Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ರಾಜಸ್ಥಾನ |ಎಸ್ಪಿ ಕಚೇರಿ ಎದುರೇ ಯುವತಿಯ...

ರಾಜಸ್ಥಾನ |ಎಸ್ಪಿ ಕಚೇರಿ ಎದುರೇ ಯುವತಿಯ ಅಪಹರಣ: ಮೂವರ ಬಂಧನ

ವಾರ್ತಾಭಾರತಿವಾರ್ತಾಭಾರತಿ9 Jan 2026 6:06 PM IST
share
ರಾಜಸ್ಥಾನ |ಎಸ್ಪಿ ಕಚೇರಿ ಎದುರೇ ಯುವತಿಯ ಅಪಹರಣ: ಮೂವರ ಬಂಧನ

ಭಿಲ್ವಾರ: ರಾಜಸ್ಥಾನದ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಯ ಎದುರೇ 22 ವರ್ಷದ ಯುವತಿಯೊಬ್ಬಳನ್ನು ಅಪಹರಿಸಿದ ಆರೋಪದ ಮೇಲೆ ಬುಧವಾರ ಸಂಜೆ ಪೊಲೀಸರು ಮೂವರನ್ನು ಬಂಧಿಸಿರುವ ಘಟನೆ ನಡೆದಿದೆ.

ಅಪಹೃತ ಯುವತಿಯನ್ನು ಬಡಿಯಾ ಗ್ರಾಮದ ಸಂಗೀತಾ ಎಂದು ಗುರುತಿಸಲಾಗಿದ್ದು, ಅಪಹರಣಕ್ಕೀಡಾದ ಕೆಲವೇ ಗಂಟೆಗಳಲ್ಲಿ ಆಕೆಯನ್ನು ರಕ್ಷಿಸಲಾಗಿದೆ. ಅಪಹರಣಕಾರರ ಪೈಕಿ ಓರ್ವ ಆರೋಪಿ ತಲೆ ಮರೆಸಿಕೊಂಡಿದ್ದಾನೆ.

ಅಪಹರಣದಲ್ಲಿ ಪಾತ್ರ ವಹಿಸಿದ ಆರೋಪದ ಮೇಲೆ ಸಂತ್ರಸ್ತ ಮಹಿಳೆ ಸಂಗೀತಾಳ ತಂದೆ ಶಿವರಾಜ್ ಜಾಟ್ ಹಾಗೂ ಆಕೆಯ ಚಿಕ್ಕಪ್ಪಂದಿರಾದ ಕಾಲು ಮತ್ತು ಕಲ್ಯಾಣ್ ಎಂಬುವವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ತಮ್ಮಿಬ್ಬರ ಪ್ರೇಮ ವಿವಾಹಕ್ಕೆ ಸಂಗೀತಾಳ ಕುಟುಂಬದ ಸದಸ್ಯರು ವಿರೋಧ ವ್ಯಕ್ತಪಡಿಸುತ್ತಿರುವುದರಿಂದ, ನಮಗೆ ರಕ್ಷಣೆ ನೀಡಿ ಎಂದು ಕೊಟ್ಡಿ ಪ್ರದೇಶದ ಲಕ್ಷ್ಮಿನಿಯಾಸ್ ಗ್ರಾಮದ ನಿವಾಸಿ ಹಾಗೂ ಸಂಗೀತಾ ಪತಿ ಗೋಪಾಲ್ ಜಾಟ್ ಅವರು ಭಿಲ್ವಾರ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಗೆ ಮೊರೆ ಹೋದ ಕೆಲವೇ ಕ್ಷಣಗಳಲ್ಲಿ ಈ ಅಪಹರಣದ ಘಟನೆ ನಡೆದಿದೆ.

ತಮಗೆ ರಕ್ಷಣೆ ನೀಡುವಂತೆ ದೂರು ನೀಡಲು ಸಂಗೀತಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಯೊಳಗೆ ಪ್ರವೇಶಿಸಲು ಯತ್ನಿಸುತ್ತಿದ್ದಂತೆಯೇ ಆಕೆಯ ಸಂಬಂಧಿಕರು ಬಲವಂತವಾಗಿ ಆಕೆಯನ್ನು ಕಪ್ಪು ಬಣ್ಣದ ಸ್ಕಾರ್ಪಿಯೊ ವಾಹನವೊಂದರಲ್ಲಿ ಕುಳ್ಳರಿಸಿಕೊಂಡು ಸ್ಥಳದಿಂದ ಪರಾರಿಯಾಗಿದ್ದಾರೆ ಎನ್ನಲಾಗಿದೆ. ಅವರನ್ನು ತಡೆಯಲು ಯತ್ನಿಸಿದ ಪೊಲೀಸ್ ಸಿಬ್ಬಂದಿಗಳ ಮೇಲೆ ಆರೋಪಿಗಳು ವಾಹನವನ್ನು ಹರಿಸಲು ಯತ್ನಿಸಿದರು ಎಂದೂ ಪೊಲೀಸರು ಆರೋಪಿಸಿದ್ದಾರೆ.

ಈ ಘಟನೆಯ ವೇಳೆ ವಾಹನದ ಚಾಲಕ ಘಟನಾ ಸ್ಥಳದಿಂದ ಪರಾರಿಯಾಗಲು ಯಶಸ್ವಿಯಾಗಿದ್ದು, ಸದ್ಯ ಆತ ತಲೆ ಮರೆಸಿಕೊಂಡಿದ್ದಾನೆ. ಈ ಸಂಬಂಧ ಆರೋಪಿಗಳ ವಿರುದ್ಧ ಅಪಹರಣ ಹಾಗೂ ಸರಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಪ್ರಕರಣಗಳನ್ನು ದಾಖಲಿಸಿಕೊಳ್ಳಲಾಗಿದ್ದು, ತಲೆ ಮರೆಸಿಕೊಂಡಿರುವ ಚಾಲಕನನ್ನು ಪತ್ತೆ ಹಚ್ಚಲು ಪೊಲೀಸ್ ತಂಡಗಳನ್ನು ರಚಿಸಲಾಗಿದೆ.

Tags

RajasthanwomankidnappedSParrested
share
ವಾರ್ತಾಭಾರತಿ
ವಾರ್ತಾಭಾರತಿ
Next Story
X