Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಧಾರ್ಮಿಕ ಸ್ಥಳಗಳ ರಕ್ಷಣೆಗೆ ಕೈಗೊಂಡ...

ಧಾರ್ಮಿಕ ಸ್ಥಳಗಳ ರಕ್ಷಣೆಗೆ ಕೈಗೊಂಡ ಕ್ರಮಗಳನ್ನು ನ್ಯಾಯಾಲಯ ನೇಮಿಸಿದ ಸಮಿತಿಗೆ ತಿಳಿಸಲು ಮಣಿಪುರಕ್ಕೆ ಸುಪ್ರೀಂ ನಿರ್ದೇಶನ

ವಾರ್ತಾಭಾರತಿವಾರ್ತಾಭಾರತಿ16 Dec 2023 5:35 PM IST
share
ಧಾರ್ಮಿಕ ಸ್ಥಳಗಳ ರಕ್ಷಣೆಗೆ ಕೈಗೊಂಡ ಕ್ರಮಗಳನ್ನು ನ್ಯಾಯಾಲಯ ನೇಮಿಸಿದ ಸಮಿತಿಗೆ ತಿಳಿಸಲು ಮಣಿಪುರಕ್ಕೆ ಸುಪ್ರೀಂ ನಿರ್ದೇಶನ

ಹೊಸದಿಲ್ಲಿ: ರಾಜ್ಯದಲ್ಲಿಯ ಧಾರ್ಮಿಕ ಸ್ಥಳಗಳ ರಕ್ಷಣೆಗಾಗಿ ಕೈಗೊಂಡಿರುವ ಕ್ರಮಗಳ ಬಗ್ಗೆ ನ್ಯಾಯಾಲಯದಿಂದ ನೇಮಕಗೊಂಡಿರುವ ಸಮಿತಿಗೆ ಮಾಹಿತಿ ನೀಡುವಂತೆ ಸರ್ವೋಚ್ಚ ನ್ಯಾಯಾಲಯವು ಶುಕ್ರವಾರ ಮಣಿಪುರ ಸರಕಾರಕ್ಕೆ ನಿರ್ದೇಶನ ನೀಡಿದೆ.

ಜನಾಂಗೀಯ ಸಂಘರ್ಷದಿಂದ ಪೀಡಿತ ಮಣಿಪುರದಲ್ಲಿ ಪರಿಹಾರ ಮತ್ತು ಪುನರ್ವಸತಿ ಕ್ರಮಗಳ ಮೇಲ್ವಿಚಾರಣೆಗಾಗಿ ಕಳೆದ ಆಗಸ್ಟ್‌ನಲ್ಲಿ ಸರ್ವೋಚ್ಚ ನ್ಯಾಯಾಲಯವು ನ್ಯಾ.ಗೀತಾ ಮಿತ್ತಲ್ ನೇತೃತ್ವದಲ್ಲಿ ಮೂವರು ಮಾಜಿ ಹೈಕೋರ್ಟ್ ನ್ಯಾಯಾಧೀಶರ ಸಮಿತಿಯನ್ನು ರಚಿಸಿತ್ತು.

ಶುಕ್ರವಾರ ನ್ಯಾಯಾಲಯವು ಮೈತೈ ಕ್ರಿಶ್ಚಿಯನ್ ಚರ್ಚ್‌ಗಳ ಮಂಡಳಿಯು ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಕೈಗೆತ್ತಿಕೊಂಡಿತ್ತು. ನ್ಯಾಯಾಲಯವು ನೇಮಕಗೊಳಿಸಿರುವ ಸಮಿತಿಯು ಧಾರ್ಮಿಕ ಸ್ಥಳಗಳ ಮರುಸ್ಥಾಪನೆಗೆ ಕೆಲವು ಶಿಫಾರಸುಗಳನ್ನು ಮಾಡಿದೆ ಎಂದು ಹೇಳಿದ ಮಂಡಳಿಯ ಪರ ವಕೀಲ ಹುಝೆಫಾ ಅಹ್ಮದಿ ಅವರು,ಎಲ್ಲ ಸಮುದಾಯಗಳ ಧಾರ್ಮಿಕ ಸ್ಥಳಗಳ ಮರುಸ್ಥಾಪನೆಯನ್ನು ಮಂಡಳಿಯು ಬಯಸಿದೆ ಎಂದು ತಿಳಿಸಿದರು.

ಪರಿಹಾರ ಶಿಬಿರಗಳಲ್ಲಿ ವಾಸವಾಗಿರುವವರು ಕ್ರಿಸ್‌ಮಸ್ ಹಬ್ಬವನ್ನು ಆಚರಿಸುವಂತಾಗಲು ಕ್ರಮಗಳನ್ನು ತೆಗೆದುಕೊಳ್ಳಲಾಗುವುದು ಎಂಬ ಸಾಲಿಸಿಟರ್ ಜನರಲ್ ತುಷಾರ ಮೆಹ್ತಾ ಅವರ ಭರವಸೆಯನ್ನು ನ್ಯಾಯಾಲಯವು ದಾಖಲಿಸಿಕೊಂಡಿತು.

ಧಾರ್ಮಿಕ ಸ್ಥಳಗಳನ್ನು ಅತಿಕ್ರಮಣ ಮತ್ತು ಹಾನಿ ಅಥವಾ ವಿನಾಶದಿಂದ ರಕ್ಷಿಸಬೇಕು ಎಂದು ಕಳೆದ ಸೆಪ್ಟಂಬರ್‌ನಲ್ಲಿ ಹೇಳಿದ್ದ ನ್ಯಾಯಾಲಯದಿಂದ ನೇಮಕಗೊಂಡ ಸಮಿತಿಯು,ಸ್ಥಳಾಂತರಗೊಂಡಿರುವ ವ್ಯಕ್ತಿಗಳ ಆಸ್ತಿಗಳನ್ನು ಹಾಗೂ ಹಾನಿಗೀಡಾದ/ಸುಟ್ಟು ಹೋದ ಆಸ್ತಿಗಳ ರಕ್ಷಣೆಯನ್ನು ಖಚಿತಪಡಿಸುವಂತೆ ಮತ್ತು ಅವುಗಳ ಅತಿಕ್ರಮಣವನ್ನು ತಡೆಯುವಂತೆ ಮಣಿಪುರ ಸರಕಾರಕ್ಕೆ ಕರೆನೀಡಿತ್ತು

share
ವಾರ್ತಾಭಾರತಿ
ವಾರ್ತಾಭಾರತಿ
Next Story
X