ಉನ್ನಾವೋ ಅತ್ಯಾಚಾರ ಪ್ರಕರಣ: ಕುಲದೀಪ್ ಸೆಂಗಾರ್ ಜಾಮೀನಿಗೆ ಸುಪ್ರೀಂಕೋರ್ಟ್ ತಡೆ

ಕುಲದೀಪ್ ಸೆಂಗಾರ್ (File Photo: PTI)
ಹೊಸದಿಲ್ಲಿ : ಉನ್ನಾವೋ ಅತ್ಯಾಚಾರ ಪ್ರಕರಣದಲ್ಲಿ ದೋಷಿಯಾಗಿರುವ ಬಿಜೆಪಿಯ ಉಚ್ಚಾಟಿತ ಮಾಜಿ ಶಾಸಕ ಕುಲದೀಪ್ ಸಿಂಗ್ ಸೆಂಗಾರ್ ಗೆ ಜಾಮೀನು ನೀಡಿದ್ದ ದಿಲ್ಲಿ ಹೈಕೋರ್ಟ್ ಆದೇಶವನ್ನು ಸುಪ್ರೀಂ ಕೋರ್ಟ್ ಸೋಮವಾರ ತಡೆಹಿಡಿದಿದೆ. ಇದರೊಂದಿಗೆ, ಸೆಂಗಾರ್ ನನ್ನು ಜೈಲಿನಿಂದ ಬಿಡುಗಡೆ ಮಾಡಲಾಗುವುದಿಲ್ಲ ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ.
ಭಾರತದ ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ನೇತೃತ್ವದ ಪೀಠವು, ಈ ಪ್ರಕರಣವು ‘ಕಾನೂನಿನ ಬಗ್ಗೆ ಗಣನೀಯ ಪ್ರಶ್ನೆಗಳನ್ನು’ ಹುಟ್ಟುಹಾಕಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿ, ವಿಷಯಕ್ಕೆ ಸಂಬಂಧಿಸಿದಂತೆ ನೋಟಿಸ್ ಜಾರಿಗೊಳಿಸಿದೆ. ಹೈಕೋರ್ಟ್ ನೀಡಿದ್ದ ಜಾಮೀನು ಆದೇಶಕ್ಕೆ ತಡೆ ನೀಡಿದ ನ್ಯಾಯಾಲಯ, ಸೆಂಗಾರ್ ಈಗಾಗಲೇ ಮತ್ತೊಂದು ಕ್ರಿಮಿನಲ್ ಪ್ರಕರಣದಲ್ಲಿ ಶಿಕ್ಷೆ ಅನುಭವಿಸುತ್ತಿರುವುದನ್ನೂ ಉಲ್ಲೇಖಿಸಿದೆ. .
Next Story





