ರಷ್ಯಾ: ರಾಡಾರ್ನಿಂದ ಸಂಪರ್ಕ ಕಳೆದುಕೊಂಡ 50 ಜನರಿದ್ದ ವಿಮಾನ

ಸಾಂದರ್ಭಿಕ ಚಿತ್ರ (PTI)
ಮಾಸ್ಕೋ : ಸುಮಾರು 50 ಜನರನ್ನು ಹೊತ್ತೊಯ್ಯುತ್ತಿದ್ದ ಎಎನ್ -24 ಪ್ರಯಾಣಿಕ ವಿಮಾನ ರಷ್ಯಾದ ಪೂರ್ವದಲ್ಲಿ ಗುರುವಾರ ಸಂಪರ್ಕ ಕಡಿತಗೊಂಡಿದೆ ಮತ್ತು ವಿಮಾನದ ಶೋಧ ಕಾರ್ಯ ನಡೆಯುತ್ತಿದೆ ಎಂದು ಪ್ರಾದೇಶಿಕ ಗವರ್ನರ್ ತಿಳಿಸಿದ್ದಾರೆ.
ಸೈಬೀರಿಯಾ ಮೂಲದ ಅಂಗಾರ ಎಂಬ ವಿಮಾನಯಾನ ಸಂಸ್ಥೆಯಿಂದ ನಿರ್ವಹಿಸಲ್ಪಡುತ್ತಿದ್ದ ವಿಮಾನ ಚೀನಾದ ಗಡಿಯಲ್ಲಿರುವ ಅಮುರ್ ಪ್ರದೇಶದ ಟಿಂಡಾ ಪಟ್ಟಣದ ಬಳಿ ರಾಡಾರ್ನಿಂದ ಸಂಪರ್ಕವನ್ನು ಕಳೆದುಕೊಂಡಿದೆ ಎಂದು ಸ್ಥಳೀಯ ತುರ್ತು ಸಚಿವಾಲಯ ತಿಳಿಸಿದೆ.
ಪ್ರಾಥಮಿಕ ಮಾಹಿತಿಯ ಪ್ರಕಾರ ಐವರು ಮಕ್ಕಳು ಸೇರಿದಂತೆ 43 ಪ್ರಯಾಣಿಕರು ಮತ್ತು ಆರು ಸಿಬ್ಬಂದಿ ವಿಮಾನದಲ್ಲಿದ್ದರು ಎಂದು ಪ್ರಾದೇಶಿಕ ಗವರ್ನರ್ ವಾಸಿಲಿ ಓರ್ಲೋವ್ ಹೇಳಿದ್ದಾರೆ.
Next Story





