Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಚುನಾವಣಾ ಬಾಂಡ್ ಯೋಜನೆ: ತನಿಖಾ ತಂಡ...

ಚುನಾವಣಾ ಬಾಂಡ್ ಯೋಜನೆ: ತನಿಖಾ ತಂಡ ರಚನೆಗೆ ಸುಪ್ರೀಂ ಕೋರ್ಟ್ ನಕಾರ

ವಾರ್ತಾಭಾರತಿವಾರ್ತಾಭಾರತಿ2 Aug 2024 4:24 PM IST
share
ಚುನಾವಣಾ ಬಾಂಡ್ ಯೋಜನೆ: ತನಿಖಾ ತಂಡ ರಚನೆಗೆ ಸುಪ್ರೀಂ ಕೋರ್ಟ್ ನಕಾರ

ಹೊಸದಿಲ್ಲಿ: ರಾಜಕೀಯ ಪಕ್ಷಗಳು ಮತ್ತು ಕಾರ್ಪೊರೇಟ್ ದಾನಿಗಳ ನಡುವೆ ‘ಕೊಟ್ಟು ತೆಗೆದುಕೊಳ್ಳುವ’ ವ್ಯವಸ್ಥೆಗಳ ಆರೋಪಗಳ ನಡುವೆ ಈಗ ನಿಷೇಧಿಸಲಾಗಿರುವ ಚುನಾವಣಾ ಬಾಂಡ್‌ಗಳ ಮಾರಾಟ ಕುರಿತು ಸುಪ್ರೀಂ ಕೋರ್ಟ್‌ನ ನಿವೃತ್ತ ನ್ಯಾಯಾಧೀಶರ ಮೇಲ್ವಿಚಾರಣೆಯಲ್ಲಿ ನ್ಯಾಯಾಲಯದ ನಿಗಾದಡಿ ವಿಶೇಷ ತನಿಖಾ ತಂಡ (ಎಸ್‌ಐಟಿ)ದಿಂದ ತನಿಖೆಯನ್ನು ಕೋರಿ ಸಲ್ಲಿಸಲಾಗಿದ್ದ ಅರ್ಜಿಗಳನ್ನು ಸರ್ವೋಚ್ಚ ನ್ಯಾಯಾಲಯವು ಶುಕ್ರವಾರ ವಜಾಗೊಳಿಸಿದೆ.

ರಾಜಕೀಯ ಪಕ್ಷ ಮತ್ತು ಕಾರ್ಪೊರೇಟ್ ಸಂಸ್ಥೆಯ ನಡುವೆ ‘ಕೊಟ್ಟು ತೆಗೆದುಕೊಳ್ಳುವ’ ವ್ಯವಹಾರದ ಆರೋಪಗಳನ್ನು ಮಾಡಿರುವ ವೈಯಕ್ತಿಕ ದೂರುಗಳನ್ನು ಕಾನೂನಿನಡಿ ಲಭ್ಯವಿರುವ ಪರಿಹಾರದ ಆಧಾರದಲ್ಲಿ ನಿರ್ವಹಿಸಬೇಕು ಮತ್ತು ಅದು ನಿರ್ದಿಷ್ಟ ಆರೋಪಗಳ ಕುರಿತು ತನಿಖೆಗೆ ಅಧಿಕಾರಿಗಳು ನಿರಾಕರಿಸಿದರೆ ಆಯ್ಕೆಗಳನ್ನು ಒಳಗೊಂಡಿರುತ್ತದೆ ಎಂದು ಹೇಳಿದ ಸರ್ವೋಚ್ಚ ನ್ಯಾಯಾಲಯವು, ಈ ವಿಷಯದಲ್ಲಿ ಈ ನ್ಯಾಯಾಲಯವು ಮಧ್ಯಪ್ರವೇಶಿಸುವುದು ಸಕಾಲಿಕವಲ್ಲ ಮತ್ತು ಸೂಕ್ತವಲ್ಲ, ಏಕೆಂದರೆ ಎಲ್ಲ ಪರಿಹಾರಗಳ ವೈಫಲ್ಯದ ನಂತರವೇ ಮಧ್ಯಪ್ರವೇಶಕ್ಕೆ ಮುಂದಾಗಬೇಕು. ಈ ಸಾಮಾನ್ಯ ಪರಿಹಾರಗಳು ಪರಿಣಾಮಕಾರಿಯಲ್ಲ ಎಂದು ಈ ಹಂತದಲ್ಲಿ ನ್ಯಾಯಾಲಯವು ಹೇಳಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿತು.

ನ್ಯಾಯಾಲಯದ ಮೇಲ್ವಿಚಾರಣೆಯಲ್ಲಿ ಎಸ್‌ಐಟಿ ತನಿಖೆಯನ್ನು ಕೋರಿದ ಅರ್ಜಿ ಸೇರಿದಂತೆ ಚುನಾವಣಾ ಬಾಂಡ್‌ಗಳಿಗೆ ಸಂಬಂಧಿಸಿದ ನಾಲ್ಕು ಅರ್ಜಿಗಳನ್ನು ಸರ್ವೋಚ್ಚ ನ್ಯಾಯಾಲಯವು ಕೈಗೆತ್ತಿಕೊಂಡಿತ್ತು.

ಸರಕಾರಗಳು,ಆಡಳಿತ ಪಕ್ಷ ಮತ್ತು ಪ್ರಮುಖ ಕಾರ್ಪೊರೇಟ್ ಸಂಸ್ಥೆಗಳು ಭಾಗಿಯಾಗಿರುವುದರಿಂದ ಈ ವಿಷಯವು ವಿಶೇಷ ತನಿಖೆಗೆ ಅರ್ಹವಾಗಿದೆ ಎಂದು ವಾದಿಸಿದ ಹಿರಿಯ ನ್ಯಾಯವಾದಿ ಪ್ರಶಾಂತ ಭೂಷಣ ಅವರು,8,000 ಕೋಟಿ ರೂ.ಗೂ ಅಧಿಕ ಹಣ ಕೈಬದಲಾಗಿದೆ. ಕೆಲವು ಪ್ರಕರಣಗಳಲ್ಲಿ,ತೊಂದರೆಗಳಲ್ಲಿ ಸಿಕ್ಕಿಕೊಂಡಿದ್ದ ಕಂಪನಿಗಳು ಅವುಗಳಿಂದ ಪಾರಾಗಲು ಚುನಾವಣಾ ಬಾಂಡ್‌ಗಳ ಮೂಲಕ ದೇಣಿಗೆಗಳನ್ನು ನೀಡಿವೆ. ಉದಾಹರಣೆಗೆ ತಮಿಳುನಾಡಿನಲ್ಲಿ ಸಮಸ್ಯೆಗಳನ್ನು ಎದುರಿಸುತ್ತಿದ್ದ ಐಎಫ್‌ಬಿ ಆಗ್ರೋ ಬಾಂಡ್‌ಗಳ ರೂಪದಲ್ಲಿ 40 ಕೋಟಿ ರೂ.ಗಳನ್ನು ಪಾವತಿಸಿತ್ತು. ಇದು ಒಂದು ರಾಜಕೀಯ ಪಕ್ಷಕ್ಕೆ ಸೀಮಿತವಲ್ಲ ಎಂದರು.

ಇದು ಭ್ರಷ್ಟಾಚಾರದ ಅಸಾಧಾರಣ ಪ್ರಕರಣ,ಭಾರತದ ಇತಿಹಾಸದಲ್ಲಿ ಅತ್ಯಂತ ಕೆಟ್ಟ ಹಣಕಾಸು ಹಗರಣಗಳಲ್ಲಿ ಒಂದಾಗಿದೆ. ಈ ನ್ಯಾಯಾಲಯದ ನಿವೃತ್ತ ನ್ಯಾಯಾಧೀಶರ ಮೇಲ್ವಿಚಾರಣೆಯಲ್ಲಿ ತನಿಖೆಯ ಹೊರತು ಇದರಲ್ಲಿ ಯಾವುದೂ ಹೊರಗೆ ಬರುವುದಿಲ್ಲ. ಕಿಕ್‌ಬ್ಯಾಕ್‌ಗಳು ಮತ್ತು ಲಂಚಗಳ ಮೂಲಕ ಗಳಿಸಿದ ಹಣವನ್ನು ಅನುಭವಿಸಲು ಯಾವುದೇ ರಾಜಕೀಯ ಪಕ್ಷಕ್ಕೆ ಅವಕಾಶ ನೀಡಕೂಡದು ಎಂದು ಭೂಷಣ ವಾದಿಸಿದರು.

‘ದಾನಿಗಳು ಮತ್ತು ಅವರಿಂದ ಹಣವನ್ನು ಸ್ವೀಕರಿಸಿದ ರಾಜಕೀಯ ಪಕ್ಷಗಳ ಹೆಸರುಗಳು ಮತ್ತು ಇತರ ವಿವರಗಳನ್ನು ಬಹಿರಂಗಗೊಳಿಸಲು ನಾವು ಎಸ್‌ಬಿಐಗೆ ಆದೇಶಿಸಿದ್ದೆವು ಮತ್ತು ಈ ಆದೇಶದ ಪಾಲನೆಯಾಗಿದೆ. ಒಂದು ಹಂತದವರೆಗೆ ನಾವು ಹೋಗಿದ್ದೆವು, ನಾವು ಚುನಾವಣಾ ಬಾಂಡ್ ಯೋಜನೆಯನ್ನು ರದ್ದುಗೊಳಿಸಿದ್ದೇವೆ. ಈಗ ಎಸ್‌ಐಟಿ ಏನನ್ನು ತನಿಖೆ ಮಾಡುತ್ತದೆ? ಕಾನೂನಿನಡಿ ಪರಿಹಾರಗಳು ಲಭ್ಯವಿರುವಾಗ ಎಸ್‌ಐಟಿ ಅನ್ನು ನೇಮಿಸುವ ಅಗತ್ಯವಿಲ್ಲ’ ಎಂದು ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ನೇತೃತ್ವದ ಪೀಠವು ಹೇಳಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X