ಪಶ್ಚಿಮ ಬಂಗಾಳ: ಟಿಎಂಸಿ ಕಾರ್ಯಕರ್ತನ ಹತ್ಯೆ

ಸಾಂದರ್ಭಿಕ ಚಿತ್ರ
ಕೋಲ್ಕತ್ತಾ: ಪಶ್ಚಿಮ ಬಂಗಾಳದ ಮುರ್ಷಿದಾಬಾದ್ ಜಿಲ್ಲೆಯ ಭರತ್ಪುರದಲ್ಲಿ ಟಿಎಂಸಿ ಕಾರ್ಯಕರ್ತನನ್ನು ಅಪರಿಚಿತ ದುಷ್ಕರ್ಮಿಗಳು ಹತ್ಯೆ ಮಾಡಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೋರ್ವರು ಗುರುವಾರ ತಿಳಿಸಿದ್ದಾರೆ.
ಸಸ್ತಿ ಘೋಷ್ ಹತ್ಯೆಯಾದ ಟಿಎಂಸಿ ಕಾರ್ಯಕರ್ತ. ಬುಧವಾರ ರಾತ್ರಿ ಸಸ್ತಿ ಘೋಷ್ ಮೇಲೆ ದುಷ್ಕರ್ಮಿಗಳು ಮಾರಕಾಸ್ತ್ರದಿಂದ ಹಲ್ಲೆ ಮಾಡಿದ್ದಾರೆ. ರಸ್ತೆಯಲ್ಲಿ ರಕ್ತದ ಮಡುವಿನಲ್ಲಿ ಬಿದ್ದಿದ್ದ ಘೋಷ್ ಅವರನ್ನು ಸ್ಥಳೀಯ ಆಸ್ಪತ್ರೆಗೆ ಸಾಗಿಸಲಾಗಿದೆ. ಆದರೆ, ಅವರು ಚಿಕಿತ್ಸೆಗ ಸ್ಪಂದಿಸದೆ ಮೃತಪಟ್ಟಿದ್ದಾರೆ.
ಆಸ್ತಿ ವಿಚಾರಕ್ಕೆ ಸಂಬಂಧಿಸಿದ ವೈಯಕ್ತಿಕ ದ್ವೇಷದಿಂದ ಕೊಲೆ ಸಂಭವಿಸಿರುವ ಸಾಧ್ಯತೆ ಇದೆ. ಈ ಕುರಿತು ಹೆಚ್ಚಿನ ಮಾಹಿತಿ ತನಿಖೆಯಿಂದಲೇ ಹೊರ ಬರಬೇಕಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಆದರೆ, ಟಿಎಂಸಿ ಕಾರ್ಯಕರ್ತನಾಗಿರುವುದರಿಂದ ಘೋಷ್ ಹತ್ಯೆ ನಡೆದಿದೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.
Next Story





