ಬಿಹಾರ: ʼಮಹಾಘಟಬಂಧನ್ʼ ಸಿಎಂ ಅಭ್ಯರ್ಥಿಯಾಗಿ ತೇಜಸ್ವಿ ಯಾದವ್ ಹೆಸರು ಘೋಷಣೆ

ತೇಜಸ್ವಿ ಯಾದವ್ (Photo: PTI)
ಪಾಟ್ನಾ: ವಾರಗಟ್ಟಲೆ ನಡೆದ ಆಂತರಿಕ ಸಭೆಗಳ ಬಳಿಕ ಇಂಡಿಯಾ ಮೈತ್ರಿಕೂಟದ ಮಹಾಘಟಬಂಧನ್ ಕೊನೆಗೂ ತನ್ನ ಮುಖ್ಯಮಂತ್ರಿಯ ಅಭ್ಯರ್ಥಿಯ ಹೆಸರನ್ನು ಅಧಿಕೃತವಾಗಿ ಘೋಷಿಸಿದೆ. ರಾಷ್ಟ್ರೀಯ ಜನತಾ ದಳ (ಆರ್ಜೆಡಿ) ನಾಯಕ ತೇಜಸ್ವಿ ಯಾದವ್ ಅವರನ್ನು ಮಹಾಘಟಬಂಧನ್ನ ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಘೋಷಿಸಲಾಗಿದೆ.
ಪಾಟ್ನಾದಲ್ಲಿ ಆಯೋಜಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಈ ಘೋಷಣೆಯನ್ನು ಮಾಡಲಾಯಿತು. ಬಿಹಾರದ ಪ್ರಮುಖ ವಿರೋಧ ಪಕ್ಷಗಳಾದ ಆರ್ಜೆಡಿ, ಕಾಂಗ್ರೆಸ್ ಮತ್ತು ಸಿಪಿಐ(ಎಂಎಲ್) ಸೇರಿದಂತೆ ಇತರ ಮೈತ್ರಿಕೂಟದ ನಾಯಕರು ಈ ಸಂದರ್ಭದಲ್ಲಿ ಹಾಜರಿದ್ದರು.
Next Story





