ಚತ್ತೀಸ್ಗಢದ ನೂತನ ಮುಖ್ಯಮಂತ್ರಿಯಾಗಿ ವಿಷ್ಣು ದೇವ್ ಸಾಯಿ ಪ್ರಮಾಣ ವಚನ ಸ್ವೀಕಾರ
ವಿಷ್ಣು ದೇವ್ ಸಾಯಿ | Photo: PTI
ರಾಯ್ಪುರ: ಚತ್ತೀಸ್ಗಢದ ನೂತನ ಮುಖ್ಯಮಂತ್ರಿಯಾಗಿ ಬಿಜೆಪಿ ನಾಯಕ ವಿಷ್ಣು ದೇವ್ ಸಾಯಿ ಅವರು ಬುಧವಾರ ಪ್ರಮಾಣ ವಚನ ಸ್ವೀಕರಿಸಿದರು.
ರಾಯ್ಪುರದಲ್ಲಿ ನಡೆದ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಬಿಜೆಪಿ ನಾಯಕರಾದ ಅರುಣ್ ಸಾವೋ ಹಾಗೂ ವಿಜಯ್ ಶರ್ಮಾ ಅವರು ಚತ್ತೀಸ್ಗಢದ ಉಪ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು.
ರಾಜ್ಯಪಾಲ ವಿಶ್ವಭೂಷಣ್ ಹರಿಚಂದನ್ ಮುಖ್ಯಮಂತ್ರಿ ವಿಷ್ಣು ದೇವ್ ಹಾಗೂ ಉಪ ಮುಖ್ಯಮಂತ್ರಿಗಳಾದ ಅರುಣ್ ಸಾವೋ ಹಾಗೂ ವಿಜಯ್ ಶರ್ಮಾ ಅವರಿಗೆ ಪ್ರಮಾಣ ವಚನ ಬೋಧಿಸಿದರು.
ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ಇತರ ಹಿರಿಯ ನಾಯಕರು ಉಪಸ್ಥಿತರಿದ್ದರು.
Next Story