ಭಾರತೀಯ ಪ್ರಯಾಣಿಕರಿಗೆ ಸೌದಿ ಅರೇಬಿಯ ನಿರ್ಬಂಧ ವಿಧಿಸಿಲ್ಲ : ವದಂತಿ ಕುರಿತು ಸರಕಾರಿ ಮೂಲಗಳ ಸ್ಪಷ್ಟನೆ

ಸಾಂದರ್ಭಿಕ ಚಿತ್ರ | pc : freepik.com
ಹೊಸದಿಲ್ಲಿ: ಸೌದಿ ಅರೇಬಿಯಾ ಭಾರತೀಯರ ಮೇಲೆ ಯಾವುದೇ ನಿರ್ಬಂಧ ವಿಧಿಸಿಲ್ಲ, ಈ ಕುರಿತ ವರದಿಗಳು ಸುಳ್ಳು ಎಂದು ಸರಕಾರದ ಮೂಲಗಳು ಸ್ಪಷ್ಟಪಡಿಸಿದೆ.
ಭಾರತೀಯ ಪ್ರಯಾಣಿಕರಿಗೆ ನಿರ್ಬಂಧ ವಿಧಿಸಿ ಸೌದಿ ಸರಕಾರ ಯಾವುದೇ ಅಧಿಸೂಚನೆ ಹೊರಡಿಸಿಲ್ಲ ಎಂದು ಸರಕಾರಿ ಮೂಲಗಳು ಸ್ಪಷ್ಟಪಡಿಸಿದೆ.
ಸೌದಿ ಸರಕಾರ ಭಾರತೀಯ ಪ್ರಯಾಣಿಕರಿಗೆ ನಿರ್ಬಂಧ ಹೇರಿದೆ ಎಂದು ಕೆಲ ಮಾಧ್ಯಮಗಳು ವರದಿ ಮಾಡಿತ್ತು.
ಹಜ್ ಯಾತ್ರೆಯ ಸಂದರ್ಭದಲ್ಲಿ ಜನದಟ್ಟಣೆ ನಿಯಂತ್ರಿಸುವ ಸಲುವಾಗಿ ತಾತ್ಕಾಲಿಕವಾಗಿ ವೀಸಾ ತಡೆಹಿಡಿಯುವ ಪದ್ಧತಿ ಮೊದಲಿನಿಂದಲೂ ಇದೆ. ಹಜ್ ಅವಧಿ ಮುಗಿಯುತ್ತಿದ್ದಂತೆ ಅದು ಕೊನೆಗೊಳ್ಳುತ್ತದೆ ಎಂದು ಸರಕಾರದ ಮೂಲಗಳು ತಿಳಿಸಿದೆ.
Next Story