Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಶೋಕಾಸ್ ನೋಟಿಸ್, ವೀಡಿಯೊ ರೆಕಾರ್ಡಿಂಗ್:...

ಶೋಕಾಸ್ ನೋಟಿಸ್, ವೀಡಿಯೊ ರೆಕಾರ್ಡಿಂಗ್: ಬುಲ್ಡೋಝರ್ ಕಾರ್ಯಾಚರಣೆಗೆ ಮಾರ್ಗಸೂಚಿ ಪ್ರಕಟಿಸಿದ ಸುಪ್ರೀಂಕೋರ್ಟ್

ಕಾನೂನು ಬಾಹಿರ ತೆರವು ಕಾರ್ಯಚರಣೆ ನಡೆಸಿದರೆ ಅಧಿಕಾರಿಗಳೇ ಹೊಣೆಗಾರರು ಎಂದ ನ್ಯಾಯಾಲಯ

ವಾರ್ತಾಭಾರತಿವಾರ್ತಾಭಾರತಿ13 Nov 2024 12:22 PM IST
share
Photo of Supreme court of India

ಹೊಸದಿಲ್ಲಿ: ಬುಲ್ಡೋಝರ್ ನ್ಯಾಯ ಕಾನೂನುಬಾಹಿರವಾಗಿದೆ ಎಂದು‌ ಮಹತ್ವದ ತೀರ್ಪು ನೀಡಿದ ಸುಪ್ರೀಂಕೋರ್ಟ್, ಬುಲ್ಡೋಝರ್ ಕಾರ್ಯಾಚರಣೆಗೆ ಮಾರ್ಗಸೂಚಿ ಪ್ರಕಟಿಸಿದೆ. ಒಂದು ವೇಳೆ ಕಾನೂನು ಬಾಹಿರ ತೆರವು ಕಾರ್ಯಚರಣೆ ನಡೆಸಿದರೆ ಅಧಿಕಾರಿಗಳೇ ಹೊಣೆಗಾರರು ಎಂದು ಸುಪ್ರೀಂಕೋರ್ಟ್‌ ಹೇಳಿದೆ.

ಅಕ್ರಮ ಕಟ್ಟಡಗಳನ್ನು ಕೆಡವುವ ಮುನ್ನ ಅನುಸರಿಸಬೇಕಾದ ಸುಪ್ರೀಂ ಕೋರ್ಟ್ ಮಾರ್ಗಸೂಚಿಗಳು:

► ಯಾವುದೇ ಆಸ್ತಿಯನ್ನು ನೆಲಸಮ ಮಾಡುವ ಮೊದಲು ಕನಿಷ್ಠ 15 ದಿನಗಳ ಕಾಲಾವಕಾಶ ನೀಡಬೇಕು.

► ರಾತ್ರಿಯಲ್ಲಿ ಮಹಿಳೆಯರು, ಮಕ್ಕಳನ್ನು ಬೀದಿಗೆ ತಳ್ಳುವುದು ಸಮಂಜಸವಲ್ಲ, ಸ್ವಲ್ಪ ಸಮಯ ಕಾಲಾವಕಾಶ ನೀಡಿದರೆ “ಸ್ವರ್ಗ ಕುಸಿಯುವುದಿಲ್ಲ”́(ಆತುರ ಬೇಡ) ಎಂದು ಕೋರ್ಟ್ ಅಭಿಪ್ರಾಯಪಟ್ಟಿದೆ.

► ಸ್ಥಳೀಯ ಪುರಸಭೆಯ ಕಾನೂನುಗಳಲ್ಲಿ ಒದಗಿಸಲಾದ ಸಮಯಕ್ಕೆ ಅನುಗುಣವಾಗಿ 15 ದಿನಗಳ ಮೊದಲು ಪೂರ್ವ ಶೋಕಾಸ್ ನೋಟಿಸ್‌ ನೀಡದೆ ಯಾವುದೇ ತೆರವು ಕಾರ್ಯಾಚರಣೆ ಮಾಡುವಂತಿಲ್ಲ ಎಂದು ಸುಪ್ರೀಂಕೋರ್ಟ್‌ ಹೇಳಿದೆ.

► ರಾಜ್ಯ ಮತ್ತು ಅಧಿಕಾರಿಗಳು ನಿರಂಕುಶ ಮತ್ತು ಅತಿಯಾದ ಕ್ರಮಗಳನ್ನು ತೆಗೆದುಕೊಳ್ಳುವಂತಿಲ್ಲ

► ನೋಟಿಸ್ ಅನ್ನು ನೋಂದಾಯಿತ ಅಂಚೆ ಮೂಲಕವೇ ಮಾಲಕರಿಗೆ ಕಳುಹಿಸಬೇಕು ಸೂಚನೆಯು ಅನಧಿಕೃತ ನಿರ್ಮಾಣದ ಸ್ವರೂಪ, ನಿಯಮಗಳ ಉಲ್ಲಂಘನೆ ಬಗ್ಗೆ ವಿವರಗಳು ಮತ್ತು ಕೆಡವುವಿಕೆಗೆ ಕಾರಣಗಳನ್ನು ಒಳಗೊಂಡಿರಬೇಕು.

► ಗೊತ್ತುಪಡಿಸಿದ ಪ್ರಾಧಿಕಾರವು ಆರೋಪಿಗಳಿಗೆ ವೈಯಕ್ತಿಕವಾಗಿ ವಿಚಾರಣೆಗೆ ಅವಕಾಶ ನೀಡಬೇಕು. ಅಂತಹ ವಿಚಾರಣೆಯ ನಡಾವಳಿಗಳನ್ನು ದಾಖಲಿಸಬೇಕು.

► ಸಾರ್ವಜನಿಕ ಭೂಮಿಯಲ್ಲಿ ಅನಧಿಕೃತವಾಗಿ ಕಟ್ಟಡ ನಿರ್ಮಾಣವಾದರೆ ಅಂತಹ ಸಮಯದಲ್ಲಿ ನಿರ್ದೇಶನ ಅನ್ವಯವಾಗುವುದಿಲ್ಲ.

► ಅಕ್ರಮ ಕಟ್ಟಡಗಳ ಕೆಡವುವ ಪ್ರಕ್ರಿಯೆಯ ವಿಡಿಯೋ ಚಿತ್ರೀಕರಿಸಬೇಕು, ಕಟ್ಟಡ ಕೆಡವುವ ಕುರಿತ ವರದಿಯನ್ನು ಪಾಲಿಕೆ ಆಯುಕ್ತರಿಗೆ ರವಾನಿಸಬೇಕು ಎಂದು ಕೋರ್ಟ್‌ ಮಾರ್ಗಸೂಚಿಯಲ್ಲಿ ಉಲ್ಲೇಖಿಸಿದೆ.

ಇದಲ್ಲದೆ ನ್ಯಾಯಾಲಯದ ನಿರ್ದೇಶನಗಳನ್ನು ಉಲ್ಲಂಘಿಸಿದರೆ ನ್ಯಾಯಾಂಗ ನಿಂದನೆ ಮೊಕದ್ದಮೆ ಹೂಡಲಾಗುವುದು ಎಂದು ಪೀಠವು ಎಚ್ಚರಿಕೆ ನೀಡಿದೆ.

ಒಂದು ವೇಳೆ ತೆರವು ಕಾರ್ಯಾಚರಣೆಯಲ್ಲಿ ನಿಯಮಾವಳಿ ಉಲ್ಲಂಘನೆ ಕಂಡುಬಂದರೆ, ಕೆಡವಲಾದ ಆಸ್ತಿಯ ಮರುಪಾವತಿಗೆ ಅವರೇ ಹೊಣೆಯಾಗುತ್ತಾರೆ ಎಂದು ಅಧಿಕಾರಿಗಳಿಗೆ ತಿಳಿಸಬೇಕು ಎಂದು ನ್ಯಾಯಾಲಯ ಹೇಳಿದೆ. ಇದಕ್ಕೆ ತಗಲುವ ವೆಚ್ಚವನ್ನು ಅಧಿಕಾರಿಗಳ ವೇತನದಿಂದ ವಸೂಲಿ ಮಾಡಲಾಗುವುದು ಎಂದು ನ್ಯಾಯಾಲಯ ಹೇಳಿದೆ.

ಎಲ್ಲಾ ಸ್ಥಳೀಯ ಮುನ್ಸಿಪಲ್ ಅಧಿಕಾರಿಗಳು ಮೂರು ತಿಂಗಳೊಳಗೆ ಈ ಬಗ್ಗೆ ಡಿಜಿಟಲ್ ಪೋರ್ಟಲ್ ಸ್ಥಾಪಿಸಬೇಕು. ಅದರಲ್ಲಿ ಶೋಕಾಸ್ ನೊಟೀಸ್ ಮತ್ತು ಅಕ್ರಮ ಕಟ್ಟಡಗಳ ವಿವರಗಳನ್ನು ದಾಖಲಿಸಬೇಕು ಎಂದು ಕೋರ್ಟ್‌ ಹೇಳಿದೆ.

ಹಿರಿಯ ವಕೀಲರಾದ ಡಾ ಅಭಿಷೇಕ್ ಮನು ಸಿಂಘ್ವಿ, ಸಿಯು ಸಿಂಗ್, ಎಂಆರ್ ಶಂಶಾದ್, ನಿತ್ಯಾ ರಾಮಕೃಷ್ಣನ್, ವಕೀಲರಾದ ಪ್ರಶಾಂತ್ ಭೂಷಣ್, ಮೊಹಮ್ಮದ್ ನಿಝಾಮ್ ಪಾಷಾ, ಫೌಜಿಯಾ ಶೇಖ್, ವಕೀಲ ರಶ್ಮಿ ಸಿಂಗ್ ಮುಂತಾದವರ ಸಲಹೆಗಳಿಗೆ ನ್ಯಾಯಾಲಯ ತನ್ನ ಮೆಚ್ಚುಗೆಯನ್ನು ವ್ಯಕ್ತಪಡಿಸಿದೆ. ಹಿರಿಯ ವಕೀಲ ನಚಿಕೇತ ಜೋಶಿ ಮತ್ತು ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರ ಸಹಕಾರವನ್ನು ನ್ಯಾಯಾಲಯ ಶ್ಲಾಘಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X