ಹೊಸ ಸರಕಾರ ಭರವಸೆಗಳನ್ನು ಈಡೇರಿಸುತ್ತದೆ ಎಂದು ಆಶಿಸುತ್ತೇನೆ: ಬಿಹಾರ ಚುನಾವಣಾ ಸೋಲಿನ ನಂತರ ತೇಜಸ್ವಿ ಯಾದವ್ ಮೊದಲ ಪ್ರತಿಕ್ರಿಯೆ

ತೇಜಸ್ವಿ ಯಾದವ್ (Photo: PTI)
ಪಾಟ್ನಾ : ಬಿಹಾರ ಚುನಾವಣಾ ಸೋಲಿನ ಬಳಿಕ ಮೊದಲ ಬಾರಿ ಪ್ರತಿಕ್ರಿಯಿಸಿದ ಆರ್ಜೆಡಿ ಮುಖ್ಯಸ್ಥ ತೇಜಸ್ವಿ ಯಾದವ್, ದಾಖಲೆಯ 10ನೇ ಬಾರಿಗೆ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಜೆಡಿಯು ಮುಖ್ಯಸ್ಥ ನಿತೀಶ್ ಕುಮಾರ್ ಅವರನ್ನು ಅಭಿನಂದಿಸಿದರು. ಹೊಸ ಸರಕಾರ ಚುನಾವಣಾ ಪ್ರಚಾರದ ಸಮಯದಲ್ಲಿ ನೀಡಿದ ಭರವಸೆಗಳನ್ನು ಈಡೇರಿಸಲಿದೆ ಎಂದು ಹೇಳಿದರು.
ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಮಹಾಘಟಬಂಧನ್ ಕೇವಲ 35 ಸ್ಥಾನಗಳನ್ನು ಗಳಿಸಿ ಹಿನ್ನಡೆ ಅನುಭವಿಸಿದ ಬಳಿಕ ಇದೇ ಮೊದಲ ಬಾರಿಗೆ ತೇಜಸ್ವಿ ಯಾದವ್ ಸಾರ್ವಜನಿಕವಾಗಿ ಹೇಳಿಕೆ ನೀಡಿದ್ದಾರೆ.
ಈ ಕುರಿತು ಎಕ್ಸ್ನಲ್ಲಿ ಪೋಸ್ಟ್ ಮಾಡಿರುವ ತೇಜಸ್ವಿ ಯಾದವ್, ಬಿಹಾರದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ನಿತೀಶ್ ಕುಮಾರ್ ಅವರಿಗೆ ಮತ್ತು ಸಚಿವ ಸಂಪುಟದ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದ ಬಿಹಾರ ಸರಕಾರದ ಎಲ್ಲಾ ಸಚಿವರಿಗೆ ಅಭಿನಂದನೆಗಳು ಎಂದು ಹೇಳಿದರು.
“ಹೊಸ ಸರಕಾರ ಜನರ ಆಶಯಗಳು ಮತ್ತು ನಿರೀಕ್ಷೆಗಳನ್ನು ಈಡೇರಿಸುತ್ತದೆ ಮತ್ತು ಬಿಹಾರದ ಜನರ ಜೀವನದಲ್ಲಿ ಸಕಾರಾತ್ಮಕ ಮತ್ತು ಗುಣಾತ್ಮಕ ಬದಲಾವಣೆಗಳನ್ನು ತರುತ್ತದೆ ಎಂದು ನಾನು ಭಾವಿಸುತ್ತೇನೆ" ಎಂದು ಹೇಳಿದರು.
आदरणीय श्री नीतीश कुमार जी को बिहार के मुख्यमंत्री पद की शपथ लेने पर हार्दिक बधाई। मंत्रिपरिषद् के सदस्य के रूप में शपथ लेने वाले बिहार सरकार के सभी मंत्रियों को हार्दिक शुभकामनाएँ।
— Tejashwi Yadav (@yadavtejashwi) November 20, 2025
आशा है नई सरकार जिम्मेदारीपूर्ण लोगों की आशाओं और अपेक्षाओं पर खरा उतर अपने वादों एवं घोषणाओं को…







