ಮಹಾರಾಷ್ಟ್ರದಲ್ಲಿ ರೈತರ ಆತ್ಮಹತ್ಯೆ; ಮೋದಿ ನೇತೃತ್ವದ ಸರಕಾರಕ್ಕೆ ರಾಹುಲ್ ಗಾಂಧಿ ತರಾಟೆ

ರಾಹುಲ್ ಗಾಂಧಿ | PC : PTI
ಹೊಸದಿಲ್ಲಿ: ಮಹಾರಾಷ್ಟ್ರದಲ್ಲಿ ರೈತರ ಆತ್ಮಹತ್ಯೆ ಕುರಿತಂತೆ ನರೇಂದ್ರ ಮೋದಿ ನೇತೃತ್ವದ ಸರಕಾರವನ್ನು ಗುರುವಾರ ತೀವ್ರ ತರಾಟೆಗೆ ತೆಗೆದುಕೊಂಡಿರುವ ಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿ, ಹೆಚ್ಚುತ್ತಿರುವ ಕೃಷಿ ಬಿಕ್ಕಟ್ಟಿನ ಕುರಿತು ಕೇಂದ್ರ ಸರಕಾರ ನಿರ್ಲಕ್ಷ ಧೋರಣೆ ತೋರುತ್ತಿದೆ ಎಂದು ಆರೋಪಿಸಿದರು.
‘ಎಕ್ಸ್’ನ ಪೋಸ್ಟ್ ನಲ್ಲಿ ರಾಹುಲ್ ಗಾಂಧಿ, ಸಮಗ್ರ ಸಾಲ ಮನ್ನಾ, ಬೆಳೆಗೆ ಕನಿಷ್ಠ ಬೆಂಬಲ ಬೆಲೆ (ಎಂಎಸ್ಪಿ)ಗೆ ಕಾನೂನು ಖಾತರಿ ಸೇರಿದಂತೆ ರೈತರ ಬಹುಕಾಲದ ಬೇಡಿಕೆಯನ್ನು ನಿರ್ಲಕ್ಷಿಸುತ್ತಿರುವುದಕ್ಕಾಗಿ ಸರಕಾರವನ್ನು ತರಾಟೆಗೆ ತೆಗೆದುಕೊಂಡರು.
ದಿನಪತ್ರಿಕೆಯ ವರದಿಯೊಂದನ್ನು ಉಲ್ಲೇಖಿಸಿದ ರಾಹುಲ್ ಗಾಂಧಿ, ಮಹಾರಾಷ್ಟ್ರದಲ್ಲಿ 2025 ಜನವರಿ ಹಾಗೂ ಮಾರ್ಚ್ ನಡುವೆ 767 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಗಮನ ಸೆಳೆದರು.
ವರದಿಯ ಸ್ಕ್ರೀನ್ ಶಾಟ್ ಅನ್ನು ಅವರು ಹಂಚಿಕೊಂಡಿದ್ದಾರೆ. ಅಲ್ಲದೆ, ‘‘ಯೋಚಿಸಿ ನೋಡಿ. ಕೇವಲ ಮೂರು ತಿಂಗಳಲ್ಲಿ 767 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇದು ಕೇವಲ ಸಂಖ್ಯೆಯಲ್ಲ. ತೊಂದರೆಗೀಡಾದ ಕುಟುಂಬಗಳ ಸಂಖ್ಯೆ. ಸರಕಾರ ಏನು ಮಾಡುತ್ತಿದೆ? ಮೌನವಾಗಿ ನೋಡುತ್ತಿದೆಯೇ?’’ ಎಂದು ಅವರು ಪ್ರಶ್ನಿಸಿದ್ದಾರೆ.
ಬೀಜ, ರಸಗೊಬ್ಬರ ಹಾಗೂ ಡೀಸೆಲ್ಗಳ ಬೆಲೆ ಗಗನಕ್ಕೇರುತ್ತಿರುವುದರಿಂದ ರೈತರು ಸಾಲದ ಸುಳಿಗೆ ಸಿಲುಕುತ್ತಿದ್ದಾರೆ. ಆದರೆ, ಸರಕಾರ ಅರ್ಥಪೂರ್ಣವಾಗಿ ಕಾರ್ಯನಿರ್ವಹಿಸುವಲ್ಲಿ ವಿಫಲವಾಗಿದೆ. ಕನಿಷ್ಠ ಬೆಂಬಲ ಬೆಲೆಗೆ ಯಾವುದೇ ಖಾತರಿ ಇಲ್ಲ. ಸಾಲ ಮನ್ನಾ ಮಾಡುವಂತೆ ರೈತರು ಕೋರಿದಾಗ ಅದನ್ನು ನಿರ್ಲಕ್ಷಿಸಲಾಗುತ್ತಿದೆ ಎಂದು ರಾಹುಲ್ ಗಾಂಧಿ ಹೇಳಿದರು.
ಸರಕಾರ ದೊಡ್ಡ ಕೈಗಾರಿಕೋದ್ಯಮಿಗಳಿಗೆ ಔದಾರ್ಯ ತೋರುತ್ತಿದೆ ಎಂದು ರಾಹುಲ್ ಗಾಂಧಿ ಆರೋಪಿಸಿದರು. ‘‘ದೊಡ್ಡ ಕೈಗಾರಿಕೋದ್ಯಮಿಗಳ ಸಾವಿರಾರು ಕೋಟಿ ರೂ. ಸಾಲವನ್ನು ಮನ್ನಾ ಮಾಡಲಾಗುತ್ತಿದೆ’’ ಎಂದು ರಾಹುಲ್ ಗಾಂಧಿ ಹೇಳಿದರು.ಮಹಾರಾಷ್ಟ್ರದಲ್ಲಿ ರೈತರ ಆತ್ಮಹತ್ಯೆ; ಮೋದಿ ನೇತೃತ್ವದ ಸರಕಾರಕ್ಕೆ ರಾಹುಲ್ ಗಾಂಧಿ ತರಾಟೆ(ವಾ) add tweet
ಹೊಸದಿಲ್ಲಿ: ಮಹಾರಾಷ್ಟ್ರದಲ್ಲಿ ರೈತರ ಆತ್ಮಹತ್ಯೆ ಕುರಿತಂತೆ ನರೇಂದ್ರ ಮೋದಿ ನೇತೃತ್ವದ ಸರಕಾರವನ್ನು ಗುರುವಾರ ತೀವ್ರ ತರಾಟೆಗೆ ತೆಗೆದುಕೊಂಡಿರುವ ಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿ, ಹೆಚ್ಚುತ್ತಿರುವ ಕೃಷಿ ಬಿಕ್ಕಟ್ಟಿನ ಕುರಿತು ಕೇಂದ್ರ ಸರಕಾರ ನಿರ್ಲಕ್ಷ ಧೋರಣೆ ತೋರುತ್ತಿದೆ ಎಂದು ಆರೋಪಿಸಿದರು.
‘ಎಕ್ಸ್’ನ ಪೋಸ್ಟ್ ನಲ್ಲಿ ರಾಹುಲ್ ಗಾಂಧಿ, ಸಮಗ್ರ ಸಾಲ ಮನ್ನಾ, ಬೆಳೆಗೆ ಕನಿಷ್ಠ ಬೆಂಬಲ ಬೆಲೆ (ಎಂಎಸ್ಪಿ)ಗೆ ಕಾನೂನು ಖಾತರಿ ಸೇರಿದಂತೆ ರೈತರ ಬಹುಕಾಲದ ಬೇಡಿಕೆಯನ್ನು ನಿರ್ಲಕ್ಷಿಸುತ್ತಿರುವುದಕ್ಕಾಗಿ ಸರಕಾರವನ್ನು ತರಾಟೆಗೆ ತೆಗೆದುಕೊಂಡರು.
ದಿನಪತ್ರಿಕೆಯ ವರದಿಯೊಂದನ್ನು ಉಲ್ಲೇಖಿಸಿದ ರಾಹುಲ್ ಗಾಂಧಿ, ಮಹಾರಾಷ್ಟ್ರದಲ್ಲಿ 2025 ಜನವರಿ ಹಾಗೂ ಮಾರ್ಚ್ ನಡುವೆ 767 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಗಮನ ಸೆಳೆದರು.
ವರದಿಯ ಸ್ಕ್ರೀನ್ ಶಾಟ್ ಅನ್ನು ಅವರು ಹಂಚಿಕೊಂಡಿದ್ದಾರೆ. ಅಲ್ಲದೆ, ‘‘ಯೋಚಿಸಿ ನೋಡಿ. ಕೇವಲ ಮೂರು ತಿಂಗಳಲ್ಲಿ 767 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇದು ಕೇವಲ ಸಂಖ್ಯೆಯಲ್ಲ. ತೊಂದರೆಗೀಡಾದ ಕುಟುಂಬಗಳ ಸಂಖ್ಯೆ. ಸರಕಾರ ಏನು ಮಾಡುತ್ತಿದೆ? ಮೌನವಾಗಿ ನೋಡುತ್ತಿದೆಯೇ?’’ ಎಂದು ಅವರು ಪ್ರಶ್ನಿಸಿದ್ದಾರೆ.
ಬೀಜ, ರಸಗೊಬ್ಬರ ಹಾಗೂ ಡೀಸೆಲ್ಗಳ ಬೆಲೆ ಗಗನಕ್ಕೇರುತ್ತಿರುವುದರಿಂದ ರೈತರು ಸಾಲದ ಸುಳಿಗೆ ಸಿಲುಕುತ್ತಿದ್ದಾರೆ. ಆದರೆ, ಸರಕಾರ ಅರ್ಥಪೂರ್ಣವಾಗಿ ಕಾರ್ಯನಿರ್ವಹಿಸುವಲ್ಲಿ ವಿಫಲವಾಗಿದೆ. ಕನಿಷ್ಠ ಬೆಂಬಲ ಬೆಲೆಗೆ ಯಾವುದೇ ಖಾತರಿ ಇಲ್ಲ. ಸಾಲ ಮನ್ನಾ ಮಾಡುವಂತೆ ರೈತರು ಕೋರಿದಾಗ ಅದನ್ನು ನಿರ್ಲಕ್ಷಿಸಲಾಗುತ್ತಿದೆ ಎಂದು ರಾಹುಲ್ ಗಾಂಧಿ ಹೇಳಿದರು.
ಸರಕಾರ ದೊಡ್ಡ ಕೈಗಾರಿಕೋದ್ಯಮಿಗಳಿಗೆ ಔದಾರ್ಯ ತೋರುತ್ತಿದೆ ಎಂದು ರಾಹುಲ್ ಗಾಂಧಿ ಆರೋಪಿಸಿದರು. ‘‘ದೊಡ್ಡ ಕೈಗಾರಿಕೋದ್ಯಮಿಗಳ ಸಾವಿರಾರು ಕೋಟಿ ರೂ. ಸಾಲವನ್ನು ಮನ್ನಾ ಮಾಡಲಾಗುತ್ತಿದೆ’’ ಎಂದು ರಾಹುಲ್ ಗಾಂಧಿ ಹೇಳಿದರು.