Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. "ಪುನರ್‌ಪರಿಶೀಲನೆ ಆದೇಶಗಳಿರುವುದು...

"ಪುನರ್‌ಪರಿಶೀಲನೆ ಆದೇಶಗಳಿರುವುದು ಕಪಾಟಿನಲ್ಲಿ ಇಡಲು ಅಲ್ಲ": ಜಮ್ಮು-ಕಾಶ್ಮೀರದಲ್ಲಿ ಇಂಟರ್ನೆಟ್ ನಿರ್ಬಂಧ ಕುರಿತು ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ತರಾಟೆ

ವಾರ್ತಾಭಾರತಿವಾರ್ತಾಭಾರತಿ31 Jan 2024 4:50 PM IST
share
ಪುನರ್‌ಪರಿಶೀಲನೆ ಆದೇಶಗಳಿರುವುದು ಕಪಾಟಿನಲ್ಲಿ ಇಡಲು ಅಲ್ಲ: ಜಮ್ಮು-ಕಾಶ್ಮೀರದಲ್ಲಿ ಇಂಟರ್ನೆಟ್ ನಿರ್ಬಂಧ ಕುರಿತು ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ತರಾಟೆ

ಹೊಸದಿಲ್ಲಿ: ಕೇಂದ್ರ ಸರಕಾರವನ್ನು ತರಾಟೆಗೆತ್ತಿಕೊಂಡಿರುವ ಸರ್ವೋಚ್ಚ ನ್ಯಾಯಾಲಯವು, ಕೇಂದ್ರಾಡಳಿತ ಪ್ರದೇಶ ಜಮ್ಮು-ಕಾಶ್ಮೀರದಲ್ಲಿ ಇಂಟರ್ನೆಟ್ ಮರುಸ್ಥಾಪನೆ ಕುರಿತು ಮೇ 2020ರಲ್ಲಿ ರಚಿಸಲಾಗಿದ್ದ ವಿಶೇಷ ಸಮಿತಿಯ ಪುನರ್‌ಪರಿಶೀಲನೆ ಆದೇಶಗಳಿರುವುದು ಕಪಾಟಿನಲ್ಲಿ ಇಡಲು ಅಲ್ಲ,ಅವುಗಳನ್ನು ಪ್ರಕಟಿಸಬೇಕು ಎಂದು ಎಂದು ಕಟುವಾಗಿ ಹೇಳಿದೆ.

ಮೇ, 2020ರಲ್ಲಿ ಇಂಟರ್ನೆಟ್ ನಿರ್ಬಂಧಗಳಿಗೆ ಸಂಬಂಧಿಸಿದ ಪ್ರಕರಣದಲ್ಲಿ ತೀರ್ಪು ನೀಡಿದ್ದ ಸಂದರ್ಭದಲ್ಲಿ ಸರ್ವೋಚ್ಚ ನ್ಯಾಯಾಲಯವು ಜಮ್ಮು-ಕಾಶ್ಮೀರದಲ್ಲಿ ಇಂಟರ್ನೆಟ್ ಮೇಲೆ ನಿರ್ಬಂಧಗಳ ಅಗತ್ಯವನ್ನು ಪರಿಶೀಲಿಸಲು ವಿಶೇಷ ಸಮಿತಿಯನ್ನು ರಚಿಸುವಂತೆ ಕೇಂದ್ರಕ್ಕೆ ನಿರ್ದೇಶನ ನೀಡಿತ್ತು.

ಆಗಸ್ಟ್ 2019ರಲ್ಲಿ ಸಂವಿಧಾನದ 370ನೇ ವಿಧಿ ಮತ್ತು ರಾಜ್ಯ ಸ್ಥಾನಮಾನವನ್ನು ರದ್ದುಗೊಳಿಸುವುದರೊಂದಿಗೆ ಕೇಂದ್ರವು ಜಮ್ಮು-ಕಾಶ್ಮೀರದಲ್ಲಿ ಇಂಟರ್ನೆಟ್ ಮೇಲೆ ನಿರ್ಬಂಧಗಳನ್ನು ಹೇರಲು ಆರಂಭಿಸಿತ್ತು. ಇಂಟರ್ನೆಟ್ ಮೇಲಿನ ನಿರ್ಬಂಧಗಳ ಪುನರ್‌ಪರಿಶೀಲನೆಯನ್ನು ಕೋರಿ ಪತ್ರಕರ್ತೆ ಅನುರಾಧಾ ಭಾಸಿನ್ ಅವರು ಜನವರಿ, 2020ರಲ್ಲಿ ಸರ್ವೋಚ್ಚ ನ್ಯಾಯಾಲಯದ ಮೆಟ್ಟಿಲನ್ನೇರಿದ್ದರು. ನ್ಯಾಯಾಲಯವು ಭಾಸಿನ್ ಅವರ ವಾದವನ್ನು ಒಪ್ಪಿದ್ದು ಮಾತ್ರವಲ್ಲ,ವಿಶೇಷ ಸಮಿತಿ ರಚನೆಗೆ ಕೇಂದ್ರಕ್ಕೆ ನಿರ್ದೇಶನವನ್ನೂ ನೀಡಿತ್ತು.

ಈ ಹಿನ್ನೆಲೆಯಲ್ಲಿ, ಮಂಗಳವಾರ ಫೌಂಡೇಷನ್ ಫಾರ್ ಮೀಡಿಯಾ ಪ್ರೊಫೆಷನಲ್ಸ್ ಪರ ನ್ಯಾಯವಾದಿ ಶಾದಾನ್ ಫರಾಸತ್ ಅವರು, ಅನುರಾಧಾ ಭಾಸಿನ್ ತೀರ್ಪು ಮತ್ತು ಭಾರತೀಯ ಟೆಲಿಗ್ರಾಫ್ ಕಾಯ್ದೆಗೆ ಅನುಗುಣವಾಗಿ ಆಡಳಿತವು ಜಮ್ಮು-ಕಾಶ್ಮೀರದಲ್ಲಿ ಇಂಟರ್ನೆಟ್ ನಿರ್ಬಂಧಗಳ ಕುರಿತು ಪುನರ್‌ಪರಿಶೀಲನೆ ಆದೇಶಗಳು ಮತ್ತು ಮಾತೃ ಆದೇಶವನ್ನು ಪ್ರಕಟಿಸುವುದು ಅಗತ್ಯವಾಗಿದೆ ಎಂದು ಸರ್ವೋಚ್ಚ ನ್ಯಾಯಾಲಯಕ್ಕೆ ತಿಳಿಸಿದರು.

ಇದಕ್ಕೆ, ಜಮ್ಮು-ಕಾಶ್ಮೀರ ಆಡಳಿತದ ಪರ ಹೆಚ್ಚುವರಿ ಸಾಲಿಸಿಟರ್ ಜನರಲ್ (ಎಎಸ್‌ಜಿ) ಕೆ.ಎಂ.ನಟರಾಜ ಅವರು, ‘ಹಿಂದಿನ ಅರ್ಜಿಗಳಲ್ಲಿಯ ಎಲ್ಲ ಕೋರಿಕೆಗಳನ್ನು ನಾವು ಈಡೇರಿಸಿದ್ದೇವೆ. ನ್ಯಾಯಾಂಗ ನಿಂದನೆ ಅರ್ಜಿಯೂ ಸಲ್ಲಿಕೆಯಾಗಿತ್ತು ಮತ್ತು ಅದು ವಜಾಗೊಂಡಿದೆ. ಈಗ ಅವರು ವಿಶೇಷ ಸಮಿತಿಯ ಶಿಫಾರಸುಗಳು ಮತ್ತು ಚರ್ಚೆಗಳ ಪ್ರಕಟಣೆಗಾಗಿ ಹೊಸ ಕೋರಿಕೆಯೊಂದಿಗೆ ಬಂದಿದ್ದಾರೆ’ ಎಂದು ಹೇಳಿದರು.

ಈ ಹಂತದಲ್ಲಿ ಪ್ರತಿಕ್ರಿಯಿಸಿದ ನ್ಯಾಯಮೂರ್ತಿಗಳಾದ ಬಿ.ಆರ್.ಗವಾಯಿ ಮತ್ತು ಸಂಜಯ ಕರೋಲ ಅವರ ಪೀಠವು, ‘ಸಮಿತಿಯ ಚರ್ಚೆಗಳನ್ನು ಪ್ರಕಟಿಸುವ ಅಗತ್ಯವಿಲ್ಲದಿರಬಹುದು, ಆದರೆ ಹೊರಡಿಸಲಾದ ಪುನರ್‌ಪರಿಶೀಲನೆ ಆದೇಶಗಳನ್ನು ಪ್ರಕಟಿಸುವುದು ಅಗತ್ಯವಾಗಿದೆ. ಪುನರ್‌ಪರಿಶೀಲನೆ ಆದೇಶಗಳು ಇರುವುದು ಕಪಾಟಿನಲ್ಲಿ ಇರಿಸಲು ಅಲ್ಲ’ ಎಂದು ಹೇಳಿತು.

ಸರ್ವೋಚ್ಚ ನ್ಯಾಯಾಲಯವು ಎಎಸ್‌ಜಿ ಅವರು ಸಂಬಂಧಿಸಿದ ಅಧಿಕಾರಿಗಳಿಂದ ಸೂಚನೆಗಳನ್ನು ಪಡೆದುಕೊಳ್ಳಲು ಎರಡು ವಾರಗಳ ಕಾಲಾವಕಾಶವನ್ನು ಜಮ್ಮು-ಕಾಶ್ಮೀರ ಆಡಳಿತಕ್ಕೆ ನೀಡಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X