ರಾಜ್ಯಸಭಾ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದ ಸುಧಾ ಮೂರ್ತಿ

ಸುಧಾ ಮೂರ್ತಿ | Photo: PTI
ಹೊಸದಿಲ್ಲಿ: ಇತ್ತೀಚೆಗೆ ರಾಜ್ಯಸಭಾ ಸದಸ್ಯರಾಗಿ ನಾಮನಿರ್ದೇಶನಗೊಂಡಿರುವ ಸುಧಾ ಮೂರ್ತಿ ಅವರು ಇಂದು ರಾಜ್ಯಸಭಾ ಸಂಸದರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಪ್ರಮಾಣ ಸಮಾರಂಭದಲ್ಲಿ ಸುಧಾಮೂರ್ತಿ ಅವರ ಪತಿ ಇನ್ಫೋಸಿಸ್ ನ ಎನ್ಆರ್ ನಾರಾಯಣ ಮೂರ್ತಿ ಅವರು ಕೂಡಾ ಭಾಗವಹಿಸಿದ್ದರು.
ರಾಜ್ಯಸಭಾ ಅಧ್ಯಕ್ಷ ಜಗದೀಪ್ ಧಂಖರ್ ಅವರು ಸಂಸತ್ ಭವನದ ತಮ್ಮ ಚೇಂಬರ್ನಲ್ಲಿ ಪ್ರಮಾಣ ವಚನ ಬೋಧಿಸಿದರು. ಈ ಸಂದರ್ಭದಲ್ಲಿ ಸಭಾನಾಯಕ ಪಿಯೂಷ್ ಗೋಯಲ್ ಕೂಡ ಉಪಸ್ಥಿತರಿದ್ದರು.
ಇನ್ಫೋಸಿಸ್ ಫೌಂಡೇಶನ್ನ ಮಾಜಿ ಅಧ್ಯಕ್ಷೆಯಾಗಿರುವ 73 ವರ್ಷದ ಸುಧಾ ಮೂರ್ತಿ ಅವರು ಹಲವಾರು ಪುಸ್ತಕಗಳನ್ನು ಕೂಡಾ ಬರೆದಿದ್ದಾರೆ.
ಅಂತಾರಾಷ್ಟ್ರೀಯ ಮಹಿಳಾ ದಿನದಂದು ಅವರು ರಾಜ್ಯಸಭೆಗೆ ನಾಮನಿರ್ದೇಶನಗೊಂಡಿದ್ದರು. ಅವರಿಗೆ ಸಾಹಿತ್ಯ ಅಕಾಡೆಮಿ ಬಾಲ ಸಾಹಿತ್ಯ ಪುರಸ್ಕಾರ, ಪದ್ಮಶ್ರೀ (2006) ಮತ್ತು ಪದ್ಮಭೂಷಣ (2023) ಪ್ರಶಸ್ತಿಗಳನ್ನು ನೀಡಿ ಗೌರವಿಸಲಾಗಿದೆ.
Next Story





