ಹೊಸದಿಲ್ಲಿ | ನಾಲ್ಕು ಅಂತಸ್ತಿನ ಕಟ್ಟಡ ಕುಸಿತ : ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ

Photo | ANI
ಹೊಸದಿಲ್ಲಿ : ರಾಷ್ಟ್ರ ರಾಜಧಾನಿ ದಿಲ್ಲಿಯ ಜಂತ ಮಝ್ದೂರ್ ಕಾಲೋನಿಯ ವೆಲ್ಕಮ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಶನಿವಾರ ನಾಲ್ಕು ಅಂತಸ್ತಿನ ಕಟ್ಟಡ ಕುಸಿದಿದ್ದು, ಹಲವಾರು ಅವಶೇಷಗಳಡಿಯಲ್ಲಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ.
ಈಗಾಗಲೇ ಮೂರರಿಂದ ನಾಲ್ಕು ಜನರನ್ನು ರಕ್ಷಿಸಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಆದರೆ, ಇನ್ನೂ ಹಲವರು ಅವಶೇಷಗಳಡಿಯಲ್ಲಿ ಸಿಲುಕಿರುವ ಸಾಧ್ಯತೆ ಇದೆ ಎಂದು ಅಗ್ನಿಶಾಮಕದಳದ ಅಧಿಕಾರಿಗಳು ತಿಳಿಸಿದ್ದಾರೆ.
ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಸ್ಥಳೀಯರು ಕೂಡ ಸಹಾಯ ಮಾಡುತ್ತಿರುವುದು ಕಂಡು ಬಂದಿದೆ.
ಈ ಕುರಿತು ಪ್ರತಿಕ್ರಿಯಿಸಿದ ಈಶಾನ್ಯ ದಿಲ್ಲಿಯ ಹೆಚ್ಚುವರಿ ಡಿಸಿಪಿ ಸಂದೀಪ್ ಲಂಬಾ, ಅವಶೇಷಗಳಡಿ ಸಿಲುಕಿದ್ದ 7 ಜನರನ್ನು ಈಗಾಗಲೇ ರಕ್ಷಿಸಲಾಗಿದೆ. ಅಗ್ನಿಶಾಮಕ ದಳ ಮತ್ತು ಪೊಲೀಸರ ತಂಡ ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದೆ ಎಂದು ಹೇಳಿದ್ದಾರೆ.
Next Story





