ವಿಮಾನ ಅಪಘಾತದ ಕುರಿತು ತನಿಖೆ ಆರಂಭಿಸಲಾಗಿದೆ: ನಾಗರಿಕ ವಿಮಾನ ಯಾನ ಸಚಿವ ರಾಮ್ ಮೋಹನ್ ನಾಯ್ಡು

ರಾಮ್ ಮೋಹನ್ ನಾಯ್ಡು | PC : ANI
ಹೊಸದಿಲ್ಲಿ: ಏರ್ ಇಂಡಿಯಾ ವಿಮಾನ ಅಹ್ಮದಾಬಾದ್ ನಲ್ಲಿ ಅಪಘಾತಕ್ಕೀಡಾದ ಕುರಿತಂತೆ ಔಪಚಾರಿಕ ತನಿಖೆ ಆರಂಭಿಸಲಾಗಿದೆ ಎಂದು ನಾಗರಿಕ ವಿಮಾನ ಯಾನ ಸಚಿವ ರಾಮ್ ಮೋಹನ್ ನಾಯ್ಡು ಗುರುವಾರ ತಿಳಿಸಿದ್ದಾರೆ.
‘ಎಕ್ಸ್’ನಲ್ಲಿ ಬಿಡುಗಡೆ ಮಾಡಿದ ಹೇಳಿಕೆಯಲ್ಲಿ ಅವರು, ‘‘ಅಹ್ಮದಾಬಾದ್ ನಲ್ಲಿ ಸಂಭವಿಸಿದ ದುರಂತ ಘಟನೆಯ ಹಿನ್ನೆಲೆಯಲ್ಲಿ ಅಂತರ ರಾಷ್ಟ್ರೀಯ ನಾಗರಿಕ ವಿಮಾನ ಯಾನ ಸಂಸ್ಥೆ ನಿಗದಿಪಡಿಸಿದ ಅಂತರ ರಾಷ್ಟ್ರೀಯ ಶಿಷ್ಟಾಚಾರಕ್ಕೆ ಅನುಗುಣವಾಗಿ ವಿಮಾನ ಅಪಘಾತ ತನಿಖಾ ಸಂಸ್ಥೆ (ನಾಗರಿಕ ವಿಮಾನ ಯಾನ ಸಚಿವಾಲಯದ ಅಡಿಯಲ್ಲಿ ಬರುವ ಸ್ವತಂತ್ರ್ಯ ನಿಯಂತ್ರಣ ಸಂಸ್ಥೆ) ಔಪಚಾರಿಕ ತನಿಖೆ ಆರಂಭಿಸಿದೆ’’ ಎಂದಿದ್ದಾರೆ.
‘‘ಇದಲ್ಲದೆ, ಈ ವಿಷಯವನ್ನು ವಿಸ್ತೃತವಾಗಿ ಪರಿಶೀಲನೆ ನಡೆಸಲು ಬಹುಶಿಸ್ತೀಯ ತಜ್ಞರನ್ನು ಒಳಗೊಂಡ ಉನ್ನತ ಮಟ್ಟದ ಸಮಿತಿಯನ್ನು ಸರಕಾರ ರೂಪಿಸುತ್ತಿದೆ’’ ಎಂದು ಅವರು ತಿಳಿಸಿದ್ದಾರೆ.
Next Story





