ಮಹಿಳಾ ಮೀಸಲಾತಿ ಮಸೂದೆ ಮಂಡನೆ ಕುರಿತು ಕೇಂದ್ರ ಸಚಿವರ ಟ್ವೀಟ್, ಬಳಿಕ ಡಿಲೀಟ್!

ಹೊಸದಿಲ್ಲಿ : ಮಹಿಳಾ ಮೀಸಲಾತಿ ಮಸೂದೆ ಮಂಡನೆಗೆ ಕೇಂದ್ರ ಸಚಿವ ಸಂಪುಟ ಒಪ್ಪಿಗೆ ಕುರಿತು ಕೇಂದ್ರ ಸಚಿವ ಪ್ರಹ್ಲಾದ್ ಸಿಂಗ್ ಪಟೇಲ್ ಟ್ವೀಟ್ ಮಾಡಿ, ಬಳಿಕ ಟ್ವೀಟ್ ಅಳಿಸಿ ಹಾಕಿದ್ದಾರೆ.
ಬಹುನಿರೀಕ್ಷಿತ ಮಹಿಳೆಯರಿಗೆ 33% ಮೀಸಲಾತಿಯನ್ನು ಒದಗಿಸುವ ಮಸೂದೆಯ ಮಂಡನೆಯ ಕುರಿತು ಕೇಂದ್ರ ಸಚಿವ ಪ್ರಹ್ಲಾದ್ ಸಿಂಗ್ ಪಟೇಲ್ ಟ್ವೀಟ್ ಮಾಡಿದ್ದರು. "ಮಹಿಳಾ ಮೀಸಲಾತಿಯ ಬೇಡಿಕೆಯನ್ನು ಈಡೇರಿಸುವ ನೈತಿಕ ಧೈರ್ಯ ಮೋದಿ ಸರ್ಕಾರಕ್ಕೆ ಮಾತ್ರ ಇತ್ತು. ಇದು ಸಂಪುಟದ ಸಭೆಯಲ್ಲಿ ಸಾಬೀತಾಗಿದೆ. @narendramodi ಜೀ ಮತ್ತು ಮೋದಿ ಸರ್ಕಾರಕ್ಕೆ ಅಭಿನಂದನೆಗಳು " ಎಂದು ಅವರು ತಮ್ಮ ಪೋಸ್ಟ್ನಲ್ಲಿ ಬರೆದುಕೊಂಡಿದ್ದರು.
Next Story