ವಕ್ಫ್ ತಿದ್ದುಪಡಿ ಕಾಯಿದೆಯನ್ನು ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಗಳ ವಿಚಾರಣೆ ಮತ್ತೆ ಮುಂದೂಡಿಕೆ

Photo credit: PTI
ಹೊಸದಿಲ್ಲಿ : 2025ರ ವಕ್ಫ್ ತಿದ್ದುಪಡಿ ಕಾಯಿದೆಯ ಸಾಂವಿಧಾನಿಕತೆಯನ್ನು ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಗಳ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಮಂಗಳವಾರ(ಮೇ.20)ಕ್ಕೆ ಮುಂದೂಡಿದೆ.
2025ರ ವಕ್ಫ್ ತಿದ್ದುಪಡಿ ಕಾಯಿದೆಯ ಸಾಂವಿಧಾನಿಕತೆಯನ್ನು ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಗಳ ವಿಚಾರಣೆಯನ್ನು ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಮತ್ತು ನ್ಯಾಯಮೂರ್ತಿ ಎ.ಜಿ. ಮಸಿಹ್ ಅವರನ್ನೊಳಗೊಂಡ ಪೀಠಕ್ಕೆ ಈ ಮೊದಲು ವರ್ಗಾಯಿಸಲಾಗಿತ್ತು. ಗುರುವಾರ ವಿಚಾರಣೆಗೆ ಪಟ್ಟಿ ಮಾಡಲಾಗಿತ್ತು. ಆದರೆ ವಿಚಾರಣೆಯನ್ನು ಮುಂದಿನ ಮಂಗಳವಾರಕ್ಕೆ ಮುಂದೂಡಲಾಗಿದೆ.
Next Story





