ಬಿಹಾರ ಎಸ್ಐಆರ್: ಗುರುತಿನ ಪುರಾವೆಯಾಗಿ ಆಧಾರ್ ಪರಿಗಣಿಸುವಂತೆ ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ನಿರ್ದೇಶನ

ಸಾಂದರ್ಭಿಕ ಚಿತ್ರ (PTI)
ಹೊಸದಿಲ್ಲಿ: ಬಿಹಾರ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR)ಗೆ ಗುರುತಿನ ಪುರಾವೆಯಾಗಿ ಆಧಾರ್ ಕಾರ್ಡ್ ಅನ್ನು ಪರಿಗಣಿಸುವಂತೆ ಸುಪ್ರೀಂ ಕೋರ್ಟ್ ಭಾರತದ ಚುನಾವಣಾ ಆಯೋಗಕ್ಕೆ ನಿರ್ದೇಶಿಸಿದೆ.
ಆಧಾರ್ ಕಾರ್ಡ್ ಅನ್ನು ಬಿಹಾರದ ಪರಿಷ್ಕೃತ ಮತದಾರರ ಪಟ್ಟಿಗೆ ಸೇರ್ಪಡೆಗೆ 12ನೇ ದಾಖಲೆಯಾಗಿ ಪರಿಗಣಿಸುವಂತೆ ಸುಪ್ರೀಂ ಕೋರ್ಟ್ ಚುನಾವಣಾ ಆಯೋಗಕ್ಕೆ ಸೂಚಿಸಿದೆ.
ಎಸ್ಐಆರ್ ವೇಳೆ ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆ ಮಾಡಲು 11 ದಾಖಲೆಗಳನ್ನು ಪರಿಗಣಿಸಲಾಗುವುದು ಎಂದು ಚುನಾವಣಾ ಆಯೋಗ ಈ ಹಿಂದೆ ಹೇಳಿತ್ತು. ಇದೀಗ 12ನೇ ದಾಖಲೆಯಾಗಿ ಆಧಾರ್ ಕಾರ್ಡ್ ಅನ್ನು ಪರಿಗಣಿಸಬೇಕು ಎಂದು ಸುಪ್ರೀಂ ಕೋರ್ಟ್ ಸೂಚಿಸಿದೆ.
12 ದಾಖಲೆಗಳ ಪೈಕಿ ಯಾವುದಾದರೊಂದು ದಾಖಲೆಗಳನ್ನು ಮತದಾದರರು ಸಲ್ಲಿಸಬಹುದು ಸುಪ್ರೀಂ ಕೋರ್ಟ್ ಹೇಳಿದೆ.
Next Story





