ಆಂಧ್ರ ಪ್ರದೇಶ | ಅಲ್ಲೂರಿನಲ್ಲಿ ಲಘು ಭೂಕಂಪನ : ರಿಕ್ಟರ್ ಮಾಪಕದಲ್ಲಿ 3.7 ತೀವ್ರತೆ ದಾಖಲು

ಸಾಂದರ್ಭಿಕ ಚಿತ್ರ (PTI)
ವಿಶಾಖಪಟ್ಟಣಂ: ಆಂಧ್ರ ಪ್ರದೇಶದ ವಿಶಾಖಪಟ್ಟಣಂ ನಗರದಲ್ಲಿ ಬೆಳಗಿನ ಜಾವ 4.20ರ ಸುಮಾರಿಗೆ ಲಘು ಭೂಕಂಪನ ಸಂಭವಿಸಿದೆ. ಇದರಿಂದ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ.
ಅಲ್ಲೂರಿ ಸೀತಾರಾಮ ರಾಜು ಜಿಲ್ಲೆಯ ಜಿ ಮಡುಗುಲ ಗ್ರಾಮ ಭೂಕಂಪದ ಕೇಂದ್ರ ಬಿಂದುವಾಗಿದ್ದು, ರಿಕ್ಟರ್ ಮಾಪಕದಲ್ಲಿ 3.7ರಷ್ಟು ತೀವ್ರತೆ ದಾಖಲಾಗಿದೆ. ವಿಶಾಖಪಟ್ಟಣಂ ಜಿಲ್ಲೆಯ ಹಲವಾರು ಭಾಗಗಳಲ್ಲಿ ಭೂಕಂಪನ ಸಂಭವಿಸಿದೆ.
ಮುರಳಿ ನಗರ, ಗಜುವಾಕ, ಮಧುರವಾಡ, ಎಂವಿಪಿ ಕಾಲೋನಿ ಮತ್ತು ಗೋಪಾಲಪಟ್ಟಣಂನಲ್ಲಿ ಭೂಕಂಪನದ ವೇಳೆ ಭಯಭೀತರಾದ ಜನರು ಮನೆಯಿಂದ ಹೊರ ಬಂದಿದ್ದಾರೆ.
ಭೂಕಂಪನ ಕಡಿಮೆ ತೀವ್ರತೆಯದ್ದಾಗಿತ್ತು. ಯಾವುದೇ ಜೀವ ಅಥವಾ ಆಸ್ತಿಪಾಸ್ತಿಗೆ ಹಾನಿಯಾಗಿಲ್ಲ ಎಂದು ಅಧಿಕಾರಿಗಳು ದೃಢಪಡಿಸಿದ್ದಾರೆ.
Next Story





