ಉತ್ತರ ಪ್ರದೇಶ: ಶೌಚಗುಂಡಿ ಸ್ವಚ್ಛಗೊಳಿಸುವಾಗ ವಿಷಾನಿಲ ಸೇವಿಸಿ ಬಾಲಕ ಸೇರಿ ಇಬ್ಬರು ಮೃತ್ಯು

ಸಾಂದರ್ಭಿಕ ಚಿತ್ರ (PTI)
ಪ್ರಯಾಗ್ ರಾಜ್: ಶೌಚಗುಂಡಿ ಸ್ವಚ್ಛಗೊಳಿಸುವಾಗ ವಿಷಕಾರಿ ಅನಿಲ ಸೇವಿಸಿ ಬಾಲಕ ಸೇರಿ ಇಬ್ಬರು ಉಸಿರುಗಟ್ಟಿ ಮೃತಪಟ್ಟಿರುವ ಘಟನೆ ಶನಿವಾರ ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿ ನಡೆದಿದೆ.
ಮೃತ ವ್ಯಕ್ತಿಗಳನ್ನು ಧರ್ಮರಾಜ್ (48) ಹಾಗೂ ವಿನಯ್ ಕುಮಾರ್ (16) ಎಂದು ಗುರುತಿಸಲಾಗಿದೆ.
ಪ್ರಯಾಗ್ ರಾಜ್ ಜಿಲ್ಲೆಯ ಸೈದಾಬಾದ್ ನ ಗಂಗಾನಗರದಲ್ಲಿ ಶೌಚಗುಂಡಿಯನ್ನು ಸ್ವಚ್ಛಗೊಳಿಸಲು ಈ ಇಬ್ಬರೂ ಅದರೊಳಗೆ ಇಳಿದಿದ್ದರು. ಈ ವೇಳೆ ವಿಷಕಾರಿ ಅನಿಲ ಸೇವಿಸಿ ಅಸ್ವಸ್ಥಗೊಂಡಿದ್ದಾರೆ. ತಕ್ಷಣವೇ ಸ್ಥಳೀಯರ ನೆರವಿನೊಂದಿಗೆ ಅವರಿಬ್ಬರನ್ನು ಆಸ್ಪತ್ರೆಗೆ ಸಾಗಿಸಿದರೂ, ಮಾರ್ಗಮಧ್ಯೇದಲ್ಲೇ ಅವರಿಬ್ಬರೂ ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದ್ದಾರೆ ಎಂದು ಪ್ರಯಾಗ್ ರಾಜ್ ಸಹಾಯಕ ಪೊಲೀಸ್ ಆಯುಕ್ತ ಸುನೀಲ್ ಕುಮಾರ್ ಸಿಂಗ್ ತಿಳಿಸಿದ್ದಾರೆ.
ಈ ಘಟನೆಯ ಸಂಬಂಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದೂ ಅವರು ಹೇಳಿದ್ದಾರೆ.
Next Story





