ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿಯಿಂದ ಸಂಸ್ಕೃತದಲ್ಲಿ ಪ್ರಮಾಣ ವಚನ ಸ್ವೀಕಾರ

ವಿಶ್ವೇಶ್ವರ ಹೆಗಡೆ ಕಾಗೇರಿ | PC : X
ಹೊಸದಿಲ್ಲಿ: ಕರ್ನಾಟಕದ ಉತ್ತರಕನ್ನಡ ಲೋಕಸಭಾ ಕ್ಷೇತ್ರದಿಂದ ಸಂಸದರಾಗಿ ಚುನಾಯಿತರಾಗಿರುವ ಬಿಜೆಪಿ ಪಕ್ಷದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಸಂಸ್ಕೃತದಲ್ಲಿ ಸಂಸದರಾಗಿ ಪ್ರಮಾಣ ವಚನ ಸ್ವೀಕರಿಸಿದರು.
ಕರ್ನಾಟಕದಿಂದ ಲೋಕಸಭೆಗೆ ಆಯ್ಕೆಯಾದ ಸಂಸದರು ಸೋಮವಾರ ಸಂಸತ್ನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ವಿಶ್ವೇಶ್ವರ ಹೆಗಡೆ ಕಾಗೇರಿ ಹೊರತು ಪಡಿಸಿ ರಾಜ್ಯದ ಎಲ್ಲಾ ಸಂಸದರು ಕನ್ನಡದಲ್ಲೇ ಪ್ರಮಾಣವಚನ ಸ್ವೀಕರಿಸಿದರು. ಎಲ್ಲರೂ ದೇವರ ಮೇಲೆ ಪ್ರಮಾಣ ಮಾಡಿದರು. ಮಂಗಳೂರು ಕ್ಷೇತ್ರದ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ತುಳು ದೇವ ದೈವಗಳ ಹೆಸರಿನಲ್ಲಿ ಕನ್ನಡದಲ್ಲಿ ಪ್ರಮಾಣ ವಚನ ಸ್ವೀಕರಿಸಿ ಎಲ್ಲರಿಗೂ ವಂದನೆಗಳು ಎಂದು ತುಳುವಿನಲ್ಲಿ ಹೇಳಿ ಗಮನ ಸೆಳೆದರು.
Next Story