"ವಿಮಾನ ದುರಂತ ನನ್ನನ್ನು ದಿಗ್ಭ್ರಮೆಗೊಳಿಸಿದೆ": ಅಹ್ಮದಾಬಾದ್ನಲ್ಲಿ ವಿಮಾನ ಪತನಕ್ಕೆ ದುಃಖ ವ್ಯಕ್ತಪಡಿಸಿದ ಪ್ರಧಾನಿ ಮೋದಿ

ನರೇಂದ್ರ ಮೋದಿ | PC : PTI
ಅಹ್ಮದಾಬಾದ್ : ಗುಜರಾತ್ನ ಅಹ್ಮದಾಬಾದ್ನಲ್ಲಿ ಸಂಭವಿಸಿದ ವಿಮಾನ ಅಪಘಾತದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ದುಃಖವನ್ನು ವ್ಯಕ್ತಪಡಿಸಿದ್ದಾರೆ.
ಈ ಕುರಿತು ಎಕ್ಸ್ನಲ್ಲಿ ಪೋಸ್ಟ್ ಮಾಡಿರುವ ಪ್ರಧಾನಿ ಮೋದಿ, ಅಹಮದಾಬಾದ್ನಲ್ಲಿ ಸಂಭವಿಸಿದ ವಿಮಾನ ದುರಂತವು ನನ್ನನ್ನು ದಿಗ್ಭ್ರಮೆಗೊಳಿಸಿದೆ ಮತ್ತು ದುಃಖಿತನನ್ನಾಗಿಸಿದೆ. ಇದು ಹೃದಯವಿದ್ರಾವಕವಾಗಿದೆ. ಈ ಕಷ್ಟದ ಸಮಯದಲ್ಲಿ ಎಲ್ಲರ ಮೇಲೆ ನನ್ನ ಪ್ರಾರ್ಥನೆಯಿದೆ. ಸಂತ್ರಸ್ತರಿಗೆ ಸಹಾಯ ಮಾಡಲು ಕೆಲಸ ಮಾಡುತ್ತಿರುವ ಸಚಿವರು ಮತ್ತು ಅಧಿಕಾರಿಗಳೊಂದಿಗೆ ನಿರಂತರವಾಗಿ ಸಂಪರ್ಕದಲ್ಲಿದ್ದೇನೆ ಎಂದು ಹೇಳಿದ್ದಾರೆ.
The tragedy in Ahmedabad has stunned and saddened us. It is heartbreaking beyond words. In this sad hour, my thoughts are with everyone affected by it. Have been in touch with Ministers and authorities who are working to assist those affected.
— Narendra Modi (@narendramodi) June 12, 2025
Next Story







