Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಬೆನ್ನುಮೂಳೆಯಿಂದ ಬುರುಡೆ ಬೇರ್ಪಟ್ಟ...

ಬೆನ್ನುಮೂಳೆಯಿಂದ ಬುರುಡೆ ಬೇರ್ಪಟ್ಟ ಬಾಲಕನಿಗೆ ಯಶಸ್ವಿ ಶಸ್ತ್ರ ಚಿಕಿತ್ಸೆ

ವಾರ್ತಾಭಾರತಿವಾರ್ತಾಭಾರತಿ14 July 2023 9:03 PM IST
share
ಬೆನ್ನುಮೂಳೆಯಿಂದ ಬುರುಡೆ ಬೇರ್ಪಟ್ಟ ಬಾಲಕನಿಗೆ ಯಶಸ್ವಿ ಶಸ್ತ್ರ ಚಿಕಿತ್ಸೆ

ಜೆರುಸಲೇಮ್: ಅಪಘಾತದಿಂದ ಬೆನ್ನುಮೂಳೆಯಿಂದ ತಲೆ ಬುರುಡೆ ಬೇರೆಯಾಗಿದ್ದ ಬಾಲಕನೊಬ್ಬನಿಗೆ ಅತ್ಯಂತ ಸಂಕೀರ್ಣವಾದ ಶಸ್ತ್ರಚಿಕಿತ್ಸೆ ಮಾಡಿ ಇಸ್ರೇಲ್‌ ವೈದ್ಯರು ಯಶಸ್ವಿಯಾಗಿದ್ದಾರೆ.

12 ವರ್ಷದ ಸುಲೇಮಾನ್ ಹಸನ್ ಎಂಬ ಬಾಲಕ ಸೈಕಲ್‌ ಓಡಿಸುತ್ತಿರುವಾಗ, ಕಾರಿಗೆ ಢಿಕ್ಕಿ ಹೊಡೆದು ಗಂಭೀರ ಸ್ವರೂಪದ ಗಾಯವಾಗಿತ್ತು. ಅಪಘಾತದಲ್ಲಿ ಹಸನ್ ನ ತಲೆ ಬುರುಡೆಯು ಬೆನ್ನುಮೂಳೆಯಿಂದ ಬೇರ್ಪಟ್ಟಿತ್ತು. ವೈದ್ಯಕೀಯ ಪರಿಭಾಷೆಯಲ್ಲಿ ಇದನ್ನು “ಬೈಲಾಟರಲ್ ಅಟ್ಲಾಂಟೊ ಆಸಿಪೀಟಲ್ ಜಾಯಿಂಟ್ ಡಿಸ್ಲೊಕೇಶನ್ bilateral atlanto occipital dislocation” ಎಂದು ಕರೆಯಲಾಗುತ್ತದೆ.

ವೈದ್ಯರ ಪ್ರಕಾರ ಬಾಲಕನ ಕತ್ತಿನ ಬುಡದಿಂದ ತಲೆಬುರುಡೆಯು ಸಂಪೂರ್ಣವಾಗಿ ಬೇರ್ಪಟ್ಟಿತ್ತು. ಇದನ್ನು “ಆಂತರಿಕ ಶಿರಚ್ಛೇದನ” ಎಂದೂ ಕರೆಯುತ್ತಾರೆ.

ಅಪಘಾತದ ಬಳಿಕ ಬಳಿಕ ಸುಲೇಮಾನ್ ಹಸನ್ ನನ್ನು ಹಡಸ್ಸಾ ವೈದ್ಯಕೀಯ ಕೇಂದ್ರಕ್ಕೆ ಏರ್‌ಲಿಫ್ಟ್‌ ಮಾಡಲಾಗಿತ್ತು, ಅಲ್ಲಿ ತುರ್ತು ಚಿಕಿತ್ಸೆ ನೀಡಿದ ಬಳಿಕ ಮೂಳೆ ತಜ್ಞರಾದ ಡಾ. ಓಹದ್ ಐನಾವ್ ನೇತೃತ್ವದಲ್ಲಿ ಹಲವಾರು ಗಂಟೆಗಳ ಶಸ್ತ್ರಚಿಕಿತ್ಸೆ ನಡೆಸಲಾಗಿದೆ.

ನಿರಂತರ ಶಸ್ತ್ರಚಿಕಿತ್ಸೆಯ ಬಳಿಕ ಬಾಲಕನ ತಲೆ ಬುರುಡೆಯನ್ನು ಯಶಸ್ವಿಯಾಗಿ ಮರುಜೋಡಣೆ ಮಾಡಲಾಯಿತು. ಈ ಶಸ್ತ್ರಚಿಕಿತ್ಸೆಯನ್ನು ಜೂನ್‌ ತಿಂಗಳಲ್ಲೇ ಮಾಡಲಾಗಿತ್ತಾದರೂ, ಬಾಲಕ ಸಂಪೂರ್ಣ ಗುಣಮುಖವಾಗುವವರೆಗೆ ಪರಿಶೀಲನೆ ನಡೆಸಿ ಮಾಹಿತಿ ಬಹಿರಂಗಗೊಳಿಸಲಾಗಿದೆ.

ಬಾಲಕ ಈಗ ಸಂಪೂರ್ಣ ಚೇತರಿಸಿಕೊಂಡಿದ್ದು, ಯಾವುದೇ ಸಹಾಯವಿಲ್ಲದೆ ನಡೆದಾಡಬಹುದು ಎಂದು ಡಾ. ಓಹದ್ ಐನಾವ್ ತಿಳಿಸಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿದ ಅವರು, ಇದೊಂದು ಅತ್ಯಂತ ಅಪರೂಪದ ಸಂಕೀರ್ಣ ಶಸ್ತ್ರಚಿಕಿತ್ಸೆಯಾಗಿದ್ದು, ಆಪರೇಷನ್‌ ಮಾಡುವವರಿಗೆ ಅನುಭವವಿರಬೇಕಾಗುತ್ತದೆ, ಅದರಲ್ಲೂ ಮಕ್ಕಳ ನರಮಂಡಲದ ಬಗ್ಗೆ ಸಂಪೂರ್ಣ ಅರಿವಿರಬೇಕಾಗುತ್ತದೆ. ನಮ್ಮಲ್ಲಿ ಅತ್ಯಂತ ನವೀನ ತಂತ್ರಜ್ಞಾನವಿದ್ದುದರಿಂದ ಹಾಗೂ ವೈದ್ಯರ ಪರಿಶ್ರಮದಿಂದ ಬಾಲಕನನ್ನು ಉಳಿಸಲು ಸಾಧ್ಯವಾಯಿತು. ಕೇವಲ ಶೇ. 50ರಷ್ಟು ಮಾತ್ರ ಬಾಲಕ ಬದುಕುಳಿಯುವ ಸಾಧ್ಯತೆ ಇತ್ತು ಎಂದು ಅವರು ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X