Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಪತಿಯನ್ನು ವೈವಾಹಿಕ ಬಂಧದಲ್ಲಿ ಜನಿಸಿದ...

ಪತಿಯನ್ನು ವೈವಾಹಿಕ ಬಂಧದಲ್ಲಿ ಜನಿಸಿದ ಮಗುವಿನ ತಂದೆ ಎಂದೇ ಪರಿಗಣಿಸಲಾಗಿದೆ: ಸುಪ್ರೀಂ ಕೋರ್ಟ್

ಡಿಎನ್‌ಎ ಪರೀಕ್ಷೆ ಮನವಿಗೆ ತಿರಸ್ಕಾರ

ವಾರ್ತಾಭಾರತಿವಾರ್ತಾಭಾರತಿ29 Jan 2025 3:40 PM IST
share
Photo of Supreme court of India

ಹೊಸದಿಲ್ಲಿ: ಪತಿ-ಪತ್ನಿ ತಮ್ಮ ವೈವಾಹಿಕ ಜೀವನದ ಅವಧಿಯಲ್ಲಿ ಪರಸ್ಪರ ದೈಹಿಕ ಸಂಪರ್ಕವನ್ನು ಹೊಂದಿರಲಿಲ್ಲ ಎನ್ನುವುದನ್ನು ಸಾಬೀತುಗೊಳಿಸದಿದ್ದರೆ ವಿವಾಹ ಬಂಧದಲ್ಲಿ ಜನಿಸಿದ ಮಗು ದಂಪತಿಯ ಕಾನೂನುಬದ್ಧ ಸಂತಾನ ಎಂದೇ ಭಾವಿಸಲಾಗುತ್ತದೆ ಎಂದು ಸರ್ವೋಚ್ಚ ನ್ಯಾಯಾಲಯವು ಸ್ಪಷ್ಟಪಡಿಸಿದೆ.

ಮಂಗಳವಾರ ವಿಚಾರಣೆ ಸಂದರ್ಭದಲ್ಲಿ ಬಾಲಕನ ನಿಜವಾದ ತಂದೆ ಎಂದು ಮಹಿಳೆ ಪ್ರತಿಪಾದಿಸಿದ್ದ ವ್ಯಕ್ತಿಯ ಡಿಎನ್‌ಎ ಪರೀಕ್ಷೆಯನ್ನು ಕೋರಿ ಆಕೆ ಮತ್ತು ಆಕೆಯ ಪುತ್ರ ಸಲ್ಲಿಸಿದ್ದ ಮನವಿಯನ್ನು ತಿರಸ್ಕರಿಸಿದ ನ್ಯಾಯಮೂರ್ತಿಗಳಾದ ಸೂರ್ಯಕಾಂತ ಮತ್ತು ಉಜ್ಜಲ ಭುಯಾನ್ ಅವರ ಪೀಠವು ಈ ಅಭಿಪ್ರಾಯವನ್ನು ವ್ಯಕ್ತಪಡಿಸಿತು.

1991ರಲ್ಲಿ ವಿವಾಹವಾಗಿದ್ದ ಮಹಿಳೆ ಓರ್ವ ಪುತ್ರಿಯನ್ನು ಹೊಂದಿದ್ದಳು. 2001ರಲ್ಲಿ ಪುತ್ರ ಜನಿಸಿದ್ದು, ಕೊಚ್ಚಿನ್ ಮಹಾನಗರ ಪಾಲಿಕೆಯ ಜನನ ರಿಜಿಸ್ಟರ್‌ನಲ್ಲಿ ಪತಿಯ ಹೆಸರನ್ನು ಪುತ್ರನ ತಂದೆ ಎಂದು ನಮೂದಿಸಲಾಗಿತ್ತು. ತಮ್ಮ ನಡುವಿನ ಭಿನ್ನಾಭಿಪ್ರಾಯಗಳಿಂದಾಗಿ ದಂಪತಿ 2003ರಲ್ಲಿ ಪ್ರತ್ಯೇಕವಾಗಿ ವಾಸಿಸಲು ಆರಂಭಿಸಿದ್ದರು. ಕೆಲ ಸಮಯದ ಬಳಿಕ ಅವರು ವಿಚ್ಛೇದನವನ್ನು ಕೋರಿ ಕುಟುಂಬ ನ್ಯಾಯಾಲಯಕ್ಕೆ ಜಂಟಿ ಅರ್ಜಿಯನ್ನು ಸಲ್ಲಿಸಿದ್ದು,2006ರಲ್ಲಿ ನ್ಯಾಯಾಲಯವು ವಿಚ್ಛೇದನವನ್ನು ಮಂಜೂರು ಮಾಡಿತ್ತು.

ನಂತರ ಮಹಾನಗರ ಪಾಲಿಕೆ ಅಧಿಕಾರಿಗಳನ್ನು ಸಂಪರ್ಕಿಸಿದ್ದ ಮಹಿಳೆ ತಾನು ವ್ಯಕ್ತಿಯೋರ್ವನೊಂದಿಗೆ ವಿವಾಹೇತರ ಸಂಬಂಧವನ್ನು ಹೊಂದಿದ್ದೆ ಮತ್ತು ಆ ವ್ಯಕ್ತಿ ತನ್ನ ಪುತ್ರನ ಜೈವಿಕ ತಂದೆಯಾಗಿದ್ದಾನೆ, ಹೀಗಾಗಿ ದಾಖಲೆಯಲ್ಲಿ ತನ್ನ ಪುತ್ರನ ತಂದೆಯಾಗಿ ಆ ವ್ಯಕ್ತಿಯ ಹೆಸರನ್ನು ನಮೂದಿಸುವಂತೆ ಕೋರಿಕೊಂಡಿದ್ದಳು. ನ್ಯಾಯಾಲಯವು ನಿರ್ದೇಶನ ನೀಡಿದರೆ ಮಾತ್ರ ತಾನು ಹಾಗೆ ಮಾಡಲು ಸಾಧ್ಯ ಎಂದು ಮಹಾನಗರ ಪಾಲಿಕೆ ಮಹಿಳೆಗೆ ತಿಳಿಸಿತ್ತು.

ಹಲವಾರು ಸುತ್ತುಗಳ ದಾವೆಗಳ ಬಳಿಕ ವಿಷಯವು ಅಂತಿಮವಾಗಿ ಸರ್ವೋಚ್ಚ ನ್ಯಾಯಾಲಯದ ಮೆಟ್ಟಿಲನ್ನೇರಿತ್ತು.

ಕಾನೂನುಬದ್ಧತೆ ಮತ್ತು ಪಿತೃತ್ವ ಪ್ರತ್ಯೇಕ ನಿರ್ಣಯದ ಅಗತ್ಯವಿರುವ ವಿಭಿನ್ನ ಪರಿಕಲ್ಪನೆಗಳಾಗಿವೆ ಎಂಬ ಮಹಿಳೆ ಮತ್ತು ಆಕೆಯ ಪುತ್ರನ ವಾದವನ್ನು ಮಂಗಳವಾರ ತಳ್ಳಿಹಾಕಿದ ಸರ್ವೋಚ್ಚ ನ್ಯಾಯಾಲಯವು,ದಂಪತಿಯ ನಡುವೆ ಪರಸ್ಪರ ದೈಹಿಕ ಸಂಪರ್ಕವಿರಲಿಲ್ಲ ಎಂದು ಯಶಸ್ವಿಯಾಗಿ ಸಾಬೀತುಗೊಳಿಸುವವರೆಗೆ ಭಾರತೀಯ ಸಾಕ್ಷ್ಯ ಕಾಯ್ದೆ,1872ರ ಕಲಂ 112ರಡಿ ಕಾನೂನುಬದ್ಧತೆಯು ಪಿತೃತ್ವವನ್ನು ನಿರ್ಧರಿಸುತ್ತದೆ ಎಂದು ಎತ್ತಿ ಹಿಡಿಯಿತು.

ತೀರ್ಪನ್ನು ಬರೆದ ನ್ಯಾ.ಸೂರ್ಯಕಾಂತ ಅವರು,ಭಾರತೀಯ ಸಾಕ್ಷ್ಯ ಕಾಯ್ದೆಯ ಕಲಂ 112ರ ಭಾಷೆಯು,ವೈವಾಹಿಕ ಜೀವನದ ಅವಧಿಯಲ್ಲಿ ಹೆಂಡತಿಯು ಹೆರುವ ಮಗುವಿಗೆ ಗಂಡನೇ ತಂದೆ ಎಂಬ ಬಲವಾದ ಭಾವನೆ ಅಸ್ತಿತ್ವದಲ್ಲಿದೆ ಎನ್ನುವುದನ್ನು ಅತ್ಯಂತ ಸ್ಪಷ್ಟವಾಗಿಸಿದೆ. ಈ ಕಲಂ ಕಾನೂನುಬದ್ಧತೆಯ ನಿರ್ಣಾಯಕ ಪುರಾವೆಯು ಪಿತೃತ್ವಕ್ಕೆ ಸಮನಾಗಿರುತ್ತದೆ ಎಂದು ಹೇಳಿದೆ. ಮಗುವಿನ ಪೋಷಕರ ಬಗ್ಗೆ ಯಾವುದೇ ಅನಗತ್ಯ ವಿಚಾರಣೆಯನ್ನು ತಡೆಯುವುದು ಈ ತತ್ವದ ಉದ್ದೇಶವಾಗಿದೆ ಎಂದು ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X