Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಸಿಂಧೂ ಜಲ ಒಪ್ಪಂದ ಕೈಬಿಡುವ ಘೋಷಣೆ...

ಸಿಂಧೂ ಜಲ ಒಪ್ಪಂದ ಕೈಬಿಡುವ ಘೋಷಣೆ ಜನರನ್ನು ಮೂರ್ಖರನ್ನಾಗಿಸುವ ತಂತ್ರ: ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ

ಸಿಂಧೂ ನದಿ ನೀರನ್ನು ನಿಲ್ಲಿಸಲು 20 ವರ್ಷ ಬೇಕಾದಿತು ಎಂದ ಸ್ವಾಮೀಜಿ

ವಾರ್ತಾಭಾರತಿವಾರ್ತಾಭಾರತಿ26 April 2025 5:19 PM IST
share
ಸಿಂಧೂ ಜಲ ಒಪ್ಪಂದ ಕೈಬಿಡುವ ಘೋಷಣೆ ಜನರನ್ನು ಮೂರ್ಖರನ್ನಾಗಿಸುವ ತಂತ್ರ: ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ

ಹೊಸದಿಲ್ಲಿ: ಪಹಲ್ಲಾಮ್ ಭಯೋತ್ಪಾದಕ ದಾಳಿ ಬೆನ್ನಲ್ಲೇ ಪಾಕ್ ವಿರುದ್ಧ ಕಠಿಣ ಕ್ರಮಕೈಗೊಳ್ಳಲು ಮುಂದಾದ ಭಾರತ ಸರಕಾರ ಪಾಕಿಸ್ತಾನದ ಜೊತೆಗಿನ ಸಿಂಧೂ ಜಲ ಒಪ್ಪಂದವನ್ನು ಕೈಬಿಡುವ ಬಗ್ಗೆ ಘೋಷಿಸಿತ್ತು. ಈ ಬಗ್ಗೆ ಪ್ರತಿಕ್ರಿಯಿಸಿದ ಉತ್ತರ ಪ್ರದೇಶದ ಆಗ್ರಾದಲ್ಲಿರುವ ಶಾರದಾ ಪೀಠದ ಶಂಕರಾಚಾರ್ಯ ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ, ಇದು ಜನರನ್ನು ಮೂರ್ಖರನ್ನಾಗಿ ಮಾಡುವ ಘೋಷಣೆಯಷ್ಟೇ ಎಂದು ಹೇಳಿದ್ದಾರೆ.

ಈ ಕುರಿತು ಮಾಧ್ಯಮಗಳಿಗೆ ವಿಡಿಯೋ ಹೇಳಿಕೆ ಬಿಡುಗಡೆ ಮಾಡಿರುವ ಶಂಕರಾಚಾರ್ಯ ಸ್ವಾಮಿ, ಸಿಂಧೂ ನದಿ ನೀರನ್ನು ನಿಲ್ಲಿಸಲು ಮೋದಿ ಸರಕಾರದ ಬಳಿ ಯಾವುದೇ ವ್ಯವಸ್ಥೆಯಿಲ್ಲ. ಇದಕ್ಕೆ ಎಷ್ಟು ವೆಚ್ಚವಾಗುತ್ತದೆ ಎಂಬುವುದನ್ನು ಬಿಟ್ಟುಬಿಡಿ. ನದಿ ನೀರು ಪಾಕಿಸ್ತಾನಕ್ಕೆ ಹರಿಯದಂತೆ ತಡೆಯಲು ವ್ಯವಸ್ಥೆ ಸಿದ್ಧಪಡಿಸಲು ಭಾರತಕ್ಕೆ ಕನಿಷ್ಠ 20 ವರ್ಷಗಳು ಬೇಕಾಗಬಹುದು. ಇದರರ್ಥ ಕೇಂದ್ರ ಸರಕಾರ ಸಾರ್ವಜನಿಕರನ್ನು ಮೂರ್ಖರನ್ನಾಗಿ ಮಾಡುತ್ತಿದೆ ಎಂದು ಹೇಳಿದ್ದಾರೆ.

ಪಹಲ್ಲಾಮ್‌ನಲ್ಲಿ ಹಿಂದೂಗಳ ಮೇಲಿನ ದಾಳಿಯು ಯೋಜಿತ ಪಿತೂರಿಯ ಭಾಗವಾಗಿದೆ. ಒಬ್ಬರ ಧರ್ಮ ಯಾವುದೆಂದು ಕೇಳಿ ಅವರನ್ನು ಕೊಲ್ಲುವುದು ಅನಾಗರಿಕತೆಯ ಸಂಕೇತ. ಇದು ಭಯೋತ್ಪಾದಕರಿಂದ ಯುದ್ಧದ ನೇರ ಎಚ್ಚರಿಕೆಯಾಗಿದೆ. ಸರಕಾರ ಈ ಬಗ್ಗೆ ಕಠಿಣ ಕ್ರಮಗಳನ್ನು ಕೈಗೊಳ್ಳಬೇಕು. ಸಿಂಧೂ ನದಿ ನೀರು ಒಪ್ಪಂದವನ್ನು ಕೊನೆಗೊಳಿಸುತ್ತೇವೆ ಎಂದು ಹೇಳಿಕೊಂಡು ಜನರನ್ನು ಮೋಸಗೊಳಿಸಲು ಸಾಧ್ಯವಿಲ್ಲ. ಮೊದಲನೆಯದಾಗಿ, ಭಯೋತ್ಪಾದಕ ದಾಳಿಗೆ ಕಾರಣರಾದವರನ್ನು ಗುರುತಿಸಿ ಮತ್ತು ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಿ ಎಂದು ಆಗ್ರಹಿಸಿದ್ದಾರೆ.

ಪಾಕಿಸ್ತಾನಕ್ಕೆ ನದಿ ನೀರು ಸರಬರಾಜು ಸ್ಥಗಿತಗೊಳಿಸುವುದು ನಿಜವಾಗಿಯೂ ಸಾಧ್ಯವೇ? ನೀರು ಸರಬರಾಜು ಸ್ಥಗಿತಗೊಳಿಸುವುದಾಗಿ ಬೆದರಿಕೆ ಹಾಕುವುದರಿಂದ ಈ ಭಯೋತ್ಪಾದಕ ಚಟುವಟಿಕೆ ನಿಲ್ಲುವುದಿಲ್ಲ. ಭಯೋತ್ಪಾದಕರ ವಿರುದ್ಧ ನೇರವಾದ ಕ್ರಮವನ್ನು ಕೈಗೊಳ್ಳಬೇಕು. ಮೋದಿ ಸರಕಾರ ಮತ್ತು ಜಮ್ಮುಕಾಶ್ಮೀರದ ಉಮರ್ ಅಬ್ದುಲ್ಲಾ ಸರಕಾರ ತಮ್ಮ ಜವಾಬ್ದಾರಿಯಿಂದ ತಪ್ಪಿಸಿಕೊಳ್ಳುವಂತಿಲ್ಲ. ಭಯೋತ್ಪಾದಕರು ಪಹಲ್ಗಾಮ್‌ ಪ್ರವೇಶಿಸಿ ಪ್ರವಾಸಿಗರನ್ನು ಹೇಗೆ ಗುರಿಯಾಗಿಸಿಕೊಂಡರು? ಸುರಕ್ಷಿತ ಕಾಶ್ಮೀರದ ಕುರಿತು ನಿಮ್ಮ ಹೇಳಿಕೆಗಳು ಈಗ ಎಲ್ಲಿಗೆ ಹೋಗಿವೆ? ವಿಧಿ 370ರ ರದ್ಧತಿ ಬಳಿಕ ಕಾಶ್ಮೀರದಲ್ಲಿ ಶಾಂತಿಯ ಭರವಸೆಗಳು ಏನಾದವು? ಎಂದು ಮೋದಿ ಸರಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X