ರಸ್ತೆ ಸುರಕ್ಷತೆ | ಕಾನೂನಾತ್ಮಕ ನಿಯಮಾವಳಿಗಳ ಪಾಲನೆ ಕುರಿತು ವರದಿಗಳನ್ನು ಸುಪ್ರೀಂ ಕೋರ್ಟ್ ಸೂಚನೆ

ಸುಪ್ರೀಂ ಕೋರ್ಟ್ | PTI
ಹೊಸದಿಲ್ಲಿ: ಇತ್ತೀಚಿನ ಮೋಟಾರು ವಾಹನ ಕಾಯ್ದೆಯ ನಿಯಮಗಳಲ್ಲದೆ ಸಿಸಿಟಿವಿ ನಿಗಾವಣೆ ನಿಯಮಗಳು ಹಾಗೂ ರಸ್ತೆ ಸುರಕ್ಷತಾ ಕ್ರಮಗಳನ್ನು ಪಾಲಿಸಿರುವ ಕುರಿತು ವರದಿಗಳನ್ನು ಸಲ್ಲಿಸುವಂತೆ 23 ರಾಜ್ಯಗಳು ಹಾಗೂ 7 ಕೇಂದ್ರಾಡಳಿತ ಪ್ರದೇಶಗಳಿಗೆ ಸೋಮವಾರ ಸುಪ್ರೀಂ ಕೋರ್ಟ್ ಮಹತ್ವದ ಆದೇಶ ನೀಡಿದೆ.
ಪಶ್ಚಿಮ ಬಂಗಾಳ, ಮಹಾರಾಷ್ಟ್ರರ, ತಮಿಳುನಾಡು, ಕರ್ನಾಟಕ, ಕೇರಳ ಹಾಗೂ ದಿಲ್ಲಿ ಸೇರಿದಂತೆ ಒಟ್ಟು ಆರು ರಾಜ್ಯಗಳು ಹಾಗೂ ಒಂದು ಕೇಂದ್ರಾಡಳಿತ ಪ್ರದೇಶ ನಿಯಮ ಪಾಲನೆ ವರದಿಗಳನ್ನು ಸಲ್ಲಿಸಿವೆ ಎಂದು ನ್ಯಾ. ಅಭಯ್ ಎಸ್. ಓಕಾ ಹಾಗೂ ಉಜ್ಜಲ್ ಭುಯಾನ್ ಅವರನ್ನೊಳಗೊಂಡ ನ್ಯಾಯಪೀಠ ಹೇಳಿತು.
ವೇಗವಾಗಿ ಚಲಿಸುವ ವಾಹನಗಳ ಮೇಲೆ ಸಿಸಿಟಿವಿ ನಿಗಾವಣೆಗೆ ಪ್ರಾಧಿಕಾರಗಳಿಗೆ ಅವಕಾಶ ನೀಡುವ ಮೋಟಾರ್ ವಾಹನ ಕಾಯ್ದೆಯ ಸೆಕ್ಷನ್ 136ಎ ಹಾಗೂ ಮೋಟಾರು ವಾಹನಗಳ ನಿಯಮಗಳ ನಿಯಮ 167ಎ ಅನ್ನು ಜಾರಿಗೊಳಿಸಲು ಸೆಪ್ಟೆಂಬರ್ 2, 2024ರಂದು ಸುಪ್ರೀಂ ಕೋರ್ಟ್ ನಿರ್ದೇಶನ ನೀಡಿತ್ತು.
ಇದೀಗ ನಿಯಮ ಪಾಲನೆ ವರದಿಗಳನ್ನು ಸಲ್ಲಿಸುವಂತೆ 23 ರಾಜ್ಯಗಳು ಹಾಗೂ 7 ಕೇಂದ್ರಾಡಳಿತ ಪ್ರದೇಶಗಳಿಗೆ ನ್ಯಾಯಪೀಠ ಸೂಚಿಸಿದ್ದು, ಈ ವರದಿಗಳನ್ನು ಸುಪ್ರೀಂ ಕೋರ್ಟ್ ರಸ್ತೆ ಸುರಕ್ಷತಾ ಸಮಿತಿಯೊಂದಿಗೆ ಹಂಚಿಕೊಳ್ಳಲಾಗುತ್ತದೆ.