Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ದೂರುದಾರರ ಅರ್ಜಿಯಲ್ಲಿ ಮಾಜಿ ಮುಖ್ಯ...

ದೂರುದಾರರ ಅರ್ಜಿಯಲ್ಲಿ ಮಾಜಿ ಮುಖ್ಯ ನ್ಯಾಯಾಧೀಶರ ಹೆಸರು ಪ್ರಸ್ತಾಪ: ಅರ್ಜಿದಾರ ವಕೀಲ ಮತ್ತು ನ್ಯಾಯಾಧೀಶರ ನಡುವೆ ವಾಗ್ವಾದ

►ಮಾಜಿ ಸಿಜೆಐ ರಂಜನ್ ಗೊಗೊಯಿ ವಿರುದ್ಧ ವಿಚಾರಣೆಗೆ ಮನವಿ ಮಾಡಿದ್ದ ಅರ್ಜಿದಾರ ►ಅರ್ಜಿದಾರರನ್ನು ನ್ಯಾಯಾಲಯದ ಕೊಠಡಿಯಿಂದ ಹೊರ ಹಾಕುವಂತೆ ಸೂಚಿಸಿದ ಸುಪ್ರೀಂ ಕೋರ್ಟ್

ವಾರ್ತಾಭಾರತಿವಾರ್ತಾಭಾರತಿ16 Oct 2024 5:17 PM IST
share
ದೂರುದಾರರ ಅರ್ಜಿಯಲ್ಲಿ ಮಾಜಿ ಮುಖ್ಯ ನ್ಯಾಯಾಧೀಶರ ಹೆಸರು ಪ್ರಸ್ತಾಪ: ಅರ್ಜಿದಾರ ವಕೀಲ ಮತ್ತು ನ್ಯಾಯಾಧೀಶರ ನಡುವೆ ವಾಗ್ವಾದ

ಹೊಸದಿಲ್ಲಿ: ಮಾಜಿ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯಿ ವಿರುದ್ಧ ತನಿಖೆಗೆ ಆದೇಶಿಸಬೇಕು ಎಂದು ಮನವಿ ಮಾಡಿದ್ದ ಅರ್ಜಿದಾರ ವಕೀಲರು ಹಾಗೂ ನ್ಯಾಯಾಧೀಶರ ನಡುವಿನ ವಾಗ್ವಾದಕ್ಕೆ ಮಂಗಳವಾರ ಸುಪ್ರೀಂಕೋರ್ಟ್ ಸಾಕ್ಷಿಯಾಯಿತು. ಇದರ ಬೆನ್ನಿಗೇ ಭದ್ರತಾ ಸಿಬ್ಬಂದಿಗಳನ್ನು ಕರೆಸಿಕೊಂಡ ಸುಪ್ರೀಂಕೋರ್ಟ್ ನ್ಯಾಯಪೀಠ, ಅರ್ಜಿದಾರರನ್ನು ನ್ಯಾಯಾಲಯದ ಕೊಠಡಿಯಿಂದ ಹೊರ ಹಾಕುವಂತೆ ಸೂಚಿಸಿತು ಎಂದು Bar and Bench ಸುದ್ದಿ ಸಂಸ್ಥೆ ವರದಿ ಮಾಡಿದೆ.

ಅರ್ಜುನ್ ರಾಮಚಂದ್ರ ಹುಬ್ಳೀಕರ್ ದಾಖಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾ. ಬೇಲಾ ಎಂ. ತ್ರಿವೇದಿ ಹಾಗೂ ನ್ಯಾ. ಸತೀಶ್ ಚಂದ್ರ ಶರ್ಮ ಅವರನ್ನೊಳಗೊಂಡ ನ್ಯಾಯಪೀಠವು, ಕೊನೆಗೆ ಅರ್ಜಿಯನ್ನು ವಜಾಗೊಳಿಸಿತು.

ಹುಬ್ಳೀಕರ್ ಅವರಿಂದ ಪದೇ ಪದೇ ಸಲ್ಲಿಕೆಯಾಗುತ್ತಿರುವ ಅರ್ಜಿಗಳ ಬಗ್ಗೆ ನ್ಯಾಯಪೀಠವು ತೀವ್ರ ಅಸಮಾಧಾನ ವ್ಯಕ್ತಪಡಿಸಿತು. "ನಾವು ಇದಕ್ಕೆ ಕೊನೆ ಹಾಡಲಿದ್ದೇವೆ. ಒಂದರ ನಂತರ ಒಂದರಂತೆ ಇಷ್ಟೊಂದು ಅರ್ಜಿಗಳು" ಎಂದು ನ್ಯಾ. ತ್ರಿವೇದಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.

ತೀರ್ಪೊಂದರಲ್ಲಿ ಮಾಜಿ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯಿ ಹಸ್ತಕ್ಷೇಪ ನಡೆಸಿದ್ದಾರೆ. ಅವರ ವಿರುದ್ಧ ಆಂತರಿಕ ವಿಚಾರಣೆ ನಡೆಸಬೇಕು ಎಂದು ವಕೀಲರೂ ಆದ ಹುಬ್ಳೀಕರ್ ತಮ್ಮ ಅರ್ಜಿಯಲ್ಲಿ ಮನವಿ ಮಾಡಿದ್ದರು. ನ್ಯಾ. ಗೊಗೊಯಿ ಅವರ ಕ್ರಮದಿಂದ ನನ್ನ ಜೀವನದ ಮೇಲೆ ಪ್ರತಿಕೂಲ ಪರಿಣಾಮವುಂಟಾಗಿದೆ ಎಂದು ಅವರು ವಾದಿಸಿದರು.

ಆದರೆ, ಅವರ ಮನವಿಯನ್ನು ಪುರಸ್ಕರಿಸಲು ಸಮ್ಮತಿಸದ ನ್ಯಾಯಪೀಠವು, "ನಾವು ದಂಡ ವಿಧಿಸಲಿದ್ದೇವೆ. ಯಾವುದೇ ನ್ಯಾಯಾಧೀಶರ ಹೆಸರನ್ನು ಪ್ರಸ್ತಾಪಿಸಬೇಡಿ. ನಿಮ್ಮ ಪ್ರಕರಣದಲ್ಲಿ ಯಾವುದೇ ಹುರುಳಿಲ್ಲ" ಎಂದು ನ್ಯಾಯಪೀಠವು ಹೇಳಿತು.

"ನಾನು ಸಾಯುವುದರೊಳಗಾದರೂ ನನಗೆ ನ್ಯಾಯ ದೊರೆಯಬೇಕು" ಎಂದು ಹುಬ್ಳೀಕರ್ ಪ್ರತಿಭಟಿಸಿದರು. ಆದರೆ, ತನ್ನ ನಿರ್ಧಾರವನ್ನು ಪುನರುಚ್ಚರಿಸಿದ ನ್ಯಾಯಪೀಠವು, "ಕ್ಷಮಿಸಿ, ನಾವು ಮಧ್ಯಪ್ರವೇಶಿಸಲು ಸಾಧ್ಯವಿಲ್ಲ. ನಿಮ್ಮ ಅರ್ಜಿಗಳನ್ನು ವಜಾಗೊಳಿಸಲಾಗಿದೆ" ಎಂದು ಹೇಳಿತು.

ನ್ಯಾಯಪೀಠವು ಪದೇ ಪದೇ ಎಚ್ಚರಿಕೆ ನೀಡಿದರೂ ಹುಬ್ಳೀಕರ್ ತಮ್ಮ ವಾದವನ್ನು ಮುಂದುವರಿಸಿದ್ದರಿಂದ, ನ್ಯಾಯಪೀಠವು ಭದ್ರತಾ ಸಿಬ್ಬಂದಿಗಳನ್ನು ಕರೆದು, ಹುಬ್ಳೀಕರ್ ಅವರನ್ನು ನ್ಯಾಯಾಲಯದ ಕೊಠಡಿಯಿಂದ ಹೊರ ಹಾಕುವಂತೆ ಸೂಚಿಸಿತು. ಈ ಹಂತದಲ್ಲಿ ನ್ಯಾಯಾಲಯದ ಕೊಠಡಿಯಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಯಿತು. ತಮ್ಮ ಪ್ರಕರಣದಲ್ಲಿ ನೋಟಿಸ್ ಜಾರಿಗೊಳಿಸಲು ನಿರಾಕರಿಸಿದ ನ್ಯಾಯಾಲಯದ ಕ್ರಮವನ್ನೂ ಹುಬ್ಳೀಕರ್ ಪ್ರಶ್ನಿಸಿದರು. ಭದ್ರತಾ ಸಿಬ್ಬಂದಿಗಳು ಮಧ್ಯಪ್ರವೇಶಿಸುವುದಕ್ಕೂ ಮುನ್ನ, "ಮೇಡಂ, ನೀವು ನನಗೆ ಅನ್ಯಾಯವೆಸಗುತ್ತಿದ್ದೀರಿ" ಎಂದು ಹುಬ್ಳೀಕರ್ ಆರೋಪಿಸಿದರು.

ನ್ಯಾಯಾಂಗದೊಂದಿಗೆ ಹುಬ್ಳೀಕರ್ ಸಂಘರ್ಷ ನಡರಸಿರುವುದು ಇದೇ ಮೊದಲ ಬಾರಿಯಲ್ಲ.

ಇದಕ್ಕೂ ಮುನ್ನ, ಸೆಪ್ಟೆಂಬರ್‌ 30ರಂದು ನಡೆದಿದ್ದ ವಿಚಾರಣೆಯ ಸಂದರ್ಭದಲ್ಲಿ, ಪ್ರಕರಣದ ವಿಚಾರಣೆಯ ನೇತೃತ್ವ ವಹಿಸಿದ್ದ ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ಕೂಡಾ ಪ್ರತಿವಾದಿಗಳ ಪಟ್ಟಿಯಲ್ಲಿ ನ್ಯಾ. ರಂಜನ್ ಗೊಗೊಯಿ ಅವರ ಹೆಸರು ಸೇರ್ಪಡೆ ಮಾಡಲು ಆಕ್ಷೇಪಿಸಿದ್ದರು ಹಾಗೂ ಪ್ರತಿವಾದಿಗಳ ಪಟ್ಟಿಯಿಂದ ಅವರ ಹೆಸರು ತೆಗೆದು ಹಾಕಲು ಹುಬ್ಳೀಕರ್ ಅವರಿಗೆ ಸೂಚಿಸಿದ್ದರು. ಸಾರ್ವಜನಿಕ ಹಿತಾಸಕ್ತಿ ಅರ್ಜಿಯಲ್ಲಿ ಮಾಜಿ ನ್ಯಾಯಾಧೀಶರ ಹೆಸರು ಸೇರ್ಪಡೆ ಮಾಡುವುದರಿಂದ ನ್ಯಾಯಾಂಗದ ಗೌರವಕ್ಕೆ ಧಕ್ಕೆಯಾಗುತ್ತದೆ ಎಂದು ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ಅಭಿಪ್ರಾಯ ಪಟ್ಟಿದ್ದರು.

ಇದರ ಬೆನ್ನಿಗೇ, ಮಂಗಳವಾರ ಹುಬ್ಳೀಕರ್ ಅವರ ಅರ್ಜಿಯನ್ನು ಸುಪ್ರೀಂಕೋರ್ಟ್ ವಜಾಗೊಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X