಲೀಸ್ ಠಾಣೆಯಲ್ಲಿ ವಿಜಯ್ ವಿರುದ್ಧ ದೂರು ದಾಖಲಿಸಿದ್ದಾರೆ ಎಂದು Telangana Today ವರದಿ ತಿಳಿಸಿದೆ.
ಬುಡಕಟ್ಟು ಸಂಘಗಳು ಕೂಡ ವಿಜಯ್ ದೇವರಕೊಂಡ ಅವರ ಹೇಳಿಕೆಗೆ ಆಕ್ಷೇಪವನ್ನು ವ್ಯಕ್ತಪಡಿಸಿದೆ. ವಿಜಯ್ ಹೇಳಿಕೆಗಳು ಅವಮಾನವನ್ನುಂಟು ಮಾಡಿದೆ. ಆದ್ದರಿಂದ ಅವರು ತಕ್ಷಣ ಕ್ಷಮೆಯಾಚಿಸಬೇಕೆಂದು ಆಗ್ರಹಿಸಿದೆ.
Next Story





