ಜ. 27ರಿಂದ ಉತ್ತರಾಖಂಡದಲ್ಲಿ ಸಮಾನ ನಾಗರಿಕ ಸಂಹಿತೆ ಜಾರಿ: ಸಿಎಂ ಪುಷ್ಕರ್ ಸಿಂಗ್ ಧಾಮಿ ಘೋಷಣೆ

ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ (PTI)
ಡೆಹ್ರಾಡೂನ್: ಜನವರಿ 7ರಿಂದ ಉತ್ತರಾಖಂಡದಲ್ಲಿ ಸಮಾನ ನಾಗರಿಕ ಸಂಹಿತೆ ಜಾರಿಗೊಳಿಸಲಾಗುತ್ತಿದ್ದು, ಇಡೀ ದೇಶದಲ್ಲಿ ಸಮಾನ ನಾಗರಿಕ ಸಂಹಿತೆಯನ್ನು ಜಾರಿಗೊಳಿಸಿದ ಪ್ರಪ್ರಥಮ ರಾಜ್ಯ ಉತ್ತರಾಖಂಡವಾಗಲಿದೆ ಎಂದು ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಘೋಷಿಸಿದ್ದಾರೆ. ಈ ಕಾನೂನಿನ ಜಾರಿಯೊಂದಿಗೆ ಸಮಾಜದಲ್ಲಿ ಎಲ್ಲ ನಾಗರಿಕರಿಗೆ ಸಮಾನ ಹಕ್ಕುಗಳು ಹಾಗೂ ಹೊಣೆಗಾರಿಕೆಗಳು ಖಾತರಿಯಾಗಲಿವೆ ಎಂದು ಅವರು ಪ್ರತಿಪಾದಿಸಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿರುವ ಪುಷ್ಕರ್ ಸಿಂಗ್ ಧಾಮಿ, ಕಾಯ್ದೆಯ ನಿಯಮಗಳ ಅನುಷ್ಠಾನಕ್ಕೆ ಅನುಮೋದನೆ ಹಾಗೂ ಸಂಬಂಧಿತ ಅಧಿಕಾರಿಗಳಿಗೆ ತರಬೇತಿ ಸೇರಿದಂತೆ ಎಲ್ಲ ಸಿದ್ಧತೆಗಳನ್ನೂ ಪೂರ್ಣಗೊಳಿಸಲಾಗಿದೆ ಎಂದು ಹೇಳಿದ್ದಾರೆ.
ರಾಷ್ಟ್ರಪತಿಗಳ ಅಂಕಿತದ ನಂತರ ಮಾರ್ಚ್ 12, 2024ರಲ್ಲಿ ಸಮಾನ ನಾಗರಿಕ ಕಾಯ್ದೆಯ ಅಧಿಸೂಚನೆಯನ್ನು ಹೊರಡಿಸಲಾಗಿತ್ತು.
Next Story





