ಉತ್ತರ ಪ್ರದೇಶ : ದಲಿತ ಬಾಲಕಿಯ ಅತ್ಯಾಚಾರ

ಸಾಂದರ್ಭಿಕ ಚಿತ್ರ.
ಕೌಶಂಬಿ: ಹದಿನೈದು ವರ್ಷದ ದಲಿತ ಬಾಲಕಿಯೋರ್ವಳನ್ನು ವ್ಯಕ್ತಿಯೋರ್ವ ಕಳೆದ ನಾಲ್ಕು ತಿಂಗಳಿಂದ ಅತ್ಯಾಚಾರ ನಡೆಸಿದ ಘಟನೆ ಕೌಶಂಬಿಯಲ್ಲಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿ (20) ಹಾಗೂ ಸಂತ್ರಸ್ತ ಬಾಲಕಿ ಒಂದೇ ಗ್ರಾಮಕ್ಕೆ ಸೇರಿದವರು.
ಆರೋಪಿ ಕಳೆದ ನಾಲ್ಕು ತಿಂಗಳಿಂದ ಬಾಲಕಿಯ ಅತ್ಯಾಚಾರೆಗೈಯುತ್ತಿದ್ದ. ಈ ವಿಚಾರವನ್ನು ಯಾರಿಗಾದರೂ ತಿಳಿಸಿದರೆ ಹತ್ಯೆಗೈಯಲಾಗುವುದು ಎಂದು ಬೆದರಿಕೆ ಒಡ್ಡಿದ್ದ ಎಂದು ಪೊಲೀಸ್ ಅಧೀಕ್ಷಕ ಬ್ರಿಜೇಶ್ ಕುಮಾರ್ ಶ್ರೀವಾತ್ಸವ ಅವರು ಹೇಳಿದ್ದಾರೆ.
ಬಾಲಕಿಯ ತಂದೆ ನೀಡಿದ ದೂರಿನ ಆಧಾರದಲ್ಲಿ ಆರೋಪಿಯ ವಿರುದ್ಧ ಭಾರತೀಯ ದಂಡ ಸಂಹಿತೆ ಸೆಕ್ಷನ್, ಪೋಕ್ಸೊ ಕಾಯ್ದೆ ಹಾಗೂ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ. ಆರೋಪಿ ತಲೆಮರೆಸಿಕೊಂಡಿದ್ದಾನೆ.
ಆತನನ್ನು ಸೆರೆ ಹಿಡಿಯಲು ಶೋಧ ಕಾರ್ಯಾಚರಣೆ ಆರಂಭಿಸಲಾಗಿದೆ. ಶೀಘ್ರದಲ್ಲಿ ಆತನನ್ನು ಬಂಧಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.
Next Story





