ಭಾರತ-ಪಾಕ್ ನಡುವೆ ಉದ್ವಿಗ್ನತೆ | ತಪ್ಪು ಮಾಹಿತಿ, ಸುಳ್ಳು ಸುದ್ದಿಗಳ ಬಗ್ಗೆ ಮಾಹಿತಿ ನೀಡುವಂತೆ ಸರಕಾರದಿಂದ ನಾಗರಿಕರಿಗೆ ಮನವಿ
"ಯಾವುದೇ ಮಾಹಿತಿಗಳನ್ನು ಪರಿಶೀಲಿಸದೆ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳಬೇಡಿ"

ಸಾಂದರ್ಭಿಕ ಚಿತ್ರ | PC : freepik.com
ಹೊಸದಿಲ್ಲಿ: ಭಾರತ-ಪಾಕಿಸ್ತಾನದ ನಡುವಿನ ಉದ್ವಿಗ್ನತೆಯ ಹಿನ್ನಲೆ ಯಾವುದೇ ತಪ್ಪು ಮಾಹಿತಿ, ಸುಳ್ಳು ಸುದ್ದಿಗಳಿದ್ದರೆ ಪ್ರೆಸ್ ಇನ್ಫರ್ಮೇಷನ್ ಬ್ಯೂರೊಗೆ ವರದಿ ಮಾಡುವಂತೆ ಸರಕಾರ ನಾಗರಿಕರನ್ನು ಕೋರಿದೆ.
ಯಾವುದೇ ಮಾಹಿತಿಗಳನ್ನು ಪರಿಶೀಲಿಸದೆ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳಬೇಡಿ, ನಕಲಿ ಸುದ್ದಿಗಳನ್ನು ನಂಬಬೇಡಿ ಎಂದು ಪ್ರೆಸ್ ಇನ್ಫರ್ಮೇಷನ್ ಬ್ಯೂರೊ ನಾಗರಿಕರಿಗೆ ಸಲಹೆಯನ್ನು ನೀಡಿದೆ.
ನಾಗರಿಕರು ಪ್ರೆಸ್ ಇನ್ಫರ್ಮೇಷನ್ ಬ್ಯೂರೊದ +91 8799711259 ಸಂಖ್ಯೆಗೆ ವಾಟ್ಸಾಪ್ ಮೂಲಕ ಅಥವಾ factcheck@pib.gov.inಗೆ ಇಮೇಲ್ ಮೂಲಕ ತಪ್ಪು ಮಾಹಿತಿ ಮತ್ತು ಸುಳ್ಳು ಸುದ್ದಿಗಳ ಬಗ್ಗೆ ಮಾಹಿತಿ ನೀಡಬೇಕು. ನಿಖರವಾದ ಮಾಹಿತಿಗಾಗಿ ಭಾರತ ಸರಕಾರದ ಅಧಿಕೃತ ಖಾತೆಗಳನ್ನು ಮಾತ್ರ ಅನುಸರಿಸಿ ಎಂದು ಪಿಐಬಿ ಸಲಹೆ ನೀಡಿದೆ.
Next Story





