ದಿಲ್ಲಿ ವಿಮಾನ ನಿಲ್ದಾಣದಲ್ಲಿ ವಿಮಾನದ ಕಾಕ್ಪಿಟ್ಗೆ ನುಗ್ಗಲು ಯತ್ನಿಸಿದ ಇಬ್ಬರು ಪ್ರಯಾಣಿಕರು

ಸಾಂದರ್ಭಿಕ ಚಿತ್ರ (PTI)
ಹೊಸದಿಲ್ಲಿ : ದಿಲ್ಲಿ ವಿಮಾನ ನಿಲ್ದಾಣದಲ್ಲಿ ಟ್ಯಾಕ್ಸಿಂಗ್ ವೇಳೆ ಸ್ಪೈಸ್ಜೆಟ್ ವಿಮಾನದಲ್ಲಿ ಬಲವಂತವಾಗಿ ಕಾಕ್ಪಿಟ್ಗೆ ನುಗ್ಗಲು ಯತ್ನಿಸಿದ ಇಬ್ಬರು ಪ್ರಯಾಣಿಕರನ್ನು ವಿಮಾನದಿಂದ ಕೆಳಗಿಳಿಸಿ ಭದ್ರತಾ ಸಿಬ್ಬಂದಿಗಳಿಗೆ ಒಪ್ಪಿಸಲಾಗಿದೆ ಎಂದು ಸ್ಪೈಸ್ಜೆಟ್ ತಿಳಿಸಿದೆ.
ದಿಲ್ಲಿಯಿಂದ ಮುಂಬೈಗೆ ಹಾರಾಟ ನಡೆಸುತ್ತಿದ್ದ ಸ್ಪೈಸ್ಜೆಟ್ SG 9282 ವಿಮಾನದಲ್ಲಿ ಟೇಕ್ ಆಫ್ ಆಗುವ ಮುನ್ನ ಈ ಘಟನೆ ಸಂಭವಿಸಿದೆ. ಇಬ್ಬರು ಪ್ರಯಾಣಿಕರನ್ನು ಆ ಬಳಿಕ ವಿಮಾನದಿಂದ ಕೆಳಗಿಳಿಸಲಾಗಿದೆ.
"ಇಬ್ಬರು ಕಾಕ್ಪಿಟ್ಗೆ ಬಲವಂತವಾಗಿ ನುಗ್ಗಲು ಪ್ರಯತ್ನಿಸಿದರು. ಕ್ಯಾಬಿನ್ ಸಿಬ್ಬಂದಿ, ಸಹ ಪ್ರಯಾಣಿಕರು ಮತ್ತು ಕ್ಯಾಪ್ಟನ್ ಪದೇ ಪದೇ ವಿನಂತಿಸಿದರೂ, ಇಬ್ಬರು ಪ್ರಯಾಣಿಕರು ತಮ್ಮ ಸ್ಥಾನಗಳಿಗೆ ಮರಳಲು ನಿರಾಕರಿಸಿದ್ದರು" ಎಂದು ಸ್ಪೈಸ್ಜೆಟ್ ಹೇಳಿಕೆಯಲ್ಲಿ ತಿಳಿಸಿದೆ.
Next Story





