ಮಾನನಷ್ಟ ಪ್ರಕರಣ: ರಾಹುಲ್ ಗಾಂಧಿಗೆ ಜಾಮೀನು

ರಾಹುಲ್ ಗಾಂಧಿ | PC : PTI
ಲಕ್ನೋ: ಮಾನನಷ್ಟ ಪ್ರಕರಣವೊಂದರಲ್ಲಿ ಪ್ರತಿಪಕ್ಷದ ನಾಯಕ ಹಾಗೂ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿಗೆ ಲಕ್ನೋ ನ್ಯಾಯಾಲಯ ಮಂಗಳವಾರ ಜಾಮೀನು ನೀಡಿದೆ.
ಈ ಪ್ರಕರಣ 2022ರಲ್ಲಿ ‘ಭಾರತ್ ಜೋಡೊ ಯಾತ್ರೆ’ ಸಂದರ್ಭ ಭಾರತೀಯ ಯೋಧರ ವಿರುದ್ಧ ನೀಡಿದ ಮಾನ ಹಾನಿಕರ ಹೇಳಿಕೆಯ ಆರೋಪಕ್ಕೆ ಸಂಬಂಧಿಸಿದೆ ಎಂದು ರಾಹುಲ್ ಗಾಂಧಿ ಅವರ ವಕೀಲ ಪ್ರಾಂಶು ಅಗರ್ವಾಲ್ ತಿಳಿಸಿದ್ದಾರೆ.
ರಾಹುಲ್ ಗಾಂಧಿ ಹಾಜರಾದ ಹಿನ್ನೆಲೆಯಲ್ಲಿ ನ್ಯಾಯಾಲಯ ಅವರನ್ನು ಜಾಮೀನಲ್ಲಿ ಬಿಡುಗಡೆ ಮಾಡಿತು. ರಾಹುಲ್ ಗಾಂಧಿ ಅವರು ನ್ಯಾಯಾಲಯದ ನಿರ್ದೇಶನದಂತೆ ಜಾಮೀನು ಬಾಂಡ್ ಹಾಗೂ ಶ್ಯೂರಿಟಿ ಸಲ್ಲಿಸಿದ ಬಳಿಕ ಜಾಮೀನು ನೀಡಿತು.
ಮಾನನಷ್ಟ ದೂರನ್ನು ವಿಚಾರಣೆಗೆ ಕೈಗೆತ್ತಿಕೊಂಡಿದ್ದ ನ್ಯಾಯಾಲಯ ರಾಹುಲ್ ಗಾಂಧಿಗೆ ಆರೋಪಿಯಾಗಿ ಹಾಜರಾಗಲು ಸಮನ್ಸ್ ನೀಡಿತ್ತು.
ರಾಹುಲ್ ಗಾಂಧಿ ಅವರು ಈ ಹಿಂದೆ ಜಾಮೀನು ಕೋರಿ ಉಚ್ಚ ನ್ಯಾಯಾಲಯದ ಮೆಟ್ಟಿಲೇರಿದ್ದರು. ಆದರೆ, ಅವರು ಅಲ್ಲಿ ಯಶಸ್ವಿಯಾಗಿರಲಿಲ್ಲ.
Next Story





