ದಿಲ್ಲಿ | ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಆಸ್ಪತ್ರೆಗೆ ದಾಖಲು

ಸೋನಿಯಾ ಗಾಂಧಿ (Photo: PTI)
ಹೊಸದಿಲ್ಲಿ: ಅನಾರೋಗ್ಯದ ಹಿನ್ನೆಲೆ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರನ್ನು ಮಂಗಳವಾರ ದಿಲ್ಲಿಯ ಸರ್ ಗಂಗಾ ರಾಮ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಸೋನಿಯಾ ಗಾಂಧಿ ಅವರ ಆರೋಗ್ಯ ಸ್ಥಿರವಾಗಿದ್ದು, ಹೃದ್ರೋಗ ತಜ್ಞರು ಅವರ ಆರೋಗ್ಯದ ಬಗ್ಗೆ ನಿಗಾವಹಿಸಿದ್ದಾರೆ.
ಅವರಿಗೆ ದೀರ್ಘಕಾಲದ ಕೆಮ್ಮಿನ ಸಮಸ್ಯೆಯಿದೆ. ಆದ್ದರಿಂದ ಅವರು ಆಸ್ಪತ್ರೆಗೆ ತಪಾಸಣೆಗಾಗಿ ಬರುತ್ತಾ ಇರುತ್ತಾರೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿರುವ ಬಗ್ಗೆ ವರದಿಯಾಗಿದೆ.
Next Story





