“ಸರ್ವಾಧಿಕಾರಿ ಪ್ರವೃತ್ತಿ”: ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಉದಯ್ ಭಾನು ಬಂಧನ ಖಂಡಿಸಿದ ರಾಹುಲ್ ಗಾಂಧಿ

ರಾಹುಲ್ ಗಾಂಧಿ (Photo: PTI)
ಹೊಸದಿಲ್ಲಿ: AI ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್ ನಡೆಸಿದ ಪ್ರತಿಭಟನೆಯನ್ನು ಬೆಂಬಲಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಯುವ ಕಾಂಗ್ರೆಸ್ ಅಧ್ಯಕ್ಷ ಉದಯ್ ಭಾನು ಚಿಬ್ ಅವರ ಬಂಧನವನ್ನು ಖಂಡಿಸಿದ್ದಾರೆ.
ಈ ಕುರಿತು ಎಕ್ಸ್ನಲ್ಲಿ ಪೋಸ್ಟ್ ಮಾಡಿದ ರಾಹುಲ್ ಗಾಂಧಿ, ಶಾಂತಿಯುತ ಪ್ರತಿಭಟನೆ ನಮ್ಮ ಐತಿಹಾಸಿಕ ಪರಂಪರೆ. ಅದು ನಮ್ಮ ರಕ್ತದಲ್ಲಿಯೇ ಇದೆ ಮತ್ತು ಪ್ರತಿಯೊಬ್ಬ ಭಾರತೀಯನ ಪ್ರಜಾಪ್ರಭುತ್ವದ ಹಕ್ಕಾಗಿದೆ. ʼರಾಜಿ ಮಾಡಿಕೊಂಡ ಪ್ರಧಾನಿ' ವಿರುದ್ಧ ರಾಷ್ಟ್ರದ ಹಿತಾಸಕ್ತಿಗಾಗಿ ನಿರ್ಭಯವಾಗಿ ಧ್ವನಿ ಎತ್ತಿರುವ ಯುವ ಕಾಂಗ್ರೆಸ್ ಸದಸ್ಯರ ಬಗ್ಗೆ ನನಗೆ ಹೆಮ್ಮೆ ಇದೆ ಎಂದು ಹೇಳಿದ್ದಾರೆ.
ಅಮೆರಿಕದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ದೇಶದ ಹಿತಾಸಕ್ತಿಗಳಿಗೆ ಧಕ್ಕೆ ತರಲಾಗಿದೆ. ಈ ಒಪ್ಪಂದವು ನಮ್ಮ ರೈತರು ಮತ್ತು ಜವಳಿ ಉದ್ಯಮಕ್ಕೆ ಹಾನಿ ಮಾಡುತ್ತದೆ ಮತ್ತು ನಮ್ಮ ಡೇಟಾವನ್ನು ಅಮೆರಿಕಕ್ಕೆ ಹಸ್ತಾಂತರಿಸುತ್ತದೆ ಎಂದು ರಾಹುಲ್ ಗಾಂಧಿ ಹೇಳಿದರು.
ಈ ಸತ್ಯವನ್ನು ರಾಷ್ಟ್ರಕ್ಕೆ ಬಹಿರಂಗಪಡಿಸಿದ್ದಕ್ಕಾಗಿ ಯುವ ಕಾಂಗ್ರೆಸ್ ಅಧ್ಯಕ್ಷ ಉದಯ್ ಭಾನು ಚಿಬ್ ಮತ್ತು ಇತರ ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನವು ಸರ್ವಾಧಿಕಾರಿ ಪ್ರವೃತ್ತಿ ಮತ್ತು ಹೇಡಿತನಕ್ಕೆ ಸಾಕ್ಷಿಯಾಗಿದೆ. ಕಾಂಗ್ರೆಸ್ ಪಕ್ಷವು ಯುವ ಕಾಂಗ್ರೆಸ್ ಕಾರ್ಯಕರ್ತರಿಗೆ ಬೆಂಬಲವಾಗಿ ದೃಢವಾಗಿ ನಿಲ್ಲುತ್ತದೆ ಎಂದು ಹೇಳಿದರು.
शांतिपूर्ण विरोध हमारी ऐतिहासिक धरोहर है। यह हमारे खून में है और हर भारतीय का लोकतांत्रिक अधिकार है।
— Rahul Gandhi (@RahulGandhi) February 24, 2026
मुझे युवा कांग्रेस के अपने बब्बर शेर साथियों पर गर्व है, जिन्होंने ‘COMPROMISED PM’ के खिलाफ निडर होकर देश के हित में आवाज़ उठाई है।
अमेरिका के साथ हुए Trade Deal में देश के…







